ಬೆಂಗಳೂರು: ಕನ್ನಡಕ್ಕೆ ( Kannada ) ಶಾಸ್ತ್ರೀಯ ಸ್ಥಾನಮಾನ ಸಿಕ್ಕಿ 15 ವರ್ಷಗಳೇ ಆಯಿತು.13 ವರ್ಷಗಳಲ್ಲಿ ಕನ್ನಡಕ್ಕೆ ಸಿಕ್ಕಿದ ಅನುದಾನ ಕೇವಲ 3 ಕೋಟಿ ರೂ.!! ತಮಿಳಿಗೆ ಸಿಕ್ಕಿದ್ದು 43 ಕೋಟಿ. ಆದರೆ, ಸಂಸ್ಕೃತಕ್ಕೆ ಇವರು ಕೊಟ್ಟಿದ್ದು ಬರೋಬ್ಬರಿ 643 ಕೋಟಿ!!! ಕನ್ನಡದ ಕಣ್ಣಿಗೆ ಸುಣ್ಣ, ಬೇರೆ ಭಾಷೆಗಳಿಗೆ ಬೆಣ್ಣೆ. ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ? ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Farmer CM HD Kumaraswamy ) ಕಿಡಿಕಾರಿದ್ದಾರೆ.
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿ 15 ವರ್ಷಗಳೇ ಆಯಿತು.13 ವರ್ಷಗಳಲ್ಲಿ ಕನ್ನಡಕ್ಕೆ ಸಿಕ್ಕಿದ ಅನುದಾನ ಕೇವಲ 3 ಕೋಟಿ ರೂ.!! ತಮಿಳಿಗೆ ಸಿಕ್ಕಿದ್ದು 43 ಕೋಟಿ. ಆದರೆ, ಸಂಸ್ಕೃತಕ್ಕೆ ಇವರು ಕೊಟ್ಟಿದ್ದು ಬರೋಬ್ಬರಿ 643 ಕೋಟಿ!!! ಕನ್ನಡದ ಕಣ್ಣಿಗೆ ಸುಣ್ಣ, ಬೇರೆ ಭಾಷೆಗಳಿಗೆ ಬೆಣ್ಣೆ.
ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ? 1/5#ಕನ್ನಡ— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 7, 2023
ಈ ಬಗ್ಗೆ ಇಂದು ಸರಣಿ ಟ್ವಿಟ್ ( Twitter ) ಮಾಡಿದ್ದು, ಕೇಂದ್ರದಿಂದ ಕನ್ನಡಕ್ಕೆ ಆಗುತ್ತಿರುವ ಅನುದಾನದ ಅನ್ಯಾಯದ ವಿರುದ್ಧ ನಾನು ಅನೇಕ ಸಲ ದನಿ ಎತ್ತಿದ್ದೇನೆ. ಬಿಜೆಪಿ,ಕಾಂಗ್ರೆಸ್ ಪಕ್ಷಗಳ ಆಡಳಿತಕ್ಕೆ ಅದು ಕೇಳಲೇ ಇಲ್ಲ. ಕೇಂದ್ರದಲ್ಲಿ ಬಿಜೆಪಿ ಸರಕಾರ ( BJP Government ) ಬಂದ ಮೇಲೆ ಸಂಸ್ಕೃತ, ಹಿಂದಿ ತುಷ್ಟೀಕರಣದಿಂದ ಕನ್ನಡಕ್ಕೆ ಅದೆಷ್ಟು ವಂಚನೆ ಆಗಿದೆ ಎನ್ನುವುದಕ್ಕೆ ಅನುದಾನದ ತಾರತಮ್ಯವೇ ಸಾಕ್ಷಿ ಎಂದು ವಾಗ್ಧಾಳಿ ನಡೆಸಿದ್ದಾರೆ.
ಕೇಂದ್ರದಿಂದ ಕನ್ನಡಕ್ಕೆ ಆಗುತ್ತಿರುವ ಅನುದಾನದ ಅನ್ಯಾಯದ ವಿರುದ್ಧ ನಾನು ಅನೇಕ ಸಲ ದನಿ ಎತ್ತಿದ್ದೇನೆ. ಬಿಜೆಪಿ,ಕಾಂಗ್ರೆಸ್ ಪಕ್ಷಗಳ ಆಡಳಿತಕ್ಕೆ ಅದು ಕೇಳಲೇ ಇಲ್ಲ. ಕೇಂದ್ರದಲ್ಲಿ @BJP4India ಸರಕಾರ ಬಂದ ಮೇಲೆ ಸಂಸ್ಕೃತ, ಹಿಂದಿ ತುಷ್ಟೀಕರಣದಿಂದ ಕನ್ನಡಕ್ಕೆ ಅದೆಷ್ಟು ವಂಚನೆ ಆಗಿದೆ ಎನ್ನುವುದಕ್ಕೆ ಅನುದಾನದ ತಾರತಮ್ಯವೇ ಸಾಕ್ಷಿ. 2/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 7, 2023
ಈಗ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ದೊಡ್ದರಂಗೇಗೌಡ ಅವರೇ ಸಮ್ಮೇಳನದ ತಮ್ಮ ಭಾಷಣದಲ್ಲಿ ಅನುದಾನದ ಅನ್ಯಾಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎದುರೇ ಬಿಜೆಪಿ ಸರಕಾರದ ಮುಖಕ್ಕೆ ರಾಚುವಂತೆ ಹೇಳಿದ್ದಾರೆ. ಈ ವಿಷಯ ಪ್ರಸ್ತಾಪ ಮಾಡಿದ ಅವರನ್ನು ಮನಸಾರೆ ಅಭಿನಂದಿಸುತ್ತೇನೆ ಎಂದಿದ್ದಾರೆ.
ಈಗ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ದೊಡ್ದರಂಗೇಗೌಡ ಅವರೇ ಸಮ್ಮೇಳನದ ತಮ್ಮ ಭಾಷಣದಲ್ಲಿ ಅನುದಾನದ ಅನ್ಯಾಯವನ್ನು ಮುಖ್ಯಮಂತ್ರಿ ಶ್ರೀ @BSBommai ಅವರ ಎದುರೇ ಬಿಜೆಪಿ ಸರಕಾರದ ಮುಖಕ್ಕೆ ರಾಚುವಂತೆ ಹೇಳಿದ್ದಾರೆ. ಈ ವಿಷಯ ಪ್ರಸ್ತಾಪ ಮಾಡಿದ ಅವರನ್ನು ಮನಸಾರೆ ಅಭಿನಂದಿಸುತ್ತೇನೆ.3/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 7, 2023
ಹಿಂದಿ ಹೇರಿಕೆ ಮೂಲಕ ಸದಾ ಕನ್ನಡದ ಮೇಲೆ ಪ್ರಹಾರ ನಡೆಸುತ್ತಲೇ ಇರುವ @BJP4India, ಅವಕಾಶ ಸಿಕ್ಕಾಗಲೆಲ್ಲ ಕನ್ನಡದ ಬೇರುಗಳಿಗೆ ಕೊಡಲಿಪೆಟ್ಟು ಕೊಡುತ್ತಿದೆ. ನೆಲ, ಜಲ, ಭಾಷೆ ವಿಷಯದಲ್ಲಿ ಕರ್ನಾಟಕಕ್ಕೆ ಆ ಪಕ್ಷವು ಅನ್ಯಾಯದ ಸರಣಿಯನ್ನೇ ಮುಂದುವರಿಸಿದೆ. ಬೆಳಗಾವಿ ವಿಷಯದಲ್ಲಿ @BJP4India ವರ್ತಿಸುತ್ತಿರುವ ರೀತಿ ಕಳವಳಕಾರಿ ಎಂದು ಹೇಳಿದ್ದಾರೆ.
ಹಿಂದಿ ಹೇರಿಕೆ ಮೂಲಕ ಸದಾ ಕನ್ನಡದ ಮೇಲೆ ಪ್ರಹಾರ ನಡೆಸುತ್ತಲೇ ಇರುವ @BJP4India, ಅವಕಾಶ ಸಿಕ್ಕಾಗಲೆಲ್ಲ ಕನ್ನಡದ ಬೇರುಗಳಿಗೆ ಕೊಡಲಿಪೆಟ್ಟು ಕೊಡುತ್ತಿದೆ. ನೆಲ, ಜಲ, ಭಾಷೆ ವಿಷಯದಲ್ಲಿ ಕರ್ನಾಟಕಕ್ಕೆ ಆ ಪಕ್ಷವು ಅನ್ಯಾಯದ ಸರಣಿಯನ್ನೇ ಮುಂದುವರಿಸಿದೆ. ಬೆಳಗಾವಿ ವಿಷಯದಲ್ಲಿ @BJP4India ವರ್ತಿಸುತ್ತಿರುವ ರೀತಿ ಕಳವಳಕಾರಿ.4/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 7, 2023
ಒಕ್ಕೂಟ ಭಾಷೆಗಳ ನಡುವೆ ಅನುದಾನದಲ್ಲಿ ಮಾತ್ರವಲ್ಲ, ಯಾವ ವಿಷಯದಲ್ಲೂ ತಾರತಮ್ಯ ಎಸಗಬಾರದು. ಈ ವ್ಯವಸ್ಥೆಯಲ್ಲಿ ಆಡಳಿತ ನಡೆಸುವವರಿಗೆ ರಾಜಧರ್ಮ ಪಾಲನೆ ಅತ್ಯಗತ್ಯ. ದೇಶಕ್ಕೆ ಅತಿಹೆಚ್ಚು ತೆರಿಗೆ ತೆರುತ್ತಿರುವ ಕರ್ನಾಟಕದ ವಿಷಯದಲ್ಲಿ ಇಂಥ ರಾಜಧರ್ಮ ಪಾಲನೆ ಆಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಒಕ್ಕೂಟ ಭಾಷೆಗಳ ನಡುವೆ ಅನುದಾನದಲ್ಲಿ ಮಾತ್ರವಲ್ಲ, ಯಾವ ವಿಷಯದಲ್ಲೂ ತಾರತಮ್ಯ ಎಸಗಬಾರದು. ಈ ವ್ಯವಸ್ಥೆಯಲ್ಲಿ ಆಡಳಿತ ನಡೆಸುವವರಿಗೆ ರಾಜಧರ್ಮ ಪಾಲನೆ ಅತ್ಯಗತ್ಯ. ದೇಶಕ್ಕೆ ಅತಿಹೆಚ್ಚು ತೆರಿಗೆ ತೆರುತ್ತಿರುವ ಕರ್ನಾಟಕದ ವಿಷಯದಲ್ಲಿ ಇಂಥ ರಾಜಧರ್ಮ ಪಾಲನೆ ಆಗುತ್ತಿಲ್ಲ.5/5#ಕನ್ನಡ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 7, 2023