ದಾವಣಗೆರೆ: ಪ್ರಸಕ್ತ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ, ಮೈಸೂರು ಕಂದಾಯ ವಿಭಾಗಗಳಲ್ಲಿನ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಯುವಜನರಿಗೆ 90 ದಿನಗಳ ವಸತಿಯುತ ಪುರುಷ & ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ಈ ತರಬೇತಿ ನಡೆಸಲಾಗುವುದು. ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಮೇ.23 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಇಲಾಖೆ ವೆಬ್ ಸೈಟ್ :dom.karkataka.gov.in ನಲ್ಲಿ ಪರಿಶೀಲಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಮುಂದಿನ 4-5 ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮಾಹಿತಿ | Monsoon Rain
ನಾಳೆ ಮದ್ದೂರಿನಲ್ಲಿ ತಿರಂಗಾ ಯಾತ್ರೆ: ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ