ಶಿವಮೊಗ್ಗ : ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ( Veterinary College of Shimoga ) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳ ( Assistant Professor Job )ಗುತ್ತಿಗೆ ಆಧಾರಿತ ನೇಮಕಾತಿ ಸಂಬಂಧ ಅಕ್ಟೋಬರ್ 17 ರಂದು ಸಂದರ್ಶನ ಏರ್ಪಡಿಸಲಾಗಿದೆ.
ಪಶುವೈದ್ಯಕೀಯ ಸೂಕ್ಷ್ಮಜೀವಾಣು ಶಾಸ್ತ್ರ ವಿಭಾಗ ಹುದ್ದೆ 01, ಪ್ರಾಣಿ ಅನುವಂಶೀಯತೆ ಮತ್ತು ತಳಿಶಾಸ್ತ್ರ ವಿಭಾಗ ಹುದ್ದೆ01, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ಶಾಸ್ತ್ರವಿಭಾಗದ ಪಶುವೈದ್ಯಕೀಯ ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರ ಹುದ್ದೆ 01, ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುವುದು.
ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಘೂ ಮಾರ್ಗಸೂಚಿಯನ್ವಯ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ನೇಮಕಗೊಂಡ ಅಭ್ಯರ್ಥಿಗಳಿಗೆ ರೂ.57000/- ತಿಂಗಳ ವೇತನ ನೀಡಲಾಗುತ್ತದೆ.
ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇಲ್ಲಿ ಅ.17 ರ ಬೆಳಿಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ: 08182- ಹಾಗೂ ವಿಶ್ವವಿದ್ಯಾಲಯದ ಜಾಲತಾಣ www.kvafsu.edu.in ನ್ನು ಸಂಪರ್ಕಿಸಬಹುದೆಂದು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ತಿಳಿಸಿದ್ದಾರೆ.