Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BIG BREAKING NEWS: Mild tremors felt again in Kodagu's Sampaje

BREAKING : ಜಪಾನ್ ಕರಾವಳಿಯಲ್ಲಿ 6.7 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ

09/11/2025 2:39 PM

ALERT : ಅಪ್ಪಿತಪ್ಪಿಯೂ `ಫ್ರಿಡ್ಜ್’ ನಲ್ಲಿ ಮೊಟ್ಟೆಗಳನ್ನು ಇಡಬೇಡಿ.!

09/11/2025 1:45 PM

BREAKING: ರಕ್ಷಣಾ ಪಡೆಗಳ ಮುಖ್ಯಸ್ಥರ ರಚನೆಗೆ 27ನೇ ತಿದ್ದುಪಡಿ ಮಸೂದೆ ಮಂಡಿಸಿದ ಪಾಕಿಸ್ತಾನ

09/11/2025 1:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ‘KSRTC ಕೇಂದ್ರ ಕಚೇರಿ’ಯಲ್ಲಿ ‘ಅಂತಾರಾಷ್ಟ್ರೀಯ ಮಹಿಳಾ ದಿನ’ ಆಚರಣೆ
KARNATAKA

ಬೆಂಗಳೂರಿನ ‘KSRTC ಕೇಂದ್ರ ಕಚೇರಿ’ಯಲ್ಲಿ ‘ಅಂತಾರಾಷ್ಟ್ರೀಯ ಮಹಿಳಾ ದಿನ’ ಆಚರಣೆ

By kannadanewsnow0908/03/2025 4:02 PM

ಬೆಂಗಳೂರು: ಇಂದು ನಗರದ ಕೆ ಎಸ್ ಆರ್ ಟಿ ಸಿ ಕೇಂದ್ರ ಕಚೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಕೊಪ್ಪಳದ ಪದ್ಮಶ್ರೀ ಪುರಸ್ಕೃತ ಖ್ಯಾತ ಹಾಡುಗಾರ್ತಿ ಭೀಮವ್ವ ದೊಡ್ಡಬಾಳಪ್ಪ ಅವರಿಗೆ ಸನ್ಮಾನಿಸಲಾಯಿತು.

ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಕೆ ಎಸ್ ಆರ್ ಟಿ ಸಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಅವರು ಇಂದು ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ ಎಂದರು.

ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ ಪ್ರಾಶಸ್ತ್ಯ ನೀಡಲಾಗುತ್ತಿದೆ. ಮಹಿಳಾ ಸಮಾನತೆ, ಸಬಲೀಕರಣ ಎಂಬುದನ್ನು ನಮ್ಮಲ್ಲಿ ಅಕ್ಷರಶಃ ಕಾಣಬಹುದಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಉಪಾಧ್ಯಕ್ಷ ರಿಜ್ವಾನ್ ನವಾಬ್ ಅವರು ಮಾತನಾಡಿ, ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ. ಪ್ರಸ್ತುತ ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಅಭಿವೃದ್ದಿ ಹೊಂದುತ್ತಿರುವುದು ಸ್ವಾಗತಾರ್ಹ ಎಂದು ಎಲ್ಲಾ ಪ್ರತಿಭಾ ಪುರಸ್ಕೃತ 42 ಮಹಿಳಾ ಸಿಬ್ಬಂದಿಗಳನ್ನು ಅಭಿನಂದಿಸಿದರು.

ವಿ. ಅನ್ಬುಕುಮಾರ್, ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು ಮಾತನಾಡಿ, ನಿಗಮಕ್ಕೆ ಶಕ್ತಿಯಾಗಿರುವ ಎಲ್ಲಾ ಮಹಿಳಾ ಸಿಬ್ಬಂದಿಗಳಿಗೆ ಅಭಿನಂದಿಸಿದರು. ನಮ್ಮ ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾರ್ಗದರ್ಶನವಾಗಿದೆ. ಶಿಕ್ಷಣವೇ ಶಕ್ತಿ , ಫ್ರತಿಯೊಬ್ಬ ಮಹಿಳೆಯರು ಶಿಕ್ಷಣ ಪಡೆಯಬೇಕು. ತಮ್ಮ ತಮ್ಮ ಮಕ್ಕಳಿಗೆ ಉತ್ತಮವಾದ ವಿದ್ಯಾಬ್ಯಾಸವನ್ನು ದೊರಕಿಸಿಕೊಟ್ಟು, ಸಬಲರನ್ನಾಗಿ ಮಾಡಬೇಕು ಎಂದು ತಿಳಿಸಿದರು. ಶಿಕ್ಷಣ ಒಂದೇ ಮಹಿಳೆಯರನ್ನು ಮತ್ತಷ್ಟು ಎತ್ತರಕ್ಕೆ ಕೊಂಡ್ಯೊಯಲು ಸಾಧನವಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ‌ಮಹಿಳಾ ತಾಂತ್ರಿಕ ಸಿಬ್ಬಂದಿಗಳೇ‌ ಹೆಚ್ಚಿನ ಸಂಖ್ಯೆ ಕಾರ್ಯನಿರ್ವಹಿಸಿ‌ರುವ ನಗರ ಸಾರಿಗೆ ಬಸ್ಸುಗಳ ಪುನಶ್ಚೇತನದ ವಿಡಿಯೋ ವನ್ನು‌ ಬಿಡುಗಡೆ‌ ಮಾಡಲಾಯಿತು

ಕ.ರಾ.ರ.ಸಾ.ನಿಗಮದಲ್ಲಿ ಒಟ್ಟು 34,000 ಸಿಬ್ಬಂದಿಗಳಿದ್ದು, ವಿವಿಧ ಹುದ್ದೆಗಳಲ್ಲಿ ಒಟ್ಟಾರೆ 3052 ಮಹಿಳಾ ಉದ್ಯೋಗಿಗಳಿರುತ್ತಾರೆ. ಅದರಲ್ಲಿ ಮಹಿಳಾ ಅಧಿಕಾರಿ-80 ನಿರ್ವಾಹಕರು-875, ಚಾಲಕ ಕಂ ನಿರ್ವಾಹಕರು-26, ತಾಂತ್ರಿಕ ಸಿಬ್ಬಂದಿಗಳು-976, ಭದ್ರತಾ ಸಿಬ್ಬಂದಿಗಳು-110 ಕಛೇರಿ ಸಹಾಯಕರು-80 ಹಾಗೂ ಮಹಿಳಾ ಸ್ವಚ್ಚತಾಗಾರರು-135 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿರುತ್ತಾರೆ.

ಕಳೆದ ಎರಡು ವರ್ಷಗಳಿಂದ 79 ಮಹಿಳೆಯರನ್ನು ಅನುಕಂಪದ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ನಿಗಮದಲ್ಲಿ ನೇಮಕಾತಿ ಮಾಡಿಕೊಳ್ಳಲಾಗಿದೆ. ನಿಗಮವು ಎಲ್ಲಾ ರೀತಿಯಲ್ಲಿಯೂ ಮಹಿಳೆಯರನ್ನು ಗೌರವಿಸಿ, ಪ್ರೋತ್ಸಾಹಿಸುತ್ತಿದ್ದು, ಈ ಕೆಳಕಂಡ ಕಲ್ಯಾಣ ಕಾರ್ಯಕ್ರಮವನ್ನು ರೂಪಿಸಲಾಗಿರುತ್ತದೆ.

• ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳಾ ನೌಕರರಿಗೆ ಆಗುವ ಲೈಂಗಿಕ ಕಿರುಕುಳವನ್ನು ತಡೆಯಲು Sexual Harassment of Women at Workplace (Prevention, Prohibition & Redressal) Act-2013 ರನ್ವಯ ಮಹಿಳಾ ನೌಕರರ ಆಂತರಿಕ ದೂರು ಸಮಿತಿಯನ್ನು ರಚಿಸಲಾಗಿದೆ, ಲಿಂಗ ಸಂವೇದಿ ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ.

• ಮಹಿಳಾ ನೌಕರರಿಗೆ ರಾಜ್ಯ ಸರ್ಕಾರದ ಮಾದರಿಯಲ್ಲಿ 180 ದಿನಗಳ ಹೆರಿಗೆ ರಜೆಯನ್ನು ನೀಡಲಾಗುತ್ತಿದೆ.

• ಸರ್ಕಾರದ ಮಾದರಿಯಲ್ಲಿ ಕಿರಿಯ ಮಗುವಿಗೆ 18 ವರ್ಷ ತಲುಪುವವರೆಗೆ ಒಟ್ಟು ಸೇವಾವಧಿಯಲ್ಲಿ ಗರಿಷ್ಠ ಆರು ತಿಂಗಳವರೆಗೆ (180 ದಿನಗಳ) “ಶಿಶುಪಾಲನಾ ರಜೆ” ಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮಗುವಿಗೆ ಮೂರು ವರ್ಷ ತುಂಬುವವರೆಗೆ ರೂ.1250/- ಗಳನ್ನು ಮಾಸಿಕ ಶಿಶು ಪಾಲನಾ ಭತ್ಯೆ ನೀಡಲಾಗುತ್ತಿದ್ದು, ಇದುವರೆವಿಗೂ, ನಿರ್ವಾಹಕರು-17, ತಾಂತ್ರಿಕ-82 ಇತರೆ ಮಹಿಳಾ ಸಿಬ್ಬಂದಿಗಳು-78 ಒಟ್ಟಾರೆ 177 ಮಹಿಳಾ ಸಿಬ್ಬಂದಿಗಳು ಶಿಶುಪಾಲನಾ ಭತ್ಯೆಯನ್ನು ಪಡೆಯುತ್ತಿದ್ದಾರೆ.

• ಬುದ್ದಿಮಾಂದ್ಯ/ಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ಮಹಿಳಾ ನೌಕರರಿಗೆ ಒಟ್ಟು 730 ದಿವಸಗಳ “ಶಿಶು ಪಾಲನಾ ರಜೆ”ಯನ್ನು ವೇತನಸಹಿತವಾಗಿ ನೀಡಲಾಗುತ್ತಿದೆ.

• ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಗೃಹ ಹಾಗೂ ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗಿದೆ.

• ನಿಗಮವು ವಿದ್ಯಾಚೇತನ ಯೋಜನೆಯಡಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ-2, ವೈದ್ಯಕೀಯ-43, ಡಿಗ್ರಿ-703, ಡಿಪ್ಲೋಮೋ-43, ಒಟ್ಟಾರೆ ಪಿ.ಯು.ಸಿ.ಯಿಂದ, ಪಿ.ಹೆಚ್.ಡಿ.ವರೆಗಿನ ವಿದೇಶಿ ವ್ಯಾಸಂಗ ಸೇರಿದಂತೆ ಒಟ್ಟು 1402 ಮಹಿಳಾ ವಿದ್ಯಾರ್ಥಿಗಳಿಗೆ. (2022-23 ರಿಂದ 2024-25) ರೂ.70,71,500/- (ಎಪ್ಪತ್ತು ಲಕ್ಷದ ಎಪ್ಪತ್ತೊಂದು ಸಾವಿರದ ಐನೂರು ರೂ.ಗಳು ಮಾತ್ರ) ವಿದ್ಯಾರ್ಥಿ ವೇತನ ನೀಡಲಾಗಿದೆ.

• ಜನವರಿ 2025 ರಿಂದ ನೂತನ ”ಕೆ.ಎಸ್ಆರ್.ಟಿ.ಸಿ ಆರೋಗ್ಯ” ನಗದು ರಹಿತ ವೈದೈಕೀಯ ಚಿಕಿತ್ಸಾ ಸೌಲಭ್ಯವನ್ನು ಜಾರಿಗೊಳಿಸಿದ್ದು, ಇದುವರೆವಿಗೂ ಒಟ್ಟಾರೆ 984 ಮಹಿಳಾ ಸಿಬ್ಬಂದಿಗಳು ಚಿಕಿತ್ಸೆಗೊಳಪಟ್ಟಿರುತ್ತಾರೆ ಹಾಗೂ ಮಹಿಳಾ ಸಿಬ್ಬಂದಿ ಅವಲಂಬಿತರು 11860 ಜನ ಚಿಕಿತ್ಸೆ ಪಡೆದಿದ್ದು, ಅವಲಂಬಿತರ ಪತ್ನಿ-6996, ತಾಯಿ-3519 ಹಾಗೂ ಹೆಣ್ಣು ಮಕ್ಕಳು-2935 ಚಿಕಿತ್ಸೆ ಪಡೆದಿರುವ ಮೊತ್ತ ರೂ19.87 ಕೋಟಿ ಮೊತ್ತವಾಗಿರುತ್ತದೆ.

• ಇಂದು ನಿಗಮದ 17 ವಿಭಾಗಗಳಿಂದ ತಲಾ ಒಬ್ಬರಂತೆ ಉತ್ತಮ ಕಾರ್ಯ ಸಾಧನೆ ತೋರಿದ, ತಾಂತ್ರಿಕ ಸಿಬ್ಬಂದಿ-19, ನಿರ್ವಾಹಕರು-16, ಹಾಗೂ ಕರಾಸಾ ಪೇದೆ-7, ಒಟ್ಟು 42 ಮಹಿಳಾ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಡಾ. ನಂದಿನಿದೇವಿ ಕೆ. ಭಾಆಸೇ., ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ಹಾಗೂ ಹಿರಿಯ ಅಧಿಕಾರಿ/ಸಿಬ್ಬಂದಿಗಳು ಭಾಗವಹಿಸಿದ್ದರು.

ರಾಜ್ಯದಲ್ಲಿ ಕುರಿಗಳಿಗೆ ನಿಗೂಢ ಖಾಯಿಲೆ: 20ಕ್ಕೂ ಹೆಚ್ಚು ಸಾವು, ಕುರಿಗಾಯಿಗಳಲ್ಲಿ ಆತಂಕ

ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ಪುರುಷರಿಗಿಂತ ಮಹಿಳಾ ಹೂಡಿಕೆದಾರರು ಮೇಲುಗೈ ಸಾಧಿಸಿದ್ದಾರೆ: ವರದಿ | Mutual fund

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಈ ವರ್ಷ 2 ಲಕ್ಷ `ಪಂಪ್ ಸೆಟ್’ಗಳು ಸಕ್ರಮ.!

Share. Facebook Twitter LinkedIn WhatsApp Email

Related Posts

ALERT : ಅಪ್ಪಿತಪ್ಪಿಯೂ `ಫ್ರಿಡ್ಜ್’ ನಲ್ಲಿ ಮೊಟ್ಟೆಗಳನ್ನು ಇಡಬೇಡಿ.!

09/11/2025 1:45 PM1 Min Read

BIG NEWS : ನ.15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ : ರಾಜ್ಯ ನಾಯಕತ್ವ ಬದಲಾವಣೆ ಸಾಧ್ಯತೆ?!

09/11/2025 1:35 PM1 Min Read

BREAKING : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ : ಶೀಘ್ರ 18 ಸಾವಿರ ಶಿಕ್ಷಕರ ನೇಮಕ : ಸಚಿವ ಮಧು ಬಂಗಾರಪ್ಪ

09/11/2025 1:15 PM1 Min Read
Recent News
BIG BREAKING NEWS: Mild tremors felt again in Kodagu's Sampaje

BREAKING : ಜಪಾನ್ ಕರಾವಳಿಯಲ್ಲಿ 6.7 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ

09/11/2025 2:39 PM

ALERT : ಅಪ್ಪಿತಪ್ಪಿಯೂ `ಫ್ರಿಡ್ಜ್’ ನಲ್ಲಿ ಮೊಟ್ಟೆಗಳನ್ನು ಇಡಬೇಡಿ.!

09/11/2025 1:45 PM

BREAKING: ರಕ್ಷಣಾ ಪಡೆಗಳ ಮುಖ್ಯಸ್ಥರ ರಚನೆಗೆ 27ನೇ ತಿದ್ದುಪಡಿ ಮಸೂದೆ ಮಂಡಿಸಿದ ಪಾಕಿಸ್ತಾನ

09/11/2025 1:37 PM

BIG NEWS : ನ.15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ : ರಾಜ್ಯ ನಾಯಕತ್ವ ಬದಲಾವಣೆ ಸಾಧ್ಯತೆ?!

09/11/2025 1:35 PM
State News
KARNATAKA

ALERT : ಅಪ್ಪಿತಪ್ಪಿಯೂ `ಫ್ರಿಡ್ಜ್’ ನಲ್ಲಿ ಮೊಟ್ಟೆಗಳನ್ನು ಇಡಬೇಡಿ.!

By kannadanewsnow5709/11/2025 1:45 PM KARNATAKA 1 Min Read

ಮಾರುಕಟ್ಟೆಯಿಂದ ಮೊಟ್ಟೆಗಳನ್ನು ತಂದು ಫ್ರಿಜ್ ನಲ್ಲಿ ಇಡುವುದು ಸಾಮಾನ್ಯ. ಆದರೆ.. ಹಾಗೆ ಮಾಡುವುದರಿಂದ, ಅದು ಅನಾರೋಗ್ಯವನ್ನು ಒಳಗಾಗುವ ಎಲ್ಲಾ ಸಾಧ್ಯತೆಯಿದೆ…

BIG NEWS : ನ.15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ : ರಾಜ್ಯ ನಾಯಕತ್ವ ಬದಲಾವಣೆ ಸಾಧ್ಯತೆ?!

09/11/2025 1:35 PM

BREAKING : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ : ಶೀಘ್ರ 18 ಸಾವಿರ ಶಿಕ್ಷಕರ ನೇಮಕ : ಸಚಿವ ಮಧು ಬಂಗಾರಪ್ಪ

09/11/2025 1:15 PM

BREAKING : ಮೂವರನ್ನು ಬಲಿ ಪಡೆದ ಹುಲಿ ಕೊನೆಗು ಸೆರೆ : DNA ಪರೀಕ್ಷೆ ನಡೆಸಲು ಸಚಿವ ಈಶ್ವರ್ ಖಂಡ್ರೆ ಸೂಚನೆ

09/11/2025 1:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.