‘ದೇವಸ್ಥಾನದ ಹಣ’ಕ್ಕೆ ಕನ್ನ ಹಾಕುವ ಬದಲು ‘ವಿಧಾನಸೌಧ’ದ ಮುಂದೆ ‘ಹುಂಡಿ’ ಇಡಿ- ಬಿ.ವೈ ವಿಜಯೇಂದ್ರ

ಬೆಂಗಳೂರು: ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವ ಸರಕಾರ, ಶ್ರೀಮಂತ ದೇವಾಲಯಕ್ಕೂ ಕನ್ನ ಹಾಕುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇವಸ್ಥಾನದ ಹಣಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಡಿ. ‘ಸರಕಾರ ನಡೆಸಲು ನಮ್ಮ ಕೈಯಲ್ಲಿ ಆಗುತ್ತಿಲ್ಲ; ಹಣಕಾಸಿನ ತೊಂದರೆ ಇದೆ’ ಎಂದು ತಿಳಿಸಿ ಬಂದ ದಾನಿಗಳಿಂದ ಹಣ ಸಂಗ್ರಹಿಸಬಹುದು ಎಂದು ಮುಖ್ಯಮಂತ್ರಿಗಳಿಗೆ ಸಲಹೆ ನೀಡುವುದಾಗಿ ತಿಳಿಸಿದರು. … Continue reading ‘ದೇವಸ್ಥಾನದ ಹಣ’ಕ್ಕೆ ಕನ್ನ ಹಾಕುವ ಬದಲು ‘ವಿಧಾನಸೌಧ’ದ ಮುಂದೆ ‘ಹುಂಡಿ’ ಇಡಿ- ಬಿ.ವೈ ವಿಜಯೇಂದ್ರ