ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯದ ಭಾವುಟ ಹಾರಿಸಿ, ಕಣಕ್ಕೆ ಇಳಿದಿದ್ದಂತ ನೈರುತ್ಯ ಪದವೀಧರರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಶಿವಮೊಗ್ಗದ ಎಸ್.ಪಿ ದಿನೇಶ್ ಸೇರಿದಂತೆ ಐವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ.

ಈ ಕುರಿತಂತೆ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಅವರು ಆದೇಶಿಸಿದ್ದು, ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಎಸ್.ಪಿ ದಿನೇಶ್ ಕುಮಾರ್, ಬೆಂಗಳೂರು ಪದವೀಧರರ ಕ್ಷೇತ್ರದ ಫರ್ನಾಂಡಿಸ್ ಲಾರೆನ್ಸ್, ನೈರುತ್ಯ ಶಿಕ್ಷಕರ ಕ್ಷೇತ್ರದ ಚಿಕ್ಕಮಗಳೂರಿನ ಬಿಆರ್ ನಂಜೇಶ್, ಆಗ್ನೇಯ ಶಿಕ್ಷಕರ ಕ್ಷೇತ್ರದ ಚಿತ್ರದುರ್ಗದ ಲೋಕೇಶ್ ತಾಳಿಕಟ್ಟೆ, ಬೆಂಗಳೂರಿನ ವಿನೋದ್ ಶಿವರಾಜ್ ಅವರನ್ನು ಉಚ್ಛಾಟಿಸಿ ಆದೇಶಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿ ಪಕ್ಷದ ಶಿಸ್ತು ಉಲ್ಲಂಘಿಸಿದ್ದರಿಂದ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಿರೋದಾಗಿ ತಿಳಿಸಿದ್ದಾರೆ.

ರಾಜ್ಯದ ರೈತರಿಗೆ ‘ನೆಮ್ಮದಿ ಸುದ್ದಿ’ ; ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸೂಚನೆ

ರಾಜ್ಯದ ರೈತರಿಗೆ ‘ನೆಮ್ಮದಿ ಸುದ್ದಿ’ ; ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸೂಚನೆ

Share.
Exit mobile version