ಬೆಂಗಳೂರು: ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024 ಕಾರ್ಯಕ್ರಮವನ್ನು ಜನವರಿ 05 ರಿಂದ 07 ರವರೆಗೆ ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.
ಜನವರಿ 05 ರಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಆಗಮಿಸುವರು. ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವರಾದ ಪ್ರಲ್ಹಾದ ಜೋಶಿ ಅವರು ಅಂತರರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನೆಯನ್ನು ನೆರವೇರಿಸುವರು. ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ವಸ್ತು ಪ್ರದರ್ಶನ ಉದ್ಘಾಟನೆ ನೆರವೇರಿಸುವರು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ರೈತರ ಕಾರ್ಯಾಗಾರ ಉದ್ಘಾಟಿಸುವರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಎಲೆಕ್ಟಾçನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್ ಆಗಮಿಸುವರು. ಕೃಷಿ ಸಚಿವರು ಹಾಗೂ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024ರ ಉಸ್ತುವಾರಿ ಸಮಿತಿ ಅಧ್ಯಕ್ಷರಾದ ಎನ್. ಚಲುವರಾಯಸ್ವಾಮಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ಶಾಸಕರಾದ ಡಾ.ಅಶ್ವತ್ಥನಾರಾಯಣ ಸಿ.ಎನ್. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.