ಬೆಂಗಳೂರು : ಡಿಸೆಂಬರ್ 03 ರಂದು ಬೆಂಗಳೂರಿನಲ್ಲಿ ಗಣಿ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಪ್ರಲ್ಹಾದ್ ಜೋಶಿ ಬೆಂಗಳೂರಿನಲ್ಲಿ ಗಣಿಗಾರಿಕೆ ಕುರಿತಂತೆ ಹೂಡಿಕೆದಾರರ ಸಮಾವೇಶ ಆಯೋಜಿಸಲಾಗಿದೆ. ಆಸಕ್ತರು ಸಮಾವೇಶದಲ್ಲಿ ಭಾಗವಹಿಸಬಹುದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದು, ವಿವಿಧ ವಾಣಿಜ್ಯ ಗಣಿಗಳ ಮೆಗಾ ಹರಾಜು ಕುರಿತು ಹೂಡಿಕೆದಾರರಿಗೆ ಮಾಹಿತಿ ಒದಗಿಸಲಾಗುತ್ತದೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.ವಾಣಿಜ್ಯ ಗಣಿ ಹರಾಜು ಮತ್ತು ದೇಶದ ಗಣಿಗಾರಿಕೆ ವಲಯದಲ್ಲಿ ವಿವಿಧ ಅವಕಾಶಗಳ ಕುರಿತು ಸಮಾವೇಶವನ್ನು ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.