ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ?: MLC ರವಿಕುಮಾರ್ ಪ್ರಶ್ನೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ ಇಲ್ಲವೇ ಎಂಬ ದೊಡ್ಡ ಯಕ್ಷಪ್ರಶ್ನೆ ನಿರ್ಮಾಣವಾಗಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ವಿಶ್ಲೇಷಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿಯವರ ಹತ್ಯೆ ಆಗಿದ್ದನ್ನು ಪ್ರಸ್ತಾಪಿಸಿದರು. ಕರ್ನಾಟಕವು ಒಂದು ರೀತಿ ಜಂಗಲ್ ರಾಜ್ಯವಾಗಿದೆ ಎಂದು ಟೀಕಿಸಿದರು. ರಾಜ್ಯದ ಗೃಹ ಸಚಿವರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ಕೇಳಿದರು. … Continue reading ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ?: MLC ರವಿಕುಮಾರ್ ಪ್ರಶ್ನೆ