ಬೆಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರ ಬೆಳಗ್ಗೆ 9.30 ರಿಂದ 10 ಗಂಟೆಯ ವರೆಗೆ ಬೀದರ್ನಿಂದ ಚಾಮರಾಜನಗರದ ವರೆಗೆ 2,500 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಈ ದಿನವನ್ನು ಮತ್ತಷ್ಟು ಸ್ಮರಣೀಯವಾಗಿಸಲು ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಅತ್ಯಾಕರ್ಷಕ ಪ್ರಶಸ್ತಿಗಳು ಹಾಗೂ ಬಹುಮಾನಗಳು ಇರಲಿವೆ. ಹೆಚ್ಚಿನ ಮಾಹಿತಿಗೆ https://democracydaykarnataka.in/kn ವೆಬ್ಸೈಟ್ಗೆ ಭೇಟಿ ನೀಡಬಹುದು.