ಮಂಡ್ಯ : ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾ ಪ್ರಭುತ್ವ ಜಾಗೃತಿ ಮೂಡಿಸುವ ಸಲುವಾಗಿ ಬೀದರ್ ನಿಂದ ಚಾಮರಾಜನಗರ ಜಿಲ್ಲೆಯವರೆಗೆ ಹಮ್ಮಿಕೊಂಡಿದ್ದ ಮಾನವ ಸರಪಳಿ ನಿರ್ಮಾಣದಲ್ಲಿ ಅತಿ ಹೆಚ್ಚು ಖಾಸಗಿ ಕಂಪನಿಗಳ ಭಾಗವಹಿಸುವಿಕೆ ವಿಭಾಗದಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ.
ಜಿಲ್ಲಾಧಿಕಾರಿ ಡಾ: ಕುಮಾರ ಅವರಿಗೆ ಅಭಿನಂದನೆ ಸಲ್ಲಿಸಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿವಾರ್ಹಕ ನಿರ್ದೇಶಕ ಕಾಂತರಾಜು ಅವರು ನವೆಂಬರ್ 26 ರಂದು ಬೆಳಗ್ಗೆ 11ಗಂಟೆಗೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿರುವ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.