ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯವನ್ನು ಕ್ರಿಕೆಟರ್ ಕ್ರಿಸ್ ಗೇಲ್ ಜೊತೆಗೆ ಒಟ್ಟಿಗೆ ಕೂತು ರಿಷಬ್ ಶೆಟ್ಟಿ ವೀಕ್ಷಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕಾಂತಾರ ಚಿತ್ರದ ನಿರ್ದೇಶಕ ಮತ್ತು ನಾಯಕ ನಟ ರಿಷಬ್ ಶೆಟ್ಟಿ ಅವರು ಆರ್ಸಿಬಿ ಮಾಜಿ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಅವರೊಂದಿಗೆ ಆರ್ಸಿಬಿಯನ್ನು ಹುರಿದುಂಬಿಸಿದ್ದಾರೆ.
ಇನ್ಸ್ಟಾಗ್ರಾಮ್ಗೆ ನಲ್ಲಿ ಈ ಕುರಿತು ಹಂಚಿಕೊಂಡಿರುವ ರಿಷಬ್ ಶೆಟ್ಟಿ , ಕ್ರಿಸ್ ಗೇಲ್ ಅವರೊಂದಿಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ, “ಇದು ಇತಿಹಾಸ!! ಕ್ರೀಡಾಂಗಣದಲ್ಲಿ ನನ್ನ ಮೊದಲ ಪಂದ್ಯ!! ನಿಮ್ಮನ್ನು ಮೇಲ್ಭಾಗದಲ್ಲಿ ನೋಡೋಣ ಎಂದು ಬರೆದುಕೊಂಡಿದ್ದಾರೆ.
ಇನ್ನು ಸಿಎಸ್ ಕೆ ಮತ್ತು ಆರ್ ಸಿಬಿ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗೆ ತೆರಳಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಸೇರಿದಂತೆ ಹಲವು ರಾಜಕೀಯ ವೀಕ್ಷಿಸಿದ್ದಾರೆ.