Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ಯಾಸ್ ಸಿಲಿಂಡರ್ ವಿಳಂಬ: ಟೆನ್ಷನ್ ಬೇಡ, ತಕ್ಷಣ ಹೀಗೆ ಮಾಡಿದರೆ ನಿಮ್ಮ ಸಮಸ್ಯೆ ಬಗೆಹರಿಯುತ್ತೆ!

28/03/2026 9:27 AM

ಇರಾನ್ ಅಣುಶಕ್ತಿ ಕೇಂದ್ರಗಳ ಮೇಲೆ ಇಸ್ರೇಲ್ ವಾಯುದಾಳಿ: ಪ್ರತೀಕಾರ ತೀರಿಸಿಕೊಂಡ ಟೆಹ್ರಾನ್, ಸೌದಿ ಅರೇಬಿಯಾದಲ್ಲಿ ಅಮೆರಿಕ ಸೈನಿಕರಿಗೆ ಗಾಯ!

28/03/2026 9:16 AM

JOB ALERT : : ತುಮಕೂರು ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ!

28/03/2026 9:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಇಂದು ಬೆಂಗಳೂರಲ್ಲಿ `IPL’ ಪಂದ್ಯ : ‘ನಮ್ಮ ಮೆಟ್ರೋ’ ಸೇವೆ ಅವಧಿ ವಿಸ್ತರಣೆ!
KARNATAKA

BREAKING : ಇಂದು ಬೆಂಗಳೂರಲ್ಲಿ `IPL’ ಪಂದ್ಯ : ‘ನಮ್ಮ ಮೆಟ್ರೋ’ ಸೇವೆ ಅವಧಿ ವಿಸ್ತರಣೆ!

By kannadanewsnow5728/03/2026 9:08 AM

ಬೆಂಗಳೂರು : ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯದ ಪ್ರಯುಕ್ತ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್ಸಿಎಲ್) ಪ್ರಯಾಣಿಕರಿಗೆ ಸುಲಭ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ಮೆಟ್ರೋ ರೈಲು ಸೇವಾಅವದಿಯನ್ನು ವಿಸ್ತರಿಸಿದೆ.

ಪಂದ್ಯದ ದಿನದಂದು, ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11:00 ಗಂಟೆಯಿಂದ ಮುಂದಿನ ದಿನದ ಮುಂಜಾನೆ 2:00 ಗಂಟೆಯವರೆಗೆ ವಿಸ್ತರಿಸಲಾಗಿದೆ.

ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲುಗಳು ಕೆಳಗಿನ ವೇಳಾಪಟ್ಟಿಯಂತೆ ಹೊರಡಲಿವೆ:

ವೈಟ್ಫೀಲ್ಡ್ (ಕಾಡುಗೋಡಿ) ಯಿಂದ ರಾತ್ರಿ 12.30ಕ್ಕೆ ಮತ್ತು ಚೆಲ್ಲಘಟ್ಟ ದಿಂದ ರಾತ್ರಿ 12.45ಕ್ಕೆ.

ರೇಷ್ಮೆ ಸಂಸ್ಥೆ ಹಾಗೂ ಮಾದಾವರ ದಿಂದ ರಾತ್ರಿ 12.45ಕ್ಕೆ.

ಬೊಮ್ಮಸಂದ್ರ ದಿಂದ ರಾತ್ರಿ 01.00ಕ್ಕೆ ಹಾಗೂ ಆರ್.ವಿ. ರಸ್ತೆ ಯಿಂದ ರಾತ್ರಿ 02.00ಕ್ಕೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ನಿಂದ ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 01:30ಕ್ಕೆ ಕೊನೆಯ ರೈಲು ಹೊರಡಲಿದೆ.

ಮೆಟ್ರೋ ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸಲು ಐಪಿಎಲ್ ಪಂದ್ಯದ ಟಿಕೆಟ್ಗಳಲ್ಲಿ ನಮ್ಮ ಮೆಟ್ರೋ ಕ್ಯೂಆರ್ ಕೋಡ್ ಎರಡು ಪ್ರಯಾಣಕ್ಕೆ (ಟು-ವೇ ಟ್ರಾವೆಲ್), ಐಪಿಎಲ್ ಟಿಕೆಟ್ ಮೇಲೆಯೇ ಮುದ್ರಿತವಾಗಿರುತ್ತದೆ ಅಥವ ಡಿಜಿಟಲ್ ಐಪಿಎಲ್ ಟಿಕೆಟ್ಗಳೊಂದಿಗೆ ಲಭ್ಯವಿರುತ್ತದೆ.

ಕಬ್ಬನ್ ರಸ್ತೆ ಭಾಗದಿಂದ ಸ್ಟೇಡಿಯಂಗೆ ಪ್ರವೇಶ /ನಿರ್ಗಮನ ಗೇಟ್ಗಳನ್ನು ಬಳಸುವ ಪ್ರೇಕ್ಷಕರು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು ಬಳಸುವಂತೆ ಹಾಗೂ ಲಿಂಕ್ ರಸ್ತೆ ಭಾಗದಿಂದ ಪ್ರವೇಶ /ನಿರ್ಗಮನ ಗೇಟ್ಗಳನ್ನು ಬಳಸುವ ಪ್ರೇಕ್ಷಕರು ಸಮೀಪದಲ್ಲಿರುವ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣವನ್ನು ಬಳಸುವಂತೆ ಸೂಚಿಸಲಾಗಿದೆ.

ಪಂದ್ಯದ ದಿನದಂದು ಪ್ರೇಕ್ಷಕರಿಗೆ ಅನುಕೂಲವಾಗಲು ಮತ್ತು ನಮ್ಮ ಮೆಟ್ರೋದಲ್ಲಿ ಸುಗಮ ಪ್ರಯಾಣವನ್ನು ಖಚಿತಪಡಿಸಲು, ಬಿಎಂಆರ್ಸಿಎಲ್ ಅನೇಕ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಿದೆ. ಪಂದ್ಯದ ದಿನಗಳಲ್ಲಿ ಮೆಟ್ರೋ ನಿಲ್ದಾಣಗಳ ಪಾರ್ಕಿಂಗ್ ಸೌಲಭ್ಯವನ್ನು ಎರಡು ಚಕ್ರ ವಾಹನಗಳಿಗೆ ರೂ. 30/- ಮತ್ತು ಕಾರುಗಳಿಗೆ ರೂ. 60/- ನಿಗದಿತ ದರದಲ್ಲಿ ಒದಗಿಸಲಾಗುತ್ತದೆ. ಈ ದರವು ದಿನದ ಮೆಟ್ರೋ ಸೇವೆ ಮುಕ್ತಾಯವಾಗುವವರೆಗೆ ಮಾನ್ಯವಾಗಿರುತ್ತದೆ. (ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಿರುವ ನಿಲ್ದಾಣದ ವಿವರಗಳು ಅನುಬಂಧದಲ್ಲಿ ಲಭ್ಯವಿವೆ).

ಪ್ರೇಕ್ಷಕರು ತಮ್ಮ ವಾಹನಗಳನ್ನು ನಿಗದಿತ ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿ, ಮೆಟ್ರೋ ಮೂಲಕ ಸ್ಟೇಡಿಯಂಗೆ ನಡೆದು ಹೋಗಬಹುದಾದ ಅಂತರದಲ್ಲಿರುವ ಕಬ್ಬನ್ ಪಾರ್ಕ್ ಅಥವಾ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳಿಗೆ ಪ್ರಯಾಣಿಸುವಂತೆ ಸಲಹೆ ನೀಡಲಾಗಿದೆ. ಇದರಿಂದ ಕೇಂದ್ರ ವ್ಯವಹಾರ ಪ್ರದೇಶ (ಸಿಬಿಡಿ) ಹಾಗೂ ಸ್ಟೇಡಿಯಂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ಸಂಚಾರ ದಟ್ಟಣೆ ಕಡಿಮೆಯಾಗಲು ಸಹಾಯವಾಗುತ್ತದೆ.

ಪ್ರಯಾಣಿಕರು ಸುಗಮ ಸಂಚಾರ, ಸುರಕ್ಷತೆ ಮತ್ತು ಜನಸಂದಣಿಯನ್ನು ತಪ್ಪಿಸಲು ಪೊಲೀಸ್, ಸ್ಟೇಡಿಯಂ ನಿರ್ವಹಣೆ ಮತ್ತು ಬಿಎಂಆರ್ಸಿಎಲ್ ಸಿಬ್ಬಂದಿಯ ನಿರ್ದೇಶನಗಳನ್ನು ಅನುಸರಿಸಲು ವಿನಂತಿಸಲಾಗಿದೆ.

ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಿಂದ ಯಾವುದೇ ಅನಾಹುತಗಳು ಅಥವಾ ಅಹಿತಕರ ಘಟನೆಗಳನ್ನು ತಡೆಗಟ್ಟುವ ಹಿತದೃಷ್ಟಿಯಿಂದ, ಅಗತ್ಯವಿದ್ದಲ್ಲಿ ಮೆಟ್ರೋ ನಿಲ್ದಾಣಗಳ ಪ್ರವೇಶ ದ್ವಾರಗಳನ್ನು ನಿಯಂತ್ರಿಸುವ ಅಥವಾ ತಾತ್ಕಾಲಿಕವಾಗಿ ಮುಚ್ಚುವ ಹಕ್ಕನ್ನು ಬಿಎಂಆರ್ಸಿಎಲ್ ಹೊಂದಿರುತ್ತದೆ.

ಸಾರ್ವಜನಿಕರ ಮತ್ತು ಮೆಟ್ರೋ ಪ್ರಯಾಣಿಕರ ಅನೂಕೂಲಕ್ಕಾಗಿ ಈ ಮಾಹಿತಿಯನ್ನು ವ್ಯಾಪಕ ಪ್ರಚಾರವನ್ನು ನೀಡಲು ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳನ್ನು ವಿನಂತಿಸಿದೆ.

ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ. ಹೆಚ್ಚಿನ ವಿವರಗಳಿಗೆ ಮಾಧ್ಯಮ ಪ್ರಕಟಣೆ ಯನ್ನು ವೀಕ್ಷಿಸಿ.

Extension of Metro Services for IPL 2026 Match in Bengaluru. For further details please check the media release. pic.twitter.com/ltnjAMZ2J3

— ನಮ್ಮ ಮೆಟ್ರೋ (@OfficialBMRCL) March 25, 2026

IPL match in Bengaluru today: 'Namma Metro' service period extended!
Share. Facebook Twitter LinkedIn WhatsApp Email

Related Posts

ಗ್ಯಾಸ್ ಸಿಲಿಂಡರ್ ವಿಳಂಬ: ಟೆನ್ಷನ್ ಬೇಡ, ತಕ್ಷಣ ಹೀಗೆ ಮಾಡಿದರೆ ನಿಮ್ಮ ಸಮಸ್ಯೆ ಬಗೆಹರಿಯುತ್ತೆ!

28/03/2026 9:27 AM2 Mins Read

JOB ALERT : : ತುಮಕೂರು ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ!

28/03/2026 9:15 AM1 Min Read

ದ್ವಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳೇ ಗಮನಿಸಿ : `NEET’ ಪರೀಕ್ಷೆ ಇಲ್ಲದೇ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

28/03/2026 8:51 AM2 Mins Read
Recent News

ಗ್ಯಾಸ್ ಸಿಲಿಂಡರ್ ವಿಳಂಬ: ಟೆನ್ಷನ್ ಬೇಡ, ತಕ್ಷಣ ಹೀಗೆ ಮಾಡಿದರೆ ನಿಮ್ಮ ಸಮಸ್ಯೆ ಬಗೆಹರಿಯುತ್ತೆ!

28/03/2026 9:27 AM

ಇರಾನ್ ಅಣುಶಕ್ತಿ ಕೇಂದ್ರಗಳ ಮೇಲೆ ಇಸ್ರೇಲ್ ವಾಯುದಾಳಿ: ಪ್ರತೀಕಾರ ತೀರಿಸಿಕೊಂಡ ಟೆಹ್ರಾನ್, ಸೌದಿ ಅರೇಬಿಯಾದಲ್ಲಿ ಅಮೆರಿಕ ಸೈನಿಕರಿಗೆ ಗಾಯ!

28/03/2026 9:16 AM

JOB ALERT : : ತುಮಕೂರು ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ!

28/03/2026 9:15 AM

BREAKING : ಇಂದು ಬೆಂಗಳೂರಲ್ಲಿ `IPL’ ಪಂದ್ಯ : ‘ನಮ್ಮ ಮೆಟ್ರೋ’ ಸೇವೆ ಅವಧಿ ವಿಸ್ತರಣೆ!

28/03/2026 9:08 AM
State News
KARNATAKA

ಗ್ಯಾಸ್ ಸಿಲಿಂಡರ್ ವಿಳಂಬ: ಟೆನ್ಷನ್ ಬೇಡ, ತಕ್ಷಣ ಹೀಗೆ ಮಾಡಿದರೆ ನಿಮ್ಮ ಸಮಸ್ಯೆ ಬಗೆಹರಿಯುತ್ತೆ!

By kannadanewsnow5728/03/2026 9:27 AM KARNATAKA 2 Mins Read

ಪ್ರಸ್ತುತ ಹಲವೆಡೆ ಎಲ್ಪಿಜಿ ಸಿಲಿಂಡರ್ ವಿತರಣೆಯಲ್ಲಿ ವ್ಯತ್ಯಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರು ಆತಂಕಕ್ಕೊಳಗಾಗಿದ್ದಾರೆ. ಆದರೆ, ಈಗ ಗ್ರಾಹಕರು ತಮ್ಮ ಅಡುಗೆ…

JOB ALERT : : ತುಮಕೂರು ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ!

28/03/2026 9:15 AM

BREAKING : ಇಂದು ಬೆಂಗಳೂರಲ್ಲಿ `IPL’ ಪಂದ್ಯ : ‘ನಮ್ಮ ಮೆಟ್ರೋ’ ಸೇವೆ ಅವಧಿ ವಿಸ್ತರಣೆ!

28/03/2026 9:08 AM

ದ್ವಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳೇ ಗಮನಿಸಿ : `NEET’ ಪರೀಕ್ಷೆ ಇಲ್ಲದೇ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

28/03/2026 8:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.