ಬೆಂಗಳೂರು: ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಅನೇಕ ಪೊಲೀಸರು ವರ್ಗಾವಣೆಯ ನಿರೀಕ್ಷೆಯಲ್ಲಿದ್ದರು. ಇಂತಹ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರದಿಂದ ಅಂತರ್ ಜಿಲ್ಲಾ ವರ್ಗಾವಣೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ರಾಜ್ಯದಲ್ಲಿನ ಪೊಲೀಸ್ ಸಿಬ್ಬಂದಿಗಳನ್ನು ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡುವಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಜಿ, ಐಜಿಪಿಗೆ ಸೂಚಿಸಲಾಗಿದೆ ಎಂದಿದ್ದಾರೆ.
ಅರ್ಹ ಪೊಲೀಸ್ ಸಿಬ್ಬಂದಿಗಳನ್ನು ಪತಿ-ಪತ್ನಿ ಪ್ರಕರಣ ಸೇರಿದಂತೆ ವಿವಿಧ ಕಾರಣಗಳಿಂದ ಅಂತರ ಜಿಲ್ಲಾ ವರ್ಗಾವಣೆಗೆ ಕ್ರಮ ವಹಿಸುವಂತೆ ಡಿಜಿ, ಐಜಿಪಿ ಅಲೋಕ್ ಮೋಹನ್ ಅವರಿಗೆ ಸೂಚನೆ ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಈ ಹಿನ್ನಲೆಯಲ್ಲಿ ಕೆಲವೇ ದಿನಗಳಲ್ಲಿ ಪತಿ-ಪತ್ನಿ ಪ್ರಕರಣದಲ್ಲಿ ಪೊಲೀಸರ ಅಂತರ ಜಿಲ್ಲಾ ವರ್ಗಾವಣೆ ಆರಂಭಗೊಳ್ಳಲಿದ್ದು, ಅಂತರ್ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಸಿಕ್ಕಂತೆ ಆಗಿದೆ.
ಶಿವಮೊಗ್ಗ: ಫೆ.28ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
BREAKING: ನಾಳೆ ‘ರಾಜ್ಯಸಭಾ ಚುನಾವಣೆ’ ಹಿನ್ನಲೆ: ಇಂದಿನಿಂದ ಫೆ.28ರವರೆಗೆ ‘ವಿಧಾನಸೌಧ’ದ ಸುತ್ತ ‘ನಿಷೇಧಾಜ್ಞೆ’ ಜಾರಿ