ಬೆಂಗಳೂರು: ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 53,11,000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೂ ಹೆಚ್ಚಾಗಿದೆ. ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಅಲ್ವಾ? ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಇಡೀ ದೇಶದಲ್ಲಿ ಬೆಲೆ ಏರಿಕೆಯಾಗಿದೆ. ಬಿಜೆಪಿ ನಾಯಕರಿಗೆ ಜನಾಕ್ರೋಶ ಯಾತ್ರೆ ಮಾಡುವ ಯಾವ ನೈತಿಕತೆಯು ಇಲ್ಲ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ.
ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ @BJP4India ಸರ್ಕಾರ. ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಇಡೀ ದೇಶದಲ್ಲಿ ಬೆಲೆ ಏರಿಕೆಯಾಗಿದೆ. @BJP4Karnataka ನಾಯಕರಿಗೆ ಜನಾಕ್ರೋಶ ಯಾತ್ರೆ ಮಾಡುವ ಯಾವ ನೈತಿಕತೆಯು ಇಲ್ಲ.
ರಾಜ್ಯ ಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ…
— Siddaramaiah (@siddaramaiah) April 12, 2025
ರಾಜ್ಯ ಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಚ್ಚಾ ತೈಲದ ಬೆಲೆಯ ಮೇಲೆ ನಿಗದಿಯಾಗುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಒಂದು ಬ್ಯಾರಲ್ ಕಚ್ಚಾತೈಲಕ್ಕೆ 120 ಡಾಲರ್ ಇತ್ತು, ಈಗ 65 ಡಾಲರ್ ಗೆ ಇಳಿದಿದೆ. ಅಂದು ಗ್ಯಾಸ್ ಸಿಲಿಂಡರ್ ಬೆಲೆ 400 ರೂ. ಇತ್ತು, ಇಂದು 800 ರೂ. ಮೀರಿದೆ. ಪೆಟ್ರೋಲ್ – ಡೀಸೆಲ್ ಬೆಲೆಯನ್ನು ನರೇಂದ್ರ ಮೋದಿ ಸರ್ಕಾರ ಹೆಚ್ಚಿಸಿರುವ ಬಗ್ಗೆ ಜನರು ಪ್ರಶ್ನೆ ಕೇಳಬೇಕಿದೆ ಎಂದಿದ್ದಾರೆ.
ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂಬ ಬಿಜೆಪಿಯವರ ಆರೋಪ ಅವರಿಗೇ ನಾಚಿಕೆಗೇಡಿನದು. ಬಿಜೆಪಿಯವರ ಕಾಲದಲ್ಲಿ ಅನುದಾನವಿಲ್ಲದಿದ್ದರೂ ಕಾಮಗಾರಿಗಳಿಗೆ ಮಂಜೂರಾತಿ ನೀಡಿ, ಟೆಂಡರ್ ಪ್ರಕ್ರಿಯೆ ಕೈಗೊಂಡಿದ್ದರು. ಈಗ ನಮಗೆ ಪಾಠ ಹೇಳುತ್ತಿದ್ದಾರೆ.
ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರ ಸರ್ಕಾರದ ಅವಧಿಯಲ್ಲಿಯೇ ರಾಜ್ಯದ ಆರ್ಥಿಕತೆ ಕುಸಿದಿತ್ತು. ನಮ್ಮ ಅವಧಿಯಲ್ಲಿ ಹಿಂದಿನ ವರ್ಷಕ್ಕಿಂತ ಈ ಸಾಲಿನ ಬಜೆಟ್ ನ ಪ್ರಮಾಣ ಸುಮಾರು 38 ಸಾವಿರ ಕೋಟಿಯಷ್ಟು ಹೆಚ್ಚಾಗಿದೆ. ಇದು ಸರ್ಕಾರವೊಂದರ ಆರ್ಥಿಕ ದಿವಾಳಿತನವೇ? ಎಂಬು ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.
BREAKING: ಉಕ್ರೇನ್ ನಲ್ಲಿರುವ ಭಾರತೀಯ ಫಾರ್ಮಾ ಕಂಪನಿಯ ಗೋದಾಮಿಗೆ ರಷ್ಯಾದಿಂದ ಕ್ಷಿಪಣಿ ದಾಳಿ
Watch Video: ಜನಸಾಮಾನ್ಯರಂತೆ ‘ಸಾರಿಗೆ ಬಸ್’ನಲ್ಲಿ ಪ್ರಯಾಣಿಸಿ ಗಮನ ಸೆಳೆದ ‘ಕಂದಾಯ ಸಚಿವ ಕೃಷ್ಣಬೈರೇಗೌಡ’
ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿಗಳು ಸೇರಿದಂತೆ 102 ಜಾತಿಗಳಿವೆ: ಸಿಎಂ ಸಿದ್ಧರಾಮಯ್ಯ