ಬೆಂಗಳೂರು: ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ನಡೆಯಲಿದ್ದಾವೆ. ಈ ಪಂದ್ಯಾವಳಿ ಹಿನ್ನಲೆಯಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದು, ಏಪ್ರಿಲ್ 2ರ ನಾಳೆ, ಏಪ್ರಿಲ್ 10, ಏಪ್ರಿಲ್ 18, 24, ಮೇ.3, 13, 17ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಮಧ್ಯಾಹ್ನ 3ರಿಂದ ರಾತ್ರಿ 12ರವರೆಗೆ ನಡೆಯಲಿದೆ. ಈ ವೇಳೆ ಸಂಚಾರ ನಿರ್ಬಂಧ ಜಾರಿಯಲ್ಲಿರುವುದಾಗಿ ತಿಳಿಸಿದೆ.
ಈ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧ
- ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ
- ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
- ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ
- ವಿಠ್ಠಲ್ ಮಲ್ಯಾ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆ.
ಈ ಸ್ಥಳಗಳಲ್ಲಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ಅವಕಾಶ
- ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಯುಬಿ ಪಾರ್ಕಿಂಗ್ ಲಾಟ್
- ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೇ ಮಹಡಿ ಮತ್ತು ಓಲ್ಡ್ ಕೆಜಿಐಡಿ ಬಿಲ್ಡಿಂಗ್
- ಕಿಂಗ್ಸ್ ರಸ್ತೆ ಅಂದರೆ ಕಬ್ಬನ್ ಪಾರ್ಕ್ ಒಳಭಾಗ
- ಸೆಂಟ್ ಜೋಸೆಫ್ ಬಾಯ್ಸ್ ಹೈಸ್ಕೂಲ್, ಬೇಸ್ ಮೆಂಟ್ ಪಾರ್ಕಿಂಗ್
ಕ್ಯಾಬ್, ಆಟೋಗಳಿಗೆ ಪಿಕಪ್ ಮತ್ತು ಡ್ರಾಪ್ ಜೋನ್
-ಕಬ್ಬನ್ ರಸ್ತೆ ಅಂದರೆ ಬಿ ಆರ್ ವಿ ಜಂಕ್ಷನ್ ನಿಂದ ಸಿಟಿಓ ಸರ್ಕಲ್ ವರೆಗೆ ಮಾತ್ರ
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) April 1, 2025
BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಮಗಳಿಗಾಗಿ ಡಿಜಿಪಿ ರಾಮಚಂದ್ರರಾವ್ ‘ಪ್ರೋಟೋಕಾಲ್ ದುರುಪಯೋಗ’ – ವರದಿ
BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಇಬ್ಬರ ಸಾವು, ಮೂವರಿಗೆ ಗಾಯ