ಬೆಂಗಳೂರು: ರಾಜಕಾರಣದಲ್ಲಿ ಶತ್ರುತ್ವ ಎನ್ನುವುದು ಶಾಶ್ವತವಲ್ಲ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಸುಮಲತಾ ಅವರು ನನಗೆ ಶತ್ರುವಲ್ಲ. ಅವರನ್ನು ಭೇಟಿಯಾಗುವುದಕ್ಕೆ ಯಾವುದೇ ಹಿಂಜರಿಕೆ ಇಲ್ಲ ಎಂದಿದ್ದಾರೆ.

ಮೈಸೂರಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮಗಳು; ʼಸುಮಲತಾ ಅವರ ಜೊತೆ ಯಾವಾಗ ಮಾತನಾಡುತ್ತೀರಿ?ʼ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಖಂಡಿತವಾಗಿಯೂ ಅವರು ನನಗೆ ಶತ್ರು ಅಲ್ಲ. ಅಂಬರೀಶ್ ಬದುಕಿದ್ದಾಗ ಜೊತೆಯಲ್ಲಿ ಅವರ ಮನೆಯಲ್ಲಿ ಊಟ ಮಾಡಿದ್ದೇವೆ. ಆಗ ಸುಮಲತಾ ಅವರೇ ನಮಗೆ ಊಟ ಬಡಿಸಿದ್ದಾರೆ. ಹೀಗಿರುವಾಗ ಆಗಿ ಹೋಗಿದ್ದನ್ನೇ ಸಾಧಿಸಿಕೊಂಡು ಹೋಗುವ ಅವಶ್ಯಕತೆ ಇಲ್ಲ ಎಂದರು.

ರಾಜಕೀಯ ಸನ್ನಿವೇಶ, ಆಯಾ ಸಂದರ್ಭದಲ್ಲಿ ಸಂಘರ್ಷ ಆಗಿದೆ. ಆ ರಾಮಾಂಜನೇಯರ ನಡುವೆಯೇ ಯುದ್ಧ ಆಗಿದೆಯಲ್ಲವೇ? ಅವರ ಮುಂದೆ ನಾವೆಷ್ಟು? ನಾವು ಹುಲು ಮಾನವರು. ಸಮಯ ಬಂದಾಗ ನಾನು ಸುಮಲತಾ ಅವರ ಜೊತೆ ಮಾತನಾಡುತ್ತೇನೆ ಎಂದರು ಕುಮಾರಸ್ವಾಮಿ ಅವರು.

ಭಾರತದ ಹೊಸ ಫೈಟರ್ ಜೆಟ್ ‘ತೇಜಸ್ MK-1A’ ಮೊದಲ ಹಾರಾಟ ಯಶಸ್ವಿ : ಹಿಂದಿನ ವಿಮಾನಕ್ಕಿಂತ ಹೆಚ್ಚು ಸುಧಾರಿತ, ಮಾರಕ

BREAKING : ಚಿತ್ರದುರ್ಗ : ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ : ದಾಖಲೆ ಇಲ್ಲದ ‘5 ಕೆಜಿ’ ಚಿನ್ನಾಭರಣ ಜಪ್ತಿ

Share.
Exit mobile version