ರಾಮನಗರ : ಪ್ರಸಕ್ತ ವರ್ಷದಿಂದಲೇ ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಘೋಷಣೆ ಮಾಡಿದರು.
breaking news: ಗುಜರಾತ್ ಗಲಭೆ ಪ್ರಕರಣದಲ್ಲಿ ಮೋದಿಗೆ ಕ್ಲೀನ್ ಚಿಟ್
ಮಾಗಡಿ ಪಟ್ಟಣದಲ್ಲಿ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಏರ್ಪಡಿಸಿದ್ದ ಕೆಂಪೇಗೌಡರ 513ನೇ ಜಯಂತಿಯಲ್ಲಿ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರ ಗೌರವಾರ್ಥ ಈ ವರ್ಷದಿಂದ ಮೂವರು ಸಾಧಕರಿಗೆ ತಲಾ 5 ಲಕ್ಷ ರೂ. ನಗದು ಸಹಿತವಾದ ಅಂತಾರಾಷ್ಟ್ರೀಯ ಪ್ರಶಸ್ತಿ ಕೊಡಲಾಗುವುದು ಎಂದು ತಿಳಿಸಿದ್ದಾರೆ.
ಕೆಂಪೇಗೌಡರು ಕಟ್ಟಿಸಿರುವ ಇಲ್ಲಿನ ಐತಿಹಾಸಿಕ ಕೋಟೆಯನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡಿ, ಸಂರಕ್ಷಿಸಲಾಗುವುದು, ಕೆಂಪೇಗೌಡರಿಗೆ ಸೂಕ್ತ ಗೌರವ ನೀಡುವ ಉದ್ದೇಶದಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಬೃಹತ್ ಪ್ರತಿಮೆ ಸ್ಥಾಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.
2011ರ ಜನಗಣತಿ ಆಧರಿಸಿ ಬಿಬಿಎಂಪಿ ವಾರ್ಡ್ ಗಳ ಮರುವಿಂಗಡಣೆ – ಮುಖ್ಯ ಆಯುಕ್ತ ತುಷಾರ್ ಗಿರಿನಾಥ್