ಉಡುಪಿ : ಬಸ್ ಗಳಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಸೂಚನೆಯಂತೆ ವಾತಾವರಣದಲ್ಲಿ ತಾಪಮಾನ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಎಲ್ಲಾ ಬಸ್ಸುಗಳಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಬಸ್ಸುಗಳ ಮಾಲೀಕರು ಕ್ರಮವಹಿಸಬೇಕು. ತಪ್ಪಿದ್ದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
ಉಡುಪಿ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿಗಳ ಇಲಾಖೆಯ ವತಿಯಿಂದ ಜಿಲ್ಲೆಯ ಪ್ರವರ್ಗ ಸಿ ಸಂಸ್ಥೆಯಾದ ಕುಂದಾಪುರ ತಾಲೂಕು ನೂಜಾಡಿ ಶ್ರೀ ನರಸಿಂಹ ದೇವಸ್ಥಾನ ಸಂಸ್ಥೆಗೆ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಸಾರ್ವಜನಿಕರು ಹಾಗೂ ಭಕ್ತಾಧಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಠ 25 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 17 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಅಂಗೈಯಲ್ಲಿ ಹಣದ ರೇಖೆ ಎಲ್ಲಿದೆ.? ಯಾವ ನಿರ್ದಿಷ್ಟ ಗುರುತು, ಯಾವ ಲಾಭವನ್ನ ಸೂಚಿಸುತ್ತೆ ಗೋತ್ತಾ.?
ಕೊಡಗು ಜಿಲ್ಲೆಯ 539.86 ಕೋಟಿ ರೂ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಿಎಂ ಬೊಮ್ಮಾಯಿ ಚಾಲನೆ