ನವದೆಹಲಿ: ಐಪಿಎಲ್ 2026ರ ರೋಚಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ ಡೆಲ್ಲಿ ತಂಡ ಸತತ ಮೂರು ಪಂದ್ಯಗಳ ಸೋಲಿನ ಸುಳಿಗೆ ಬ್ರೇಕ್ ಹಾಕಿದ್ದು, ಪಾಯಿಂಟ್ಸ್ ಟೇಬಲ್‌ನಲ್ಲಿ ಚೇತರಿಕೆ ಕಂಡಿದೆ.
ರಾಜಸ್ಥಾನ್ ರಾಯಲ್ಸ್ ನೀಡಿದ್ದ ಸ್ಪರ್ಧಾತ್ಮಕ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ಕೇವಲ 3 ವಿಕೆಟ್ ಕಳೆದುಕೊಂಡು ತಲುಪಿತು.ಕೆ.ಎಲ್. ರಾಹುಲ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.
ಶ್ರೀಲಂಕಾದ ಪತುಮ್ ನಿಸ್ಸಂಕ ಸ್ಫೋಟಕ ಬ್ಯಾಟಿಂಗ್ ನಡೆಸಿ ಡೆಲ್ಲಿ ಗೆಲುವನ್ನು ಸುಲಭಗೊಳಿಸಿದರು. ಇವರಿಬ್ಬರ ಅದ್ಭುತ ಜೊತೆಯಾಟ ರಾಜಸ್ಥಾನ್ ಬೌಲರ್‌ಗಳನ್ನು ಕಂಗಾಲು ಮಾಡಿತು.
ಕಳೆದ ಮೂರು ಪಂದ್ಯಗಳಲ್ಲಿ ಸೋತು ಕಂಗೆಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್‌ಗೆ ಈ ಗೆಲುವು ಹೊಸ ಆತ್ಮವಿಶ್ವಾಸ ತಂದಿದೆ.








