Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವರದಿ ಬಂದ ತಕ್ಷಣ ರಾಜ್ಯದಲ್ಲಿ ‘ಒಳ ಮೀಸಲಾತಿ’ ಜಾರಿ ಮಾಡಲಾಗುವುದು : ಸಿಎಂ ಸಿದ್ದರಾಮಯ್ಯ ಹೇಳಿಕೆ
KARNATAKA

BREAKING : ವರದಿ ಬಂದ ತಕ್ಷಣ ರಾಜ್ಯದಲ್ಲಿ ‘ಒಳ ಮೀಸಲಾತಿ’ ಜಾರಿ ಮಾಡಲಾಗುವುದು : ಸಿಎಂ ಸಿದ್ದರಾಮಯ್ಯ ಹೇಳಿಕೆ

By kannadanewsnow0529/10/2024 2:45 PM

ಬೆಂಗಳೂರು : ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಾಮಾಜಿಕ ನ್ಯಾಯ ಸುಮ್ಮ ಸುಮ್ಮನೆ ಬರುವುದಿಲ್ಲ. ಇಂಥಾ ತೀರ್ಮಾನ ಮಾಡಬೇಕಾಗುತ್ತದೆ.ಒಳಮೀಸಲಾತಿಗಾಗಿ ಮಾದಿಗ ಸಮುದಾಯ ದಶಕಗಳಿಂದ ಹೋರಾಟ ನಡೆಸಿದೆ. ಈಗ ಸುಪ್ರೀಂಕೋರ್ಟ್ ಕೂಡ ತೀರ್ಪು ನೀಡಿದೆ. ನಾವು ಜಾರಿ ಮಾಡಲೇಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಒಳಮೀಸಲಾತಿ ಕುರಿತ ಸಚಿವ ಸಂಪುಟದ ನಿರ್ಣಯಕ್ಕಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನ ಅಭಿನಂದಿಸಿದ ಮಾದಿಗ ಸಮುದಾಯದ ರಾಜ್ಯ ಮುಖಂಡರು, ಒಳಮೀಸಲಾತಿ ಹೋರಾಟದ ನಾಯಕರು, ಪದಾಧಿಕಾರಿಗಳು ಮತ್ತು ಸಮುದಾಯದ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, 101 ಪರಿಶಿಷ್ಟ ಜಾತಿಗಳಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ. ಎಲ್ಲರನ್ನೂ ಸಮಾಧಾನ ಮಾಡುವುದು ಸಾಧ್ಯವಿಲ್ಲದಿದ್ದರೂ, ಶೇ.90 ರಷ್ಟು ಸಮುದಾಯಗಳಿಗೆ ಸಮಾಧಾನ‌ ಆಗುವ ತೀರ್ಮಾನ ತೆಗೆದುಕೊಳ್ಳಬೇಕಿದೆ. ಇದನ್ನು ನಮ್ಮ‌ ಸರ್ಕಾರ ಮಾಡಲಿದೆ ಎಂದರು.

ಗೃಹ ಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ನಡೆದ ದಲಿತ ಶಾಸಕರ ಸಭೆಯಲ್ಲಿ, “ಒಳ ಮೀಸಲಾತಿಗೆ ತಮ್ಮ ವಿರೋಧ ಇಲ್ಲ” ಎನ್ನುವ ನಿರ್ಣಯ ಮಾಡಿದ್ದಾಗಿದೆ. ಹೀಗಾಗಿ ಎಲ್ಲರೂ ಒಳಮೀಸಲಾತಿ ಪರವಾಗಿದ್ದಾರೆ.
ತೆಲಂಗಾಣ ಸರ್ಕಾರ ಈಗಾಗಲೇ ಒಳಮೀಸಲಾತಿ ಜಾರಿ ಸಂಬಂಧ ಒಂದು ಆಯೋಗ ರಚನೆ ಮಾಡಿದೆ. ನಾನು ತೆಲಂಗಾಣ ಸಿಎಂ ಜೊತೆಗೂ ಇತ್ತೀಚಿಗೆ ಮೈಸೂರಿನಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಹರಿಯಾಣದಲ್ಲೂ ಕ್ಯಾಬಿನೆಟ್ ನಿರ್ಣಯ ಆಗಿದೆ. ಆದರೆ ಆದೇಶ ಆಗಿಲ್ಲ. ನಮ್ಮ ಕ್ಯಾಬಿನೆಟ್ ನಲ್ಲೂ ಹಿಂದೊಮ್ಮೆ ಅನೌಪಚಾರಿಕ ಚರ್ಚೆ ಮಾಡಿದ್ದೆ.

ನಿನ್ನೆಯ ಕ್ಯಾಬಿನೆಟ್ ನಲ್ಲಿ ಸಚಿವರಾದ ಹೆಚ್.ಸಿ. ಮಹದೇವಪ್ಪ ಅವರು ಒಳಮೀಸಲಾತಿ ವಿಚಾರ ಪ್ರಸ್ತಾಪಿಸಿದರು. ಸಚಿವರಾದ ಪ್ರಿಯಾಂಕ್ ಖರ್ಗೆ, ತಿಮ್ಮಾಪುರ, ಮುನಿಯಪ್ಪ ಅವರು ಎಲ್ಲರೂ ಮಾತನಾಡಿದರು. ಎಲ್ಲರೂ ಒಳ ಮೀಸಲಾತಿಗೆ ಒಪ್ಪಿಕೊಂಡರು. ಯಾರದ್ದೂ ವಿರೋಧ ಇರಲಿಲ್ಲ. ಆದರೆ ಸೂಕ್ತ ಡಾಟಾ ಅಗತ್ಯವಿದೆ ಎನ್ನುವ ಸಂಗತಿ ಕೂಡ ಚರ್ಚೆಗೆ ಬಂದಿದೆ.

ಹೀಗಾಗಿ ಆಯೋಗ ರಚನೆ ಮಾಡಿದ್ದೇವೆ. ಆಯೋಗ ಎಲ್ಲ ವರದಿಗಳನ್ನೂ ಅಧ್ಯಯನ ಮಾಡಿ ಅಗತ್ಯ ಅಂಕಿ ಅಂಶಗಳ ಸಮೇತ ವರದಿ ನೀಡುತ್ತದೆ. ವರದಿ ಬರುವವರೆಗೂ ಹೊಸದಾಗಿ ಯಾವ ನೇಮಕಾತಿ ನೋಟಿಫಿಕೇಶನ್ ಹೊರಡಿಸುವುದು ಬೇಡ ಎನ್ನುವ ನಿರ್ಣಯ ಆಗಿದೆ. ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ.

ಸಮುದಾಯಗಳನ್ನು ಪರಸ್ಪರ ಸುಳ್ಳುಗಳ ಮೂಲಕ ಎತ್ತಿಕಟ್ಟುವ ಬಿಜೆಪಿ ಕೇಂದ್ರದಲ್ಲಿ ಏಕೆ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆ ಜಾರಿ ಮಾಡಿಲ್ಲ? ಬಿಜೆಪಿ ಆಡಳಿತದಲ್ಲಿರುವ ಯಾವ ರಾಜ್ಯಗಳಲ್ಲೂ ನಾವು ಜಾರಿ ಮಾಡಿದ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆಯನ್ನು ಅವರೇಕೆ ಮಾಡಲಿಲ್ಲ ಹೇಳಿ. ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ.

ಬಿಜೆಪಿಯ ಯಾವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ. ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಮ್ಮ ರಾಜ್ಯ ಮಾತ್ರ. ಇದು ನನ್ನ ಕಮಿಟ್ ಮೆಂಟ್. ರಾಜಕಾರಣಕ್ಕಾಗಿ ಇದೆಲ್ಲಾ ಮಾಡಿದ್ದಲ್ಲ. ಇದರ ಮುಂದುವರೆದ ಭಾಗವಾಗಿಯೇ ಒಳಮೀಸಲಾತಿ ಜಾರಿಗೆ ಮುಂದಾಗಿದ್ದೇವೆ.ಹೊಸ ಆಯೋಗದ ವರದಿ ನಿಗದಿತ ಸಮಯದೊಳಗೆ ಬರುವ ನಿರೀಕ್ಷೆ ಇದೆ. ವರದಿ ಬಂದ ತಕ್ಷಣ ಒಳ ಮೀಸಲಾತಿ ಜಾರಿ ಮಾಡಲಾಗುವುದು ಎಂದು ತಿಳಿಸಿದರು.

ಸಮುದಾಯಗಳನ್ನು ಪರಸ್ಪರ ಸುಳ್ಳುಗಳ ಮೂಲಕ ಎತ್ತಿಕಟ್ಟುವ ಬಿಜೆಪಿ ಕೇಂದ್ರದಲ್ಲಿ ಏಕೆ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆ ಜಾರಿ ಮಾಡಿಲ್ಲ? ಬಿಜೆಪಿ ಆಡಳಿತದಲ್ಲಿರುವ ಯಾವ ರಾಜ್ಯಗಳಲ್ಲೂ ನಾವು ಜಾರಿ ಮಾಡಿದ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆಯನ್ನು ಅವರೇಕೆ ಮಾಡಲಿಲ್ಲ ಹೇಳಿ. ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ. ಬಿಜೆಪಿಯ ಯಾವ… pic.twitter.com/KvcYMZS3yV

— Siddaramaiah (@siddaramaiah) October 29, 2024

Share. Facebook Twitter LinkedIn WhatsApp Email

Related Posts

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

11/04/2026 8:25 PM2 Mins Read

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM2 Mins Read

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM2 Mins Read
Recent News

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
nitish kumar

ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಏಪ್ರಿಲ್ 13ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ; ಹೊಸ ನಾಯಕನ ಆಯ್ಕೆಗೆ ಕ್ಷಣಗಣನೆ!

11/04/2026 8:29 PM
State News
KARNATAKA

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

By kannadanewsnow0911/04/2026 8:25 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ವ್ಯಾಪ್ತಿಯಲ್ಲಿ ರಸ್ತೆ…

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.