ತುಮಕೂರು : ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಇಂದು ಕುಣಿಗಲ್ ನಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದು, ತುಮಕೂರು ಜಿಲ್ಲೆಯ ಅಭಿವೃದ್ದಿ ದೃಷ್ಟಿ ಹಿನ್ನೆಲೆ ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು. ಇದರ ಜೊತೆ ಒಂದು ಸಾವಿರ ಎಕರೆಯಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಲಾಗುತ್ತದೆ, ಇದರಿಂದ ಜನರಿಗೆ ಉದ್ಯೋಗ ಕೂಡ ಸಿಗಲಿದೆ ಎಂದು ಹೇಳಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ಕಣ್ಣಿನ ಆಸ್ಪತ್ರೆ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ಕಣ್ಣಿನ ಆಸ್ಪತ್ರೆ ತೆರೆಯವುದಾಗಿ ಡಾ. ಭುಜಂಗ ಶೆಟ್ಟಿ ಹೇಳಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ದೇವಾಲಯ ಉಚಿತ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ನಂತರ ಮಾತನಾಡಿದರು. :ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ಕಣ್ಣಿನ ಆಸ್ಪತ್ರೆ ತೆರೆಯವುದಾಗಿ ಡಾ. ಭುಜಂಗ ಶೆಟ್ಟಿ ಹೇಳಿದ್ದಾರೆ, ಅವರ ಯೋಜನೆ ಬೇಗ ಈಡೇರಲಿ ಎಂದು ಸಿಎಂ ಹೇಳಿದರು. ಡಾ. ಭುಜಂಗ ಶೆಟ್ಟಿಯವರು ತಮ್ಮ ವೃತ್ತಿಯಲ್ಲಿ ಯಶಸ್ವಿಯಾಗಿದ್ದು, ಅವರಿಗೆ ನಾನು ಎಂಬ ಭಾವನೆ ಇಲ್ಲ ಎಂದು ಹೇಳಿದರು.

ಬಡವರಿಗೆ ಉಚಿತ ಕಣ್ಣಿನ ಚಿಕಿತ್ಸೆ
ಇನ್ನೂ, ಬಡವರಿಗೆ ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಯೋಜನೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಯಾಗಲಿದ್ದು, ಜನವರಿಯಲ್ಲಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ತುಮಕೂರಿನ ಕುಣಿಗಲ್ ನಲ್ಲಿ ಇಂದು ನಡೆಯುತ್ತಿರುವ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದರು.ನಮ್ಮ ಸರ್ಕಾರ ಕಣ್ಣಿನ ಚಿಕಿತ್ಸೆಗೆ ಯೋಜನೆ ರೂಪಿಸಿದೆ, ಈ ಯೋಜನೆ ಜನವರಿಯಲ್ಲಿ ಚಾಲನೆಗೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಈ ಯೋಜನೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಯಾಗಿದೆ ಎಂದು ಬೊಮ್ಮಾಯಿ ಹೇಳಿದರು. ಜನಸಂಕಲ್ಪ ಯಾತ್ರೆ ನಮ್ಮ ನಿರೀಕ್ಷೆ ಮೀರಿ ಮುನ್ನುಗ್ಗುತ್ತಿದೆ, ಎಲ್ಲೆಡೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದರು.

ಕಾಂಗ್ರೆಸ್ ವಿರುದ್ಧ ಗುಡುಗಿದ ಬೊಮ್ಮಾಯಿ ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್ ಆಗಿದೆ.ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ನ್ನು ಬಿಜೆಪಿ ಕ್ಲೀನ್ ಸ್ವಿಪ್ ಮಾಡಲಿದೆ ಎಂದರು.

ಚಿತ್ರದುರ್ಗದಲ್ಲಿ ಜ.8ರಂದು ‘ದಲಿತ ಐಕ್ಯತಾ ಸಮಾವೇಶ’ : ಜಿ. ಪರಮೇಶ್ವರ್

BIGG NEWS : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ‘ಕಣ್ಣಿನ ಆಸ್ಪತ್ರೆ’ : ಸಿಎಂ ಬೊಮ್ಮಾಯಿ ಘೋಷಣೆ

Share.
Exit mobile version