ಬೆಂಗಳೂರು: ರಾಜಕೀಯ ಪ್ರಾತಿನಿಧ್ಯ ಕಳೆದುಕೊಳ್ಳುತ್ತಿರುವ ಈ ಸಮುದಾಯದ ಯುವಕರು ಪ್ರಾಣವನ್ನೂ ಯಾಕೆ ಕಳೆದುಕೊಳ್ಳುತ್ತಿದ್ದಾರೆ? ಬಸವರಾಜ ಬೊಮ್ಮಾಯಿ ಅವರು ಕೇವಲ ಬಿಜೆಪಿ ಕಾರ್ಯಕರ್ತರಿಗಷ್ಟೇ ಮುಖ್ಯಮಂತ್ರಿಗಳೋ? ಇಲ್ಲವೇ ರಾಜ್ಯದ ಸಮಸ್ತ ಆರುವರೆ ಕೋಟಿ ಜನತೆಗೋ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹಸಿದ್ದಾರೆ.

ಈ ಸಂಬಂಧ ಸರಣಿ ಟ್ವಿಟ್ ಮಾಡಿರುವಂತ ಅವರು, ದಕ್ಷಿಣ ಕನ್ನಡದ ಇತ್ತೀಚಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳಿಗೂ, ಸಂಘ ಪರಿವಾರದೊಳಗಿನ ಆಂತರಿಕ ಬಿಕ್ಕಟ್ಟುಗಳಿಗೂ ಸಂಬಂಧ ಇರುವಂತೆ ಕಾಣುತ್ತಿದೆ. ಈ ಬೆಳವಣಿಗೆಗಳನ್ನು ಕೂಡಾ ಗಮನದಲ್ಲಿಟ್ಟುಕೊಂಡು ಪೊಲೀಸರು ತನಿಖೆ ನಡೆಸಿದರೆ ಸತ್ಯ ಬಯಲಾದೀತು ಎಂದು ಹೇಳಿದ್ದಾರೆ.

ಬೊಮ್ಮಾಯಿ ಕೇವಲ ಬಿಜೆಪಿಗಷ್ಟೇ ಅಲ್ಲ, ಕರ್ನಾಟಕದ ಮುಖ್ಯಮಂತ್ರಿ – ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅಂತಿಮ ದರ್ಶನಕ್ಕೆ ಆಗಮಿಸಿದ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್, ವಿ.ಎಚ್.ಪಿ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಸ್ಥಳೀಯ ಶಾಸಕರ ವಿರುದ್ಧ ಭುಗಿಲೆದ್ದ ಜನಾಕ್ರೋಶದ ಹಿನ್ನೆಲೆಯನ್ನೂ ಪೊಲೀಸರು ತನಿಖೆ ಮಾಡಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರಿಗೆ ಆತ್ಮೀಯನಾಗಿದ್ದ ಮೃತ ಪ್ರವೀಣ್ ನೆಟ್ಟಾರ್ ಒಂದಷ್ಟು ಕಾಲ ನಳಿನ್ ಅವರ ಕಾರಿಗೆ ಚಾಲಕನೂ ಆಗಿದ್ದರಂತೆ. ಇಷ್ಟೊಂದು ಆತ್ಮೀಯರಾಗಿದ್ದವರು ದೂರವಾಗಿರುವುದು ಯಾಕೆ? ಪೊಲೀಸರು ಅವರನ್ನೂ ವಿಚಾರಣೆಗೊಳಪಡಿಸಿದರೆ ದುಷ್ಕರ್ಮಿಗಳ ಪತ್ತೆಗೆ ನೆರವಾದೀತು ಎಂದು ಹೇಳಿದ್ದಾರೆ.

ಶಿವಮೊಗ್ಗ: ಜು.31ರಂದು ನಗರದ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ | Power Cut

ಹಿಂದುಗಳು ಸತ್ತರೆ ಮುಸ್ಲಿಮರ ಮೇಲೆ, ಮುಸ್ಲಿಮರು ಸತ್ತರೆ ಹಿಂದುಗಳ ಮೇಲೆ ಸಂಶಯ ಪಡುವುದು ಸಾಮಾನ್ಯವಾಗಿಬಿಟ್ಟಿದೆ. ಪೊಲೀಸ್ ತನಿಖೆಯೂ ಇದೇ ಜಾಡಿನಲ್ಲಿ ಸಾಗುತ್ತಿರುವುದರಿಂದ ಸಾವಿನ ಹಿಂದಿನ ಅಸಲಿ ಸತ್ಯ ಹೊರಗೆ ಬರದೆ ಮುಚ್ಚಿಹೋಗುತ್ತಿದೆ. ಹತ್ಯೆ ನಡೆಸಿರುವ ದುಷ್ಕರ್ಮಿಗಳು ಯಾವುದೇ ಪಕ್ಷ, ಜಾತಿ, ಧರ್ಮ ಇಲ್ಲವೇ ಸಂಘಟನೆಗಳಿಗೆ ಸೇರಿದ್ದರೂ ಮುಲಾಜಿಲ್ಲದೆ ಅವರನ್ನು ಬಂಧಿಸಿ ಜೈಲಿಗಟ್ಟಬೇಕು. ಯಾವುದಾದರೂ ಸಂಘಟನೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದರೆ ಅವುಗಳನ್ನು ನಿಷೇಧಿಸುವ ದಿಟ್ಟತನವನ್ನು ರಾಜ್ಯ ಬಿಜೆಪಿ ಸರ್ಕಾರ ತೋರಬೇಕು ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರು ಬಹಿರಂಗವಾಗಿ ಮುಸ್ಲಿಮರ ಬಗ್ಗೆ ಬೆಂಕಿ ಕಾರಿದರೂ, ಮುಸ್ಲಿಂ ಉದ್ಯಮಿಗಳ ಜೊತೆ ಅವರಿಗೆ ಹಾರ್ದಿಕ ಸಂಬಂಧ ಇರುವುದನ್ನು ಅವರೇ ಹಲವಾರು ಬಾರಿ ಬಹಿರಂಗ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ಈ ಸಂಬಂಧಗಳು ಕೇವಲ ಸಾಮಾಜಿಕವಾದುದ್ದೇ? ಇಲ್ಲವೇ ವ್ಯಾಪಾರ ವಹಿವಾಟಿನದ್ದೇ? ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾಕೆ ಹಿಂದುಳಿದ ಜಾತಿಗಳ ಅದರಲ್ಲೂ ಮುಖ್ಯವಾಗಿ ಬಿಲ್ಲವ ಯುವಕರೇ ಕೋಮುಘರ್ಷಣೆಯಲ್ಲಿ ಬಲಿಯಾಗುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

Breaking news:‌ ಮಾಸ್ಕೋದಲ್ಲಿ 15 ಅಂತಸ್ತಿನ ಕಟ್ಟಡದಲ್ಲಿ ಭಾರೀ ಬೆಂಕಿ ಅವಘಡ: 8 ಮಂದಿ ಸಾವು, ಹಲವರ ರಕ್ಷಣೆ

ರಾಜಕೀಯ ಪ್ರಾತಿನಿಧ್ಯ ಕಳೆದುಕೊಳ್ಳುತ್ತಿರುವ ಈ ಸಮುದಾಯದ ಯುವಕರು ಪ್ರಾಣವನ್ನೂ ಯಾಕೆ ಕಳೆದುಕೊಳ್ಳುತ್ತಿದ್ದಾರೆ? ಬಸವರಾಜ ಬೊಮ್ಮಾಯಿ ಅವರು ಕೇವಲ ಬಿಜೆಪಿ ಕಾರ್ಯಕರ್ತರಿಗಷ್ಟೇ ಮುಖ್ಯಮಂತ್ರಿಗಳೋ? ಇಲ್ಲವೇ ರಾಜ್ಯದ ಸಮಸ್ತ ಆರುವರೆ ಕೋಟಿ ಜನತೆಗೋ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

Share.
Exit mobile version