ಕನಕಪುರ :ಉದ್ಯಮಿ ಸಿ.ಜೆ. ರಾಯ್ ಅವರ ಸಾವಿನ ಪ್ರಕರಣವನ್ನು ತನಿಖೆ ಮಾಡಿಸಿ, ಸತ್ಯಾಂಶವನ್ನು ಬಹಿರಂಗಗೊಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು.
ಕನಕೋತ್ಸವದ ವೇಳೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ರಾಯ್ ಅವರ ಸಾವಿನ ಬಗ್ಗೆ ಕೇಳಿದಾಗ, “ಅಧಿಕಾರಿಗಳು ಅನೇಕ ಪ್ರಶ್ನೆ ಕೇಳುವಾಗ, ಐದು ನಿಮಿಷ ಸಮಯ ನೀಡಿ ಎಂದು ಹೇಳಿ ಈ ರೀತಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬಂದಿದೆ. ಕೇರಳದಿಂದ ವಿಚಾರಣೆಗೆ ಒಂದು ತಂಡ ಬಂದಿತ್ತು ಎಂಬ ಮಾಹಿತಿ ಇದೆ ಎಂದರು.
ಈ ಬಗ್ಗೆ ದೆಹಲಿಯಿಂದಲೂ ವರದಿ ಕೇಳಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ. ರಾಯ್ ಅವರು ಒಳ್ಳೆಯ ಉದ್ಯಮಿಗಳಾಗಿದ್ದರು, ಈ ರೀತಿ ಆಗಬಾರದಿತ್ತು ಎಂದು ಪ್ರತಿಕ್ರಿಯಿಸಿದರು.








