ಬೆಂಗಳೂರು : ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಮಂಡನೆ ಮಾಡಿದ್ದು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ, ಪ್ರೌಢ ಶಿಕ್ಷಣ ಮಂಡಳಿ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಗಿದೆ.
ನಾಡಿನಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸುವುದರ ಜೊತೆಗೆ ಅನ್ಯ ಭಾಷೆಗಳ ದಬ್ಬಾಳಿಕೆ ತಗ್ಗಿಸಲು ಜಾರಿಗೆ ತರಲಾಗುತ್ತಿರುವ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ವಿಧೇಯಕದಿಂದ ರಾಜ್ಯದಲ್ಲಿ ಕನ್ನಡವನ್ನು ಬಲಪಡಿಸಲು ಅನುಕೂಲವಾಗಲಿದೆ.
. ಅಧೀನ ನ್ಯಾಯಾಲಯ, ನ್ಯಾಯಾಧಿಕರ ಮತ್ತು ಇತರೆ ಹಣಕಾಸು ಸಂಸ್ಥೆಗಳಲ್ಲಿ ಕನ್ನಡ ಭಾಷೆಗೆ, ಕನ್ನಡಿಗರಿಗೆ ಮೀಸಲಾತಿ ಒದಗಿಸುವ ಕೈಗಾರಿಕಾ ಸಂಸ್ಥೆಗಳಿಗೆ ತೆರಿಗೆ ರಿಯಾಯಿತಿ, ಕನ್ನಡ ಅನುಷ್ಠಾನದ ಮೇಲ್ವಿಚಾರಣೆಗೆ ಸಮಿತಿ ಸ್ಥಾಪನೆಗೆ ಅವಕಾಶ ಕೊಡುವ ವಿಧೇಯಕವಾಗಿದೆ.
ಕನ್ನಡ ಭಾಷೆ ಕಾಯ್ದೆ ಅನುಷ್ಠಾನ ಮಾಡದಿದ್ದರೆ ದಂಡ ವಿಧಿಸಲು ಅವಕಾಶವಿದೆ. ಮೊದಲನೇ ಸಲ ತಪ್ಪು ಮಾಡಿದ್ರೆ 5 ಸಾವಿರ ರೂ, ಎರಡನೇ ಸಲ ತಪ್ಪು ಮಾಡಿದ್ರೆ 10 ಸಾವಿರ ರೂ. ಮೂರನೇ ಸಲ ತಪ್ಪು ಮಾಡಿದ್ರೆ 20 ಸಾವಿರ ರೂ. ದಂಡ ವಿಧಿಸಲಾಗುತ್ತದೆ.