ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಆರ್ ಸಿ ಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರಂತದ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿದೇಶಕ್ಕೆ ತೆರಳೋದಕ್ಕೆ ರಾಜ್ಯ ಸರ್ಕಾರ ಅನುಮತಿಸಿದೆ.
ಇಂದು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಮತ್ತು ವಾರ್ತಾ-ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದಂತ ಐಪಿಎಸ್ ಅಧಿಕಾರಿ ಹೇಮಂತ್ ಎಂ ನಿಂಬಾಳ್ಕರ್ ಅವರು ದಿನಾಂಕ 12-06-2025ರಿಂದ 27-06-2025ರವರೆಗೆ ವಿದೇಶ ಪ್ರವಾಸ ಕೈಗೊಳ್ಳಲು 16 ದಿನಗಳ ಗಳಿಕೆ ರಜೆಯನ್ನು ಮಂಜೂರು ಮಾಡಲಾಗಿದೆ. ದಿನಾಂಕ 28-06-2025 ಮತ್ತು 29-06-2025ರ ಎರಡು ದಿನಗಳ ಸಾರ್ವತ್ರಿಕ ರಜೆಯನ್ನು ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದಿದ್ದಾರೆ.
ಇನ್ನೂ ಹೇಮಂತ್ ಎಂ ನಿಂಬಾಳ್ಕರ್ ಅವರ ರಜಾ ಅವಧಿಯಲ್ಲಿ ಕರ್ನಾಟಕ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯದ ನಿರ್ದೇಶಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪದನಿಮಿತ್ತ ಜಂಟಿ ಕಾರ್ಯದರ್ಶಿ ಇವರನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹುದ್ದೆಯ ಸಮವರ್ತಿತ ಪ್ರಭಾರದಲ್ಲಿರಿಸಿದೆ ಎಂದು ಹೇಳಿದ್ದಾರೆ.
BIG NEWS : ಪ್ರಧಾನಿ ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ : CM ಸಿದ್ದರಾಮಯ್ಯ ವಾಗ್ದಾಳಿ