Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ `ಸರ್ಕಾರಿ ನೌಕರರ’ ಮೇಲೆ ಡಿಜಿಟಲ್ ಕಣ್ಗಾವಲು : ಇನ್ನು 10 ಗಂಟೆ ಬಳಿಕ ಹಾಜರಾತಿಗೆ ಅವಕಾಶ ಇಲ್ಲ.!

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೇ.26ರಿಂದ ಬೆಂಗಳೂರಲ್ಲಿ ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌
SPORTS

ಮೇ.26ರಿಂದ ಬೆಂಗಳೂರಲ್ಲಿ ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಭಾರತೀಯ ಪ್ಯಾರಾಲಿಂಪಿಕ್ಸ್‌ ಸಮಿತಿ(ಪಿಸಿಐ) ಆಯೋಜಿಸುವ 8ನೇ ಆವೃತ್ತಿಯ ಭಾರತೀಯ ಓಪನ್‌ ಪ್ಯಾರಾ ಅಥ್ಲೆಟಿಕ್ಸ್ ಅಂತಾರಾಷ್ಟ್ರೀಯ್‌ ಚಾಂಪಿಯನ್‌ಶಿಪ್‌ ಮೇ 26ರಿಂದ 28ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ 3 ದಿನಗಳ ಕಾಲ ನಡೆಯಲಿರುವ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಸೇರಿ ಒಟ್ಟು 5 ರಾಷ್ಟ್ರಗಳ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ.

ಭಾನುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತೀಯ ಪ್ಯಾರಾಲಿಂಪಿಕ್ಸ್‌ ಸಮಿತಿ ಅಧ್ಯಕ್ಷ ದೇವೆಂದ್ರ ಝಝಾರಿಯಾ ಅವರು ಚಾಂಪಿಯನ್‌ಶಿಪ್‌ ಬಗ್ಗೆ ಮಾಹಿತಿ ನೀಡಿದರು. ಈ ಚಾಂಪಿಯನ್‌ಶಿಪ್‌, ಅಕ್ಟೋಬರ್‌ 18ರಿಂದ 24ರ ವರೆಗೆ ಜಪಾನ್‌ನಲ್ಲಿ ನಡೆಯಲಿರುವ 5ನೇ ಆವೃತ್ತಿಯ ಏಷ್ಯನ್‌ ಪ್ಯಾರಾ ಗೇಮ್ಸ್‌ಗೆ ಆಯ್ಕೆ ಟ್ರಯಲ್ಸ್‌ ಆಗಿರಲಿದೆ ಎಂದು ಅವರು ತಿಳಿಸಿದರು.

ಚಾಂಪಿಯನ್‌ಶಿಪ್‌ನಲ್ಲಿ ಭಾರತದ 341 ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಪ್ಯಾರಾಲಿಂಪಿಕ್ಸ್‌, ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌, ಏಷ್ಯನ್‌ ಪ್ಯಾರಾ ಗೇಮ್ಸ್‌ ಪದಕ ವಿಜೇತರು ಕೂಟದಲ್ಲಿ ಭಾಗವಹಿಸಲಿದ್ದಾರೆ. ಎರಡು ಬಾರಿ ಪ್ಯಾರಾಲಿಂಪಿಕ್ಸ್‌ ಹಾಗೂ ಮೂರು ಬಾರಿ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಚಿನ್ನ ವಿಜೇತ ಜಾವೆಲಿನ್‌ ಪಟು ಸುಮಿತ್‌ ಅಂಟಿಲ್‌ ಚಾಂಪಿಯನ್‌ಶಿಪ್‌ನ ಪ್ರಮುಖ ಆಕರ್ಷಣೆ ಎನಿಸಿಕೊಳ್ಳಲಿದ್ದಾರೆ. ಇದರ ಜೊತೆಗೆ ಕಿರ್ಗಿಸ್ತಾನ, ಫಿಲಿಪ್ಪೀನ್ಸ್‌, ಶ್ರೀಲಂಕಾ, ಥಾಯ್ಲೆಂಡ್‌ನ ಸ್ಪರ್ಧಿಗಳೂ ಭಾಗವಹಿಸಲಿದ್ದಾರೆ. ಅಫ್ಘಾನಿಸ್ತಾನದ ಕೆಲ ಸ್ಪರ್ಧಿಗಳೂ ಕೂಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಚಾಂಪಿಯನ್‌ಶಿಪ್‌ನಲ್ಲಿ 100 ಮೀಟರ್‌, 200 ಮೀಟರ್‌, 400 ಮೀಟರ್‌, 800 ಮೀಟರ್‌, 1500 ಮೀಟರ್‌, ಹೈಜಂಪ್‌, ಲಾಂಗ್‌ ಜಂಪ್‌, ಡಿಸ್ಕಸ್‌ ಎಸೆತ, ಶಾಟ್‌ಪುಟ್‌, ಜಾವೆಲಿನ್‌ ಥ್ರೋ, ಕ್ಲಬ್‌ ಥ್ರೋ ಸೇರಿದಂತೆ ಪುರುಷ ಹಾಗೂ ಮಹಿಳೆಯರ ಒಟ್ಟು 155 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ಅವರು ಮಾಹಿತಿ ನೀಡಿದರು.

ಬಳಿಕ ಮಾತನಾಡಿದ ಸುಮಿತ್‌ ಅಂಟಿಲ್‌ ಅವರು ಏಷ್ಯನ್‌ ಪ್ಯಾರಾ ಗೇಮ್ಸ್‌ನಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ಹಿಂದೆಂದಿಗಿಂತ ಈ ವರ್ಷ ಹೆಚ್ಚಿನ ಪದಕ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ಏಷ್ಯನ್‌ ಪ್ಯಾರಾ ಗೇಮ್ಸ್‌ನಲ್ಲಿ ಭಾರತ 108 ಪದಕಗಳನ್ನು ಗೆದ್ದಿತ್ತು. ಈ ಬಾರಿ ಭಾರತೀಯ ಕ್ರೀಡಾಪಟುಗಳು ಮತ್ತಷ್ಟು ಪದಕ ಸಾಧನೆ ಮಾಡಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಹೈಯರ್‌ ಇಂಡಿಯಾ ಸಂಸ್ಥೆಯ ಅಧ್ಯಕ್ಷ ಎನ್‌.ಎಸ್‌.ಸತೀಶ್‌, ಭಾರತೀಯ ಪ್ಯಾರಾಲಿಂಪಿಕ್ಸ್‌ ಸಮಿತಿಯ ಮುಖ್ಯಸ್ಥ ಡಾ.ಸತ್ಯನಾರಾಯಣ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಕರ್ನಾಟಕದ 15 ಪ್ಯಾರಾ ಅಥ್ಲೀಟ್‌ಗಳು ಭಾಗಿ

ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ 15 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಮಂಜುಳಾ, ಭಾರತಿ ಭಾರತೇಶ್‌, ಗಂಗವ್ವ ನೀಲಪ್ಪ, ಹರ್ಷಿತಾ, ಶೈಲಾ ಶಿಲ್ಪಾ, ಮೇಧಾ ಜಯಂತ್, ರಾಧಾ ವೆಂಕಟೇಶ್, ರಕ್ಷಿತಾ ರಾಜು, ಸೌಮ್ಯ, ಬಸವರಾಜ ಕುರುಬ, ಸಚ್ಚಿದಾನಂದ ದೇವಾಡಿಗ, ಗುರುರಾಜು, ಶಂಕರಪ್ಪ ಶರತ್, ರಕ್ಷಿತ್ ಹೊಸನಗರ ಸೋಮಶೇಖರ, ಸಿದ್ದಾರ್ಥ್ ಮಂಜುನಾಥ್ ಸ್ಪರ್ಧಿಸಲಿದ್ದಾರೆ.

Share. Facebook Twitter LinkedIn WhatsApp Email

Related Posts

ವೈಭವ್ ಬಳಿಕ ತಮ್ಮನ ಅಬ್ಬರ : 87 ಎಸೆತಗಳಲ್ಲಿ 103 ರನ್ ಸಿಡಿಸಿ ಸಂಚಲನ ಸೃಷ್ಟಿಸಿದ ಆಶೀರ್ವಾದ್ ಸೂರ್ಯವಂಶಿ.!

2 Mins Read

BREAKING: ‘ರನ್ ಸರದಾರ್’ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ | Kane Williamson retires

3 Mins Read

BREAKING: 2027ರ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ | ICC ODI World Cup 2027

2 Mins Read
Recent News

BIG NEWS : ರಾಜ್ಯ `ಸರ್ಕಾರಿ ನೌಕರರ’ ಮೇಲೆ ಡಿಜಿಟಲ್ ಕಣ್ಗಾವಲು : ಇನ್ನು 10 ಗಂಟೆ ಬಳಿಕ ಹಾಜರಾತಿಗೆ ಅವಕಾಶ ಇಲ್ಲ.!

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

State News
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರ’ ಮೇಲೆ ಡಿಜಿಟಲ್ ಕಣ್ಗಾವಲು : ಇನ್ನು 10 ಗಂಟೆ ಬಳಿಕ ಹಾಜರಾತಿಗೆ ಅವಕಾಶ ಇಲ್ಲ.!

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಆರ್ಥಿಕ ಇಲಾಖೆಯು ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದೆ. ಇನ್ಮುಂದೆ…

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.