ಶಿವಮೊಗ್ಗ : ಶಾಲಾ ಶಿಕ್ಷಣ ಶಿಕ್ಷಣ ಇಲಾಖೆಯು 2025-26 ನೇ ಸಾಲಿನ “ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ / ಶಿಕ್ಷಕ” ಪ್ರಶಸ್ತಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ನಿಗಧಿತ ದಿನಾಂಕದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ತಮ್ಮ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಮಂಜುನಾಥಸ್ವಾಮಿ ಅವರು ತಿಳಿಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ತರಗತಿ ಕೋಣೆಯಲ್ಲಿ ವಿಷಯ ಪಾಂಡಿತ್ಯದ ಜೊತೆಗೆ ಪೂರಕ ಪರಿಕರಗಳೊಂದಿಗೆ ಬೋಧನಾ ಚಟುವಟಿಕೆಗಳನ್ನು ಸಾದರಪಡಿಸಿ ಮಕ್ಕಳಲ್ಲಿ ಶಾಶ್ವತ ಮತ್ತು ಸಂತಸದಾಯಕ ಕಲಿಕೆಯನ್ನುಂಟು ಮಾಡುವ ಬಹುಮುಖ ವ್ಯಕ್ತಿತ್ವದ ಶಿಕ್ಷಕರನ್ನು, ಉಪನ್ಯಾಸಕರನ್ನು, ಹಾಗೂ ಪ್ರಾಂಶುಪಾಲರನ್ನು, ಗುರುತಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿ ವರ್ಷ ಸಪ್ಟೆಂಬರ್-05 ರಂದು ಕ್ರಮವಾಗಿ ರಾಷ್ಟ್ರ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರದಾನ ಮಾಡುವುದರ ಮೂಲಕ ಗೌರವಿಸುತ್ತಿದೆ.
ಇದರನ್ವಯ ಶಿಕ್ಷಕರಿಗೆ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹ ಶಿಕ್ಷಕರು ದಿನಾಂಕ:25/07/2025 ರಿಂದ ದಿನಾಂಕ; 10/08/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಮಂಜುನಾಥಸ್ವಾಮಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIG NEWS: ‘NHM ಗುತ್ತಿಗೆ ನೌಕರ’ರಿಗೆ ಬಿಗ್ ಶಾಕ್: ‘ಅತೃಪ್ತಿಕರ ಕಾರ್ಯಕ್ಷಮತೆ’ ಹೊಂದಿದವರಿಗೆ ‘ಗೆಟ್ ಪಾಸ್’
BIG NEWS: ದಲಿತರಿಗೆ ಮೀಸಲಿಟ್ಟ ಅನುದಾನ ಡೈವೋರ್ಟ್ ಆಗಿದ್ದರೆ ಬಿಜೆಪಿ ದಾಖಲೆ ನೀಡಲಿ: ಸಚಿವ ಪ್ರಿಯಾಂಕ್ ಖರ್ಗೆ