ಬೆಂಗಳೂರು: ಗೃಹಸಚಿವರು ( Home Minister ) ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಬಿಜೆಪಿ ಗೂಂಡಾಪಡೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಮೇಲೆ ಎರಡೆರಡು ಬಾರಿ ಮೊಟ್ಟೆ ಎಸೆಯಲು ಪೊಲೀಸರು ಅವಕಾಶ ಕೊಡುತ್ತಾರೆ ಎಂದರೆ ಇದು ಸರ್ಕಾರಿ ಪ್ರಾಯೋಜಿತ ದಾಳಿಯಲ್ಲವೇ? ಗುಪ್ತಚರ ಇಲಾಖೆ ICUನಲ್ಲಿದೆ, ಸರ್ಕಾರ ಸತ್ತಿದೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ( Congress ) ಕಿಡಿಕಾರಿದೆ.
BIGG NEWS : ʻ ಗಾಂಧಿಯನ್ನು ಕೊಂದವರು ನನ್ನನ್ನು ಬಿಡ್ತಾರಾ ʼ : ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ ಆಕ್ರೋಶ
ಈ ಕುರಿತಂತೆ ಸರಣಿ ಟ್ವಿಟ್ ಮಾಡಿದ್ದು, ಸಿದ್ಧರಾಮಯ್ಯ ( Siddaramaiah ) ಅವರು ಸಾಗುವ ದಾರಿಯಲ್ಲಿ ಹಾಗೂ ಅವರ ಆಗಮಿಸುವ ಸ್ಥಳದಲ್ಲೇ ಬಿಜೆಪಿ ಗೂಂಡಾಗಳು ಜಾಮಾಯಿಸಿದ್ದರೂ, ಮುನ್ಸೂಚನೆ ಇದ್ದರೂ ಪೊಲೀಸರು ( Police ) ಅವರನ್ನು ವಶಕ್ಕೆ ಪಡೆಯದೆ ಅವರ ರಕ್ಷಣೆಗೇ ನಿಂತಿದ್ದರು. ಗೂಂಡಾಗಳಿಗೆ ರಕ್ಷಣೆ ನೀಡುವುದು ಸರ್ಕಾರದ ನಿರ್ದೇಶನವಾಗಿತ್ತೇ? ಕರ್ತವ್ಯಲೋಪವೆಸಗಿದ ಕೊಡಗು ಜಿಲ್ಲಾ SPಯನ್ನು ಕೂಡಲೇ ಅಮಾನತುಗೊಳಿಸಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಒತ್ತಾಯಿಸಿದೆ.
'@siddaramaiah ಅವರು ಸಾಗುವ ದಾರಿಯಲ್ಲಿ ಹಾಗೂ ಅವರ ಆಗಮಿಸುವ ಸ್ಥಳದಲ್ಲೇ ಬಿಜೆಪಿ ಗೂಂಡಾಗಳು ಜಾಮಾಯಿಸಿದ್ದರೂ, ಮುನ್ಸೂಚನೆ ಇದ್ದರೂ ಪೊಲೀಸರು ಅವರನ್ನು ವಶಕ್ಕೆ ಪಡೆಯದೆ ಅವರ ರಕ್ಷಣೆಗೇ ನಿಂತಿದ್ದರು.
ಗೂಂಡಾಗಳಿಗೆ ರಕ್ಷಣೆ ನೀಡುವುದು ಸರ್ಕಾರದ ನಿರ್ದೇಶನವಾಗಿತ್ತೇ?
ಕರ್ತವ್ಯಲೋಪವೆಸಗಿದ ಕೊಡಗು ಜಿಲ್ಲಾ SPಯನ್ನು ಕೂಡಲೇ ಅಮಾನತುಗೊಳಿಸಿ.
— Karnataka Congress (@INCKarnataka) August 19, 2022
ಬಂಧಿಸಲಾಗಿದ್ದ ಸಿದ್ಧರಾಮಯ್ಯ ಅವರ ಮೇಲೆ ದಾಳಿ ಮಾಡಿದ ಗೂಂಡಾಗಳನ್ನು ರಾತ್ರೋರಾತ್ರಿ ಶಾಸಕ ಅಪ್ಪಚ್ಚು ರಂಜನ್ ಬಿಡಿಸಿಕೊಂಡು ಬಂದಿದ್ದಾರೆ. ಅರಗ ಜ್ಞಾನೇಂದ್ರ ಅವರೇ, ದಾಳಿಕೋರರ ಮೇಲೆ ಗಂಭೀರ ಪ್ರಕರಣ ದಾಖಲಿಸದಿರುವುದೇಕೆ? ಇದು ಸರ್ಕಾರಿ ಪ್ರಾಯೋಜಿತ ಕೃತ್ಯವಲ್ಲವೇ? ಇದು ವಿಪಕ್ಷ ನಾಯಕರ ಪ್ರಾಣ ಹಾನಿಯ ಪ್ರಯತ್ನ ಎಂದೇ ಭಾವಿಸಬೇಕಾಗುತ್ತದೆ ಎಂದು ಹೇಳಿದೆ.
ಬಂಧಿಸಲಾಗಿದ್ದ @siddaramaiah ಅವರ ಮೇಲೆ ದಾಳಿ ಮಾಡಿದ ಗೂಂಡಾಗಳನ್ನು ರಾತ್ರೋರಾತ್ರಿ ಶಾಸಕ ಅಪ್ಪಚ್ಚು ರಂಜನ್ ಬಿಡಿಸಿಕೊಂಡು ಬಂದಿದ್ದಾರೆ.@JnanendraAraga ಅವರೇ, ದಾಳಿಕೋರರ ಮೇಲೆ ಗಂಭೀರ ಪ್ರಕರಣ ದಾಖಲಿಸದಿರುವುದೇಕೆ?
ಇದು ಸರ್ಕಾರಿ ಪ್ರಾಯೋಜಿತ ಕೃತ್ಯವಲ್ಲವೇ?ಇದು ವಿಪಕ್ಷ ನಾಯಕರ ಪ್ರಾಣ ಹಾನಿಯ ಪ್ರಯತ್ನ ಎಂದೇ ಭಾವಿಸಬೇಕಾಗುತ್ತದೆ.
— Karnataka Congress (@INCKarnataka) August 19, 2022
ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರ ರಕ್ಷಣೆ ಸರ್ಕಾರದ ಮುಖ್ಯ ಜವಾಬ್ದಾರಿಗಳಲ್ಲಿ ಒಂದು. ಅತಿವೃಷ್ಟಿ ಹಾನಿ ವೀಕ್ಷಣೆಗೆ ತೆರಳಿದ್ದ ವಿಪಕ್ಷ ನಾಯಕರಿಗೆ ರಕ್ಷಣೆ ಇಲ್ಲ ಎಂದಾದರೆ ಜನಸಾಮಾನ್ಯರ ರಕ್ಷಣೆ ಈ ಸರ್ಕಾರದಿಂದ ಸಾಧ್ಯವೇ? ಗೃಹಸಚಿವರು ಇನ್ನೂ ಹುದ್ದೆಯಲ್ಲಿರಲು ಅರ್ಹರೇ? ಮುಖ್ಯಮಂತ್ರಿಗಳು ಜನತೆಗೆ ಉತ್ತರಿಸಬೇಕು ಎಂದು ಹೇಳಿದೆ.
ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ @siddaramaiah ಅವರ ರಕ್ಷಣೆ ಸರ್ಕಾರದ ಮುಖ್ಯ ಜವಾಬ್ದಾರಿಗಳಲ್ಲಿ ಒಂದು.
ಅತಿವೃಷ್ಟಿ ಹಾನಿ ವೀಕ್ಷಣೆಗೆ ತೆರಳಿದ್ದ ವಿಪಕ್ಷ ನಾಯಕರಿಗೆ ರಕ್ಷಣೆ ಇಲ್ಲ ಎಂದಾದರೆ ಜನಸಾಮಾನ್ಯರ ರಕ್ಷಣೆ ಈ ಸರ್ಕಾರದಿಂದ ಸಾಧ್ಯವೇ?
ಗೃಹಸಚಿವರು ಇನ್ನೂ ಹುದ್ದೆಯಲ್ಲಿರಲು ಅರ್ಹರೇ?
ಮುಖ್ಯಮಂತ್ರಿಗಳು ಜನತೆಗೆ ಉತ್ತರಿಸಬೇಕು.— Karnataka Congress (@INCKarnataka) August 19, 2022
ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಬಿಜೆಪಿ ಗೂಂಡಾಪಡೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಮೇಲೆ ಎರಡೆರಡು ಬಾರಿ ಮೊಟ್ಟೆ ಎಸೆಯಲು ಪೊಲೀಸರು ಅವಕಾಶ ಕೊಡುತ್ತಾರೆ ಎಂದರೆ ಇದು ಸರ್ಕಾರಿ ಪ್ರಾಯೋಜಿತ ದಾಳಿಯಲ್ಲವೇ? ಗುಪ್ತಚರ ಇಲಾಖೆ ICUನಲ್ಲಿದೆ, ಸರ್ಕಾರ ಸತ್ತಿದೆ ಎಂದು ಕಿಡಿಕಾರಿದೆ.
ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ?@BJP4Karnataka ಗೂಂಡಾಪಡೆ ವಿಪಕ್ಷ ನಾಯಕ @siddaramaiah ಅವರ ಮೇಲೆ ಎರಡೆರಡು ಬಾರಿ ಮೊಟ್ಟೆ ಎಸೆಯಲು ಪೊಲೀಸರು ಅವಕಾಶ ಕೊಡುತ್ತಾರೆ ಎಂದರೆ ಇದು ಸರ್ಕಾರಿ ಪ್ರಾಯೋಜಿತ ದಾಳಿಯಲ್ಲವೇ?
ಗುಪ್ತಚರ ಇಲಾಖೆ ICUನಲ್ಲಿದೆ, ಸರ್ಕಾರ ಸತ್ತಿದೆ.
— Karnataka Congress (@INCKarnataka) August 19, 2022