ತೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ನಿಧನದ ಬೆನ್ನಲ್ಲೇ ದೇಶದ ವಿದೇಶಾಂಗ ನೀತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಸ್ಪಷ್ಟಪಡಿಸಿದ್ದಾರೆ. ಖಮೇನಿ ಅವರು ಹಾಕಿಕೊಟ್ಟ ಹಾದಿಯಲ್ಲೇ ದೇಶವು ಮುಂದುವರಿಯಲಿದೆ ಎಂದು ಅವರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಆಕ್ರೋಶ:
ಖಮೇನಿ ನಿಧನದ ಹಿನ್ನೆಲೆಯಲ್ಲಿ ಇರಾನ್ ವಿದೇಶಾಂಗ ಸಚಿವಾಲಯವು ಪ್ರಕಟಣೆಯೊಂದನ್ನು ಹೊರಡಿಸಿದ್ದು, ಅದರಲ್ಲಿ ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇರಾನ್‌ನ ಪರಮಾಣು ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಟೆಹ್ರಾನ್ ಮತ್ತು ವಾಷಿಂಗ್ಟನ್ ನಡುವೆ ರಾಜತಾಂತ್ರಿಕ ಮಾತುಕತೆಗಳು ನಡೆಯುತ್ತಿದ್ದ ಸಂದರ್ಭದಲ್ಲೇ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳನ್ನು ಇರಾನ್ ಕಟುವಾಗಿ ಖಂಡಿಸಿದೆ.
ಶಾಂತಿ ಮಾತುಕತೆ ಮತ್ತು ಅಡೆತಡೆ:
ವಿಶೇಷವೆಂದರೆ, ಫೆಬ್ರವರಿ 26 ರಂದು ಜಿನೀವಾದಲ್ಲಿ ಇರಾನ್ ಮತ್ತು ಅಮೆರಿಕ ನಡುವೆ ಓಮನ್ ದೇಶದ ಮಧ್ಯಸ್ಥಿಕೆಯಲ್ಲಿ ಮಹತ್ವದ ಸಂಧಾನ ಮಾತುಕತೆಗಳು ನಡೆದಿದ್ದವು. ಈ ಮಾತುಕತೆಗಳ ಬೆನ್ನಲ್ಲೇ ದಾಳಿಗಳು ನಡೆದಿರುವುದು ರಾಜತಾಂತ್ರಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಮುಂದುವರಿಯಲಿದೆ ಹೋರಾಟ:
ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ಮಾತನಾಡಿ, “ಅಲಿ ಖಮೇನಿ ಅವರ ಚಿಂತನೆ ಮತ್ತು ಅವರ ಹಾದಿಯು ಮುಂದುವರಿಯಲಿದೆ” ಎಂದು ಹೇಳುವ ಮೂಲಕ ಇರಾನ್ ತನ್ನ ವಿದೇಶಾಂಗ ನಿಲುವಿನಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂಬ ಬಲವಾದ ಸಂದೇಶವನ್ನು ಜಗತ್ತಿಗೆ ರವಾನಿಸಿದ್ದಾರೆ.
ರಾಜ್ಯದ ಜನತೆಗೆ ಸಿಹಿ ಸುದ್ದಿ: ಸದ್ಯಕ್ಕಿಲ್ಲ ವಿದ್ಯುತ್ ದರ ಏರಿಕೆ; ಸಿಎಂ ಸ್ಪಷ್ಟನೆ








