Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾರದು ಹೈಕಮಾಂಡ್.? “ಅದು ಹೈಕಮಾಂಡ್ ಕೈಯಲ್ಲಿದೆ” ಎಂದ ಕಾಂಗ್ರೆಸ್ ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಟ್ರೋಲ್

30/06/2025 3:33 PM

BREAKING : ಮಂಗಳೂರಲ್ಲಿ ಘೋರ ಘಟನೆ : ಶಾಲೆಯ ಮೇಲ್ಚಾವಣಿ ಕುಸಿದು ಓರ್ವ ವಿದ್ಯಾರ್ಥಿಗೆ ಗಾಯ!

30/06/2025 3:27 PM

ಪ್ರಾಣಿಗಳಿಗೆ ‘ಪಶು’ ಪದ ಬಳಸುವುದು ಸೂಕ್ತವಲ್ಲ : ರಾಷ್ಟ್ರಪತಿ ದ್ರೌಪದಿ ಮುರ್ಮು

30/06/2025 3:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸರ್ಕಾರಿ ನೌಕರಿ’ಯಲ್ಲಿದ್ದು ‘ಬಿಪಿಎಲ್ ಕಾರ್ಡ್’ ಪಡೆಯುವುದು ನ್ಯಾಯವೇ?: ಬಿಜೆಪಿಗರಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಪ್ರಶ್ನೆ
KARNATAKA

‘ಸರ್ಕಾರಿ ನೌಕರಿ’ಯಲ್ಲಿದ್ದು ‘ಬಿಪಿಎಲ್ ಕಾರ್ಡ್’ ಪಡೆಯುವುದು ನ್ಯಾಯವೇ?: ಬಿಜೆಪಿಗರಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಪ್ರಶ್ನೆ

By kannadanewsnow0922/11/2024 4:35 PM

ಬೆಂಗಳೂರು: ಅನರ್ಹರು ಬಡವರ ಹೆಸರಿನಲ್ಲಿ ಕಾರ್ಡ್ ಹೊಂದಿದ್ದರೇ ಅವರ ಕಾರ್ಡ್ ಮಾತ್ರ ರದ್ದು ಮಾಡಲಾಗುತ್ತದೆ. ಇಷ್ಟು ಸ್ಪಷ್ಟವಾಗಿ ಹೇಳಿದ್ದಾಗ್ಯೂ ಸಹ ಬಿಜೆಪಿ ಅವರಿಗೆ ವಿಷಯಾಂತರ ಮಾಡಿ ಜನರನ್ನು ದಾರಿತಪ್ಪಿಸಿ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಚಾಳಿ ಕರಗತವಾಗಿದೆ. ಸರ್ಕಾರಿ ನೌಕರಿಯಲ್ಲಿದ್ದು ಬಿಪಿಎಲ್ ಕಾರ್ಡ್ ಪಡೆಯುವುದು ನ್ಯಾಯವೇ ಎಂಬುದಾಗಿ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮುಖ್ಯಮಂತ್ರಿಗಳು ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಸ್ಪಷ್ಟವಾಗಿ ಹೇಳಿದ್ದಾರೆ. ಅರ್ಹರಾದವರಿಗೆ ಯಾವುದೇ ರೀತಿಯಿಂದಲೂ ಪಡಿತರ ಕಾರ್ಡ್ ರದ್ದಾಗುವುದಿಲ್ಲ ಎಂದು.  ಅನರ್ಹರು ಬಡವರ ಹೆಸರಿನಲ್ಲಿ ಕಾರ್ಡ್ ಹೊಂದಿದ್ದರೆ ಅವರ ಕಾರ್ಡ್ ಅನ್ನು ಮಾತ್ರ ರದ್ದು ಮಾಡಲಾಗುತ್ತದೆ ಎಂದಿದ್ದಾರೆ.

ಷ್ಟು ಸ್ಪಷ್ಟವಾಗಿ ಹೇಳಿದ್ದಾಗ್ಯೂ ಸಹ ಬಿಜೆಪಿ  ಅವರಿಗೆ ವಿಷಯಾಂತರ ಮಾಡಿ ಜನರನ್ನು ದಾರಿತಪ್ಪಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಚಾಳಿ ಕರಗತವಾಗಿದೆ. ಸರ್ಕಾರಿ ನೌಕರಿಯಲ್ಲಿದ್ದು ಬಿಪಿ‌ಎಲ್ ಕಾರ್ಡ್ ಪಡೆಯುವುದು ನ್ಯಾಯವೇ? ಎಂದು ಪ್ರಶ್ನಿಸಿದ್ದಾರೆ.

ಎಸ್.ಎಂ‌.ಕೃಷ್ಣ ರವರು ಮುಖ್ಯಮಂತ್ರಿಗಳಾಗಿದ್ದಾಗ 2003ರಲ್ಲಿ ನಾನು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವನಾಗಿದ್ದಾಗ ನಗರ ಪ್ರದೇಶದಲ್ಲಿನ ಬಡವರಿಗೆ (Urban Poor) ಮೊದಲ ಬಾರಿಗೆ ಬಿಪಿಎಲ್ ಕಾರ್ಡ್ ಗಳನ್ನು ವಿತರಿಸುವ ಯೋಜನೆ ಜಾರಿಗೆ ತಂದಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ ಅತೀ ಹೆಚ್ಚು ದಾಖಲೆ ಮಟ್ಟದ ರೇಷನ್ ಕಾರ್ಡ್ ಗಳನ್ನು ವಿತರಿಸಿದ್ದು ನನ್ನ ಮತ್ತು ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಎಂದು ತಿಳಿಸಿದ್ದಾರೆ.

ನಮ್ಮದು ಬಡವರ ಪರ ಇರುವ ಸರ್ಕಾರ ಕಾರ್ಪೊರೇಟ್ ಪರ ಇರುವ ಸರ್ಕಾರ ಅಲ್ಲ. ಸದ್ದಿಲ್ಲದೇ ಕೇಂದ್ರ ಸರ್ಕಾರದಿಂದ ಪ್ರಹಾರ! 5.8 ಕೋಟಿ ಕಾರ್ಡ್ ಗಳನ್ನು ರದ್ದು ಮಾಡಲು ಹೊರಟಿರುವ ಬಿಜೆಪಿ ಸರ್ಕಾರದ ಬಗ್ಗೆ ಚಕಾರವೆತ್ತುವ ಎದೆಗಾರಿಕೆ ಅವರಲ್ಲಿದೆಯೇ? ಬಿ.ಪಿ.ಎಲ್ ಕಾರ್ಡ್ ರದ್ದು ಕುರಿತಂತೆ ನಮ್ಮ ರಾಜ್ಯ ಸರ್ಕಾರದ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿರುವ ರಾಜ್ಯ ಬಿಜೆಪಿಯ ಮಹಾನ್ ಹೋರಾಟಗಾರರೆಲ್ಲರೂ ಈಗ ಗಪ್-ಚುಪ್ ಎಂದು ವಾಗ್ಧಾಳಿ ನಡೆಸಿದ್ದಾರೆ.

ಪ್ರಹ್ಲಾದ್ ಜೋಷಿ, ವಿಜಯೇಂದ್ರ, ಅಶೋಕ್ , ಶೋಭಾ ಕರಂದ್ಲಾಜೆ ಇವರೆಲ್ಲಾ ಕೇಂದ್ರದ ವಿರುದ್ಧ ಹೋರಾಟ ಮಾಡುವಿರಾ? ರಾಜ್ಯ ಬಿಜೆಪಿಯ ಅಧಿಕೃತ ಅಧ್ಯಕ್ಷರಾದ ಬಿವೈ ವಿಜಯೇಂದ್ರ ಅವರನ್ನು ಕೆಳಗಿಳಿಸಲು ಆತುರದಲ್ಲಿರುವ ಬಿಜೆಪಿ ಬಂಡಾಯ ಗುಂಪಿನ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಇದಕ್ಕೆ ಏನಂತೀರಾ? ನಿಮ್ಮ ನಿಮ್ಮಲ್ಲೇ ಅಸ್ತಿತ್ವಕ್ಕಾಗಿ ಹೋರಾಡುತ್ತಿರುವ ಬಿಜೆಪಿ ನಾಯಕರೇ ಪ್ರಧಾನಿ ನರೇಂದ್ರ ಮೋದಿ ನಿವಾಸ 7-LKM ಮುಂದೆ ಧರಣಿ ಮಾಡಿ, ಬಿಪಿಎಲ್ ರದ್ದಾದ ಅರ್ಹರಿಗೆ ನ್ಯಾಯ ಕೊಡಿಸುವಿರಾ? ಎಂದು ಕೇಳಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಸ್ಪಷ್ಟವಾಗಿ ಹೇಳಿದ್ದಾರೆ ಅರ್ಹರಾದವರಿಗೆ ಯಾವುದೇ ರೀತಿಯಿಂದಲೂ ಪಡಿತರ ಕಾರ್ಡ್ ರದ್ದಾಗುವುದಿಲ್ಲ ಎಂದು.

ಅನರ್ಹರು ಬಡವರ ಹೆಸರಿನಲ್ಲಿ ಕಾರ್ಡ್ ಹೊಂದಿದ್ದರೆ ಅವರ ಕಾರ್ಡ್ ಅನ್ನು ಮಾತ್ರ ರದ್ದು ಮಾಡಲಾಗುತ್ತದೆ.

ಇಷ್ಟು ಸ್ಪಷ್ಟವಾಗಿ ಹೇಳಿದ್ದಾಗ್ಯೂ ಸಹ… pic.twitter.com/4yHOGvXdc6

— Ramalinga Reddy (@RLR_BTM) November 22, 2024

BREAKING: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ | Prajwal Revanna

ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುತ್ತವೆ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ

Share. Facebook Twitter LinkedIn WhatsApp Email

Related Posts

BREAKING : ಮಂಗಳೂರಲ್ಲಿ ಘೋರ ಘಟನೆ : ಶಾಲೆಯ ಮೇಲ್ಚಾವಣಿ ಕುಸಿದು ಓರ್ವ ವಿದ್ಯಾರ್ಥಿಗೆ ಗಾಯ!

30/06/2025 3:27 PM1 Min Read

BIG NEWS : ಡಿಕೆ ಶಿವಕುಮಾರ್ ಒಂದು ಬಾರಿ ಸಿಎಂ ಆಗಲಿ ಅನ್ನೋದು ನನ್ನ ಅಭಿಪ್ರಾಯ : ಶಾಸಕ HC ಬಾಲಕೃಷ್ಣ ಹೇಳಿಕೆ

30/06/2025 3:16 PM1 Min Read

BREAKING: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ನಿಧನ

30/06/2025 2:43 PM1 Min Read
Recent News

ಯಾರದು ಹೈಕಮಾಂಡ್.? “ಅದು ಹೈಕಮಾಂಡ್ ಕೈಯಲ್ಲಿದೆ” ಎಂದ ಕಾಂಗ್ರೆಸ್ ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಟ್ರೋಲ್

30/06/2025 3:33 PM

BREAKING : ಮಂಗಳೂರಲ್ಲಿ ಘೋರ ಘಟನೆ : ಶಾಲೆಯ ಮೇಲ್ಚಾವಣಿ ಕುಸಿದು ಓರ್ವ ವಿದ್ಯಾರ್ಥಿಗೆ ಗಾಯ!

30/06/2025 3:27 PM

ಪ್ರಾಣಿಗಳಿಗೆ ‘ಪಶು’ ಪದ ಬಳಸುವುದು ಸೂಕ್ತವಲ್ಲ : ರಾಷ್ಟ್ರಪತಿ ದ್ರೌಪದಿ ಮುರ್ಮು

30/06/2025 3:16 PM

BIG NEWS : ಡಿಕೆ ಶಿವಕುಮಾರ್ ಒಂದು ಬಾರಿ ಸಿಎಂ ಆಗಲಿ ಅನ್ನೋದು ನನ್ನ ಅಭಿಪ್ರಾಯ : ಶಾಸಕ HC ಬಾಲಕೃಷ್ಣ ಹೇಳಿಕೆ

30/06/2025 3:16 PM
State News
KARNATAKA

BREAKING : ಮಂಗಳೂರಲ್ಲಿ ಘೋರ ಘಟನೆ : ಶಾಲೆಯ ಮೇಲ್ಚಾವಣಿ ಕುಸಿದು ಓರ್ವ ವಿದ್ಯಾರ್ಥಿಗೆ ಗಾಯ!

By kannadanewsnow0530/06/2025 3:27 PM KARNATAKA 1 Min Read

ಮಂಗಳೂರು : ಮಂಗಳೂರಲ್ಲಿ ಇಂದು ಘೋರವಾದ ದುರಂತ ಸಂಭವಿಸಿದ್ದು, ಶಾಲೆಯ ಮೇಲ್ಚಾವಣಿ ಕುಸಿದು ಓರ್ವ ಯುಕೆಜಿ ವಿದ್ಯಾರ್ಥಿಗೆ ಗಂಭೀರವಾದ ಗಾಯಗಳಾಗಿರುವ…

BIG NEWS : ಡಿಕೆ ಶಿವಕುಮಾರ್ ಒಂದು ಬಾರಿ ಸಿಎಂ ಆಗಲಿ ಅನ್ನೋದು ನನ್ನ ಅಭಿಪ್ರಾಯ : ಶಾಸಕ HC ಬಾಲಕೃಷ್ಣ ಹೇಳಿಕೆ

30/06/2025 3:16 PM

BREAKING: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ನಿಧನ

30/06/2025 2:43 PM

BIG NEWS: ನಮ್ಮ ಕಾಂಗ್ರೆಸ್ ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತೆ: ಸಿಎಂ ಸಿದ್ಧರಾಮಯ್ಯ

30/06/2025 2:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.