ಬಳ್ಳಾರಿ : ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ಅರ್ಹ ಮಕ್ಕಳಿಂದ ಪ್ರಸ್ತಕ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಆರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅನ್‌ಲೈನ್ ಮೂಲಕ https://awards.gov.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.
2025 ನೇ ಜುಲೈ 31 ಕ್ಕೆ ಅನ್ವಯವಾಗುವಂತೆ 05 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿರುವ ಸಾಧನೆ ಮಾಡಿರುವ ಎಲ್ಲಾ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್ಮೆಂಟ್‌ನ ಶಾಂತಿಧಾಮ ಆವರಣದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿ ಅಥವಾ ದೂ.08392-241373 ಗೆ ಸಂಪರ್ಕಿಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವೀಡನ್‌ನಲ್ಲಿ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ರೋಡ್‌ಷೋ
BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?







