ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ ಇಲ್ಲವೇ ಎಂಬ ದೊಡ್ಡ ಯಕ್ಷಪ್ರಶ್ನೆ ನಿರ್ಮಾಣವಾಗಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ವಿಶ್ಲೇಷಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿಯವರ ಹತ್ಯೆ ಆಗಿದ್ದನ್ನು ಪ್ರಸ್ತಾಪಿಸಿದರು. ಕರ್ನಾಟಕವು ಒಂದು ರೀತಿ ಜಂಗಲ್ ರಾಜ್ಯವಾಗಿದೆ ಎಂದು ಟೀಕಿಸಿದರು. ರಾಜ್ಯದ ಗೃಹ ಸಚಿವರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ಕೇಳಿದರು.
ರಾಜ್ಯದ ಕಾನೂನು- ಸುವ್ಯವಸ್ಥೆ ಬಿಗಡಾಯಿಸಿದೆ. ಲಾರಿ ತಂದು ಅಪಘಾತ ಮಾಡಿ, ಮಚ್ಚು- ಲಾಂಗುಗಳಿಂದ ಹತ್ಯೆ ಮಾಡುತ್ತಾರೆಂದರೆ ರಾಜ್ಯದಲ್ಲಿ ಪೊಲೀಸ್ ಇಲಾಖೆ ಇದ್ದು ಏನು ಪ್ರಯೋಜನ ಎಂದು ಟೀಕಿಸಿದರು. ಇದು ರಾಜ್ಯದ ಪೊಲೀಸ್ ಇಲಾಖೆ, ಗೃಹ ಸಚಿವರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳಿಗೊಂದು ದೊಡ್ಡ ಸವಾಲು ಎಂದು ತಿಳಿಸಿದರು.
ಅದೇ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆಗಿತ್ತು. ಆಗ ಡಿ.ಕೆ.ಶಿವಕುಮಾರ್ ಅವರು ನನ್ನ ಸೋದರರು (ಮೈ ಬ್ರದರ್ಸ್) ಎಂದಿದ್ದರು. ಈ ರೀತಿಯ ಮೈ ಬ್ರದರ್ಸ್ ನೀತಿ ಕರ್ನಾಟಕಕ್ಕೆ ಶಾಪ ಆಗುತ್ತಿದೆಯೇ ಎಂದು ಪ್ರಶ್ನೆಯನ್ನೂ ಮುಂದಿಟ್ಟರು.
ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಮಂಡ್ಯದಲ್ಲಿ ಸುರಕ್ಷಿತ ಸಾಮಗ್ರಿ ವಿತರಣೆ