Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮೆದುಳಿನ ಜೀವಕೋಶಗಳ ಪುನರುಜ್ಜೀವನಕ್ಕೆ ವಿಟಮಿನ್ K ಆಧಾರಿತ ಹೊಸ ಸಂಯುಕ್ತಗಳ ಆವಿಷ್ಕಾರ!

Watch video: ಅಹ್ವಾನವಿಲ್ಲದೆ ಮದುವೆಗೆ ಬಂದು 10 ರೂಪಾಯಿ ಕಾಣಿಕೆ ನೀಡಿದ ವ್ಯಕ್ತಿ: ಅಸ್ಸಾಂನ ಈ ಹೃದಯಸ್ಪರ್ಶಿ ವಿಡಿಯೋ ವೈರಲ್!

QR Code Scam: ನಕಲಿ QR ಕೋಡ್ ಸ್ಕ್ಯಾನ್ ಮಾಡಿ ಹಣ ಕಳೆದುಕೊಂಡ್ರಾ? ಹೀಗೆ ಮಾಡಿದರೆ ನಿಮ್ಮ ಹಣ ವಾಪಸ್ ಸಿಗುತ್ತೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂತಾರ ದೈವಪಾತ್ರಕ್ಕೆ ಅಪಮಾನ ಆರೋಪ : ಪರಿಷ್ಕೃತ ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವೆ ಎಂದ ರಣವೀರ್ ಸಿಂಗ್
KARNATAKA

ಕಾಂತಾರ ದೈವಪಾತ್ರಕ್ಕೆ ಅಪಮಾನ ಆರೋಪ : ಪರಿಷ್ಕೃತ ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವೆ ಎಂದ ರಣವೀರ್ ಸಿಂಗ್

By ಸುರೇಶ್‌

ಬೆಂಗಳೂರು : ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರಕ್ಕೆ ಅಪಮಾನಕಾರಿ ಸನ್ನೆ ಮಾಡಿ ಮಾತನಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಕ್ಷಮಾಪಣಾ ಪತ್ರ ಸಲ್ಲಿಸುವುದಾಗಿ ನಟ ರಣವೀರ್ ಸಿಂಗ್ ಪರ ವಕೀಲರು ಹೈಕೋರ್ಟ್​ಗೆ ತಿಳಿಸಿದ್ದಾರೆ.

ವಿಚಾರಣೆಯ ವೇಳೆ ದೂರುದಾರರ ಪರ ವಕೀಲರು, ಅರ್ಜಿದಾರ ರಣವೀರ್ ಸಿಂಗ್ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಪಶ್ಚಾತ್ತಾಪವಿಲ್ಲ. ದೂರು ನೀಡಿರುವುದೇ ತಪ್ಪು ಎಂಬಂತೆ ಬಿಂಬಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಅರ್ಜಿದಾರರ ಪರ ವಕೀಲರು, ದೂರುದಾರರೊಂದಿಗೆ ಚರ್ಚಿಸಿ ಅವರಿಗೆ ತೃಪ್ತಿಯಾಗುವ ಭಾಷೆಯಲ್ಲಿಯೇ ಪರಿಷ್ಕೃತ ಪ್ರಮಾಣ ಪತ್ರ ಸಲ್ಲಿಸುವುದಾಗಿ ಹೇಳಿದರು.

ಗೋವಾದಲ್ಲಿ ಕೆಲ ತಿಂಗಳ ಹಿಂದೆ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (ಐಎಫ್ಎಫ್ಐ) ಕಾಂತಾರ ಚಾಪ್ಟರ್-1 ಚಿತ್ರದ ಚಾಮುಂಡಿ ದೈವಕ್ಕೆ ಅಪಮಾನ ಮಾಡಿದ ಆರೋಪದಡಿ ದಾಖಲಾಗಿರುವ ಖಾಸಗಿ ದೂರು ಮತ್ತು ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ, ರಣವೀರ್ ಸಿಂಗ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ವಿಚಾರಣೆ ನಡೆಸಿದರು.

ಘಟನೆ ನಡೆದ ದಿನ ನಾನು ದೈವದ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದೇನೆ ಎನ್ನುವುದು ನನಗೆ ಅರಿವಾಗಿರಲಿಲ್ಲ. ನಾನು ಮುಂಬೈನ ಸಿಂಧಿ ಕುಟುಂಬದಲ್ಲಿ ಬೆಳೆದವನು ಮತ್ತು ಈ ಸೂಕ್ಷ್ಮತೆಗಳ ಬಗ್ಗೆ ನನಗೆ ತಿಳಿದಿರಲಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಆದ್ದರಿಂದ, ಈ ಪ್ರಮಾಣಪತ್ರದ ಮೂಲಕ ನಾನು ತೀವ್ರ ವಿಷಾದ ವ್ಯಕ್ತಪಡಿಸುತ್ತೇನೆ.

ಘಟನೆಗಾಗಿ ನನ್ನ ಪ್ರಾಮಾಣಿಕ ಬೇಷರತ್ ಕ್ಷಮೆಯಾಚಿಸುತ್ತೇನೆ. ಮುಂದಿನ ದಿನಗಳಲ್ಲಿ ಮೈಸೂರಿನ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ನನ್ನ ಭಕ್ತಿಯನ್ನು ವ್ಯಕ್ತಪಡಿಸುತ್ತೇನೆ. ವಿಷಯ ತಿಳಿದ ತಕ್ಷಣ ನಾನು ಬಹಿರಂಗವಾಗಿ ಬೇಷರತ್ ಕ್ಷಮೆಯಾಚಿಸಿದ್ದೇನೆ ಎಂದು ರಣವೀರ್ ಸಿಂಗ್ ಸಲ್ಲಿಸಿರುವ ಪ್ರಮಾಣಪತ್ರದಲ್ಲಿರುವ ಅಂಶಗಳನ್ನು ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.

Share. Facebook Twitter LinkedIn WhatsApp Email

Related Posts

ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ: ಕುರಿಗಾಯಿಯಿಂದ ಸಿಎಂ ಪಟ್ಟದವರೆಗಿನ ಸ್ಫೂರ್ತಿದಾಯಕ ಪಯಣ

2 Mins Read

ಶಿವಮೊಗ್ಗ: ಮೇ.30ರಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

1 Min Read

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್: ವಿದೇಶ ಪ್ರವಾಸಕ್ಕೆ ಅನುಮತಿ

1 Min Read
Recent News

​ಮೆದುಳಿನ ಜೀವಕೋಶಗಳ ಪುನರುಜ್ಜೀವನಕ್ಕೆ ವಿಟಮಿನ್ K ಆಧಾರಿತ ಹೊಸ ಸಂಯುಕ್ತಗಳ ಆವಿಷ್ಕಾರ!

Watch video: ಅಹ್ವಾನವಿಲ್ಲದೆ ಮದುವೆಗೆ ಬಂದು 10 ರೂಪಾಯಿ ಕಾಣಿಕೆ ನೀಡಿದ ವ್ಯಕ್ತಿ: ಅಸ್ಸಾಂನ ಈ ಹೃದಯಸ್ಪರ್ಶಿ ವಿಡಿಯೋ ವೈರಲ್!

QR Code Scam: ನಕಲಿ QR ಕೋಡ್ ಸ್ಕ್ಯಾನ್ ಮಾಡಿ ಹಣ ಕಳೆದುಕೊಂಡ್ರಾ? ಹೀಗೆ ಮಾಡಿದರೆ ನಿಮ್ಮ ಹಣ ವಾಪಸ್ ಸಿಗುತ್ತೆ!

20 ವರ್ಷಗಳ ಬಳಿಕ ಮತ್ತೆ ಜಪಾನ್‌ನಿಂದ ಭಾರತೀಯ ಮಾವಿನ ಹಣ್ಣುಗಳ ಆಮದಿಗೆ ತಡೆ: ಕಾರಣವೇನು?

State News
KARNATAKA

ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ: ಕುರಿಗಾಯಿಯಿಂದ ಸಿಎಂ ಪಟ್ಟದವರೆಗಿನ ಸ್ಫೂರ್ತಿದಾಯಕ ಪಯಣ

By ಗೋಪಾಲ್‌ ಎನ್‌ KARNATAKA 2 Mins Read

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಮೇ 28, 2026) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಉಪ…

ಶಿವಮೊಗ್ಗ: ಮೇ.30ರಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್: ವಿದೇಶ ಪ್ರವಾಸಕ್ಕೆ ಅನುಮತಿ

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.