ನವದೆಹಲಿ: ಜಾಗತಿಕ ರಾಜತಾಂತ್ರಿಕ ಸಂಘರ್ಷಗಳ ನಡುವೆಯೇ ಭಾರತದ ರಾಜಧಾನಿ ನವದೆಹಲಿಯು ಮತ್ತೊಂದು ಹೈವೋಲ್ಟೇಜ್ ಅಂತಾರಾಷ್ಟ್ರೀಯ ಸಭೆಗೆ ಸಾಕ್ಷಿಯಾಗುತ್ತಿದೆ. ಬ್ರಿಕ್ಸ್ (BRICS) ಒಕ್ಕೂಟದ ವಿದೇಶಾಂಗ ಸಚಿವರ ಮಹತ್ವದ ಸಭೆಯಲ್ಲಿ ಭಾಗವಹಿಸಲು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಮತ್ತು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರು ದೆಹಲಿಗೆ ಆಗಮಿಸುತ್ತಿದ್ದಾರೆ.
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹಾಗೂ ರಷ್ಯಾ-ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ಈ ಸಭೆಯು ಅತ್ಯಂತ ನಿರ್ಣಾಯಕವಾಗಿದೆ. ಜಾಗತಿಕ ಶಾಂತಿ ಮತ್ತು ಆರ್ಥಿಕ ಸ್ಥಿರತೆಯ ಬಗ್ಗೆ ಚರ್ಚಿಸಲು ಈ ನಾಯಕರು ವೇದಿಕೆ ಹಂಚಿಕೊಳ್ಳಲಿದ್ದಾರೆ.
ಭಾರತವು ಈ ಸಭೆಯ ಆತಿಥ್ಯ ವಹಿಸುತ್ತಿದ್ದು, ಪಶ್ಚಿಮ ಏಷ್ಯಾದ ಬಿಕ್ಕಟ್ಟನ್ನು ಶಮನಗೊಳಿಸಲು ಮತ್ತು ಇಂಧನ ಭದ್ರತೆಯ ಬಗ್ಗೆ ಒಮ್ಮತ ಮೂಡಿಸಲು ಪ್ರಯತ್ನಿಸಲಿದೆ.
ಬ್ರಿಕ್ಸ್ ಸಭೆಯ ಹೊರತಾಗಿ ಇರಾನ್ ಮತ್ತು ರಷ್ಯಾದ ಸಚಿವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸುವ ಸಾಧ್ಯತೆಯಿದೆ.
ಇರಾನ್ ಮತ್ತು ಅಮೆರಿಕ ನಡುವಿನ ಕದನ ವಿರಾಮದ ವೈಫಲ್ಯ ಮತ್ತು ಅದರ ಆರ್ಥಿಕ ಪರಿಣಾಮಗಳು. ವ್ಯಾಪಾರ ವ್ಯವಹಾರಗಳಲ್ಲಿ ಡಾಲರ್ ಮೇಲಿನ ಅವಲಂಬನೆ ಕಡಿಮೆ ಮಾಡಿ, ಸದಸ್ಯ ರಾಷ್ಟ್ರಗಳ ಸ್ಥಳೀಯ ಕರೆನ್ಸಿಗಳ ಬಳಕೆಯನ್ನು ಉತ್ತೇಜಿಸುವುದು.ಜಾಗತಿಕವಾಗಿ ಏರಿಕೆಯಾಗುತ್ತಿರುವ ತೈಲ ಬೆಲೆಗಳನ್ನು ನಿಯಂತ್ರಿಸಲು ಸದಸ್ಯ ರಾಷ್ಟ್ರಗಳ ನಡುವಿನ ಸಹಕಾರ.








