ಹಾವೇರಿ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಹಾಗೂ ಜೆಸಿಬಿ ಇಂಡಿಯಾ ಸಹಯೋಗದಲ್ಲಿ 30 ದಿನಗಳ ಉಚಿತ ಜೆಸಿಬಿ ಚಾಲನಾ ತರಬೇತಿಗೆ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ಹೆಸರು, ಹುಟ್ಟಿದ ದಿನಾಂಕ, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನೊಳಗೊಂಡ ಅರ್ಜಿಯನ್ನು ಸೆಪ್ಟೆಂಬರ್ 20ರೊಳಗಾಗಿ ಸಲ್ಲಿಸಬೇಕು.
ಇಂದಿನಿಂದ ಸೆ.18ರವರೆಗೆ ಈ ಜಿಲ್ಲೆಯ ವಿವಿಧೆಡೆ ‘ಮದ್ಯ ಮಾರಾಟ’ ನಿಷೇಧ | Sale of liquor banned
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ(ಆರ್) ವಿಸ್ತರಣಾ ಕೇಂದ್ರ ಹಸನಮಾಳ್, ದಾಂಡೇಲಿ-581325 ಈ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08284-298547, ಮೊ.805074144, 9632143217 ಹಾಗೂ 94497 82425 ಸಂಪರ್ಕಿಸಲು ಕೋರಲಾಗಿದೆ.