ಬೆಂಗಳೂರು: ರಾಜ್ಯ ಸರ್ಕಾರದಿಂದ ಅಗ್ನಿಶಾಮಕ ದಳದ ಡಿಜಿಪಿಯಾಗಿ IPS ಅಧಿಕಾರಿ ಮಾಲಿನಿ ಕೃಷ್ಣಮೂರ್ತಿಯನ್ನು ನೇಮಕ ಮಾಡಿ ಆದೇಶಿಸಿದೆ. ಈ ಮೂಲಕ ಇನ್ಮುಂದೆ ಅಗ್ನಿಶಾಮಕ ದಳದ ಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿ ಕಾರ್ಯನಿರ್ವಹಿಸಲಿದ್ದಾರೆ.

ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕಮಲ್ ಪಂತ್ ಅವರ ನಿವೃತ್ತಿಯಿಂದ ತೆರವಾದಂತ ಅಗ್ನಿ ಶಾಮಕ ದಳದ ಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿಯನ್ನು ನೇಮಕ ಮಾಡಿ ಆದೇಶಿಸಿದೆ.

ಮಾಲಿನಿ ಕೃಷ್ಣಮೂರ್ತಿಯವರು ಅಗ್ನಿಶಾಮಕ ದಳ, ಎಸ್ ಡಿ ಆರ್ ಎಫ್, ಹೋಂ ಗಾರ್ಡ್ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಲಿದ್ದಾರೆ.

1993 ಬ್ಯಾಚ್ IPS ಅಧಿಕಾರಿಯಾಗಿ ಪೊಲೀಸ್ ಇಲಾಖೆ ಸೇರಿದ್ದ ಮಾಲಿನಿ ಕೃಷ್ಣಮೂರ್ತಿ, ಬೆಂಗಳೂರು ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕೆಲಸ‌ ನಿರ್ವಹಿಸಿದ್ದರು. ಕಾರಗೃಹ ಇಲಾಖೆ DGPಯಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ರಾಜ್ಯದ ದಕ್ಷ ಹಾಗೂ ಪ್ರಾಮಾಣಿಕ ಮಹಿಳಾ ಅಧಿಕಾರಿಯಾಗಿದ್ದಾರೆ.

BREAKING: ಅತ್ಯಾಚಾರ ಕೇಸ್: ಜುಲೈ.8ರವರೆಗೆ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ

BREAKING : ಶಾಸಕ ವಿನಯ್‌ ಕುಲಕರ್ಣಿಗೆ ಕೋರ್ಟ್ ಶಾಕ್‌ : ಧಾರವಾಡ ಭೇಟಿಗೆ‌ ಮತ್ತೆ ನಿರಾಕರಣೆ

Share.
Exit mobile version