ಬೆಂಗಳೂರು : ಎದೆಹಾಲು ಸಂಗ್ರಹಿಸುವ ಹಾಗೂ ಅದನ್ನು ಮಾರಾಟ ಮಾಡುವುದನ್ನು ನಿಷೇಧಿಸುವ ಕಾನೂನು ಎಲ್ಲಾದರೂ ಇದ್ದರೆ ತಿಳಿಸಿ ಎಂದು ಕರ್ನಾಟಕ ಹೈಕೋರ್ಟ್ ಕೇಳಿದೆ.ಭಾರತದಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಎದೆಹಾಲು ಮಾರಾಟ ಮಾಡುವ ಜಾಲವನ್ನು ಸದ್ಯದಲ್ಲೇ ವಿಸ್ತರಿಸುವುದನ್ನು ಆಕ್ಷೇಪಿಸಿ ಬೆಂಗಳೂರಿನ ಮುನೇಗೌಡ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು.
10 ವರ್ಷದಲ್ಲಿ ಕನ್ನಡಿಗರಿಗೆ ಎನ್ ಮಾಡಿದ್ರಿ ಅಂತ ತಿಳಿಸಿ : ಮೋದಿ ರಾಜ್ಯ ಪ್ರವಾಸಕ್ಕೆ ಪ್ರಿಯಾಂಕ್ ಖರ್ಗೆ ಕಿಡಿ
ಅರ್ಜಿದಾರರ ಪರ ವಾದಿಸಿದ ವಕೀಲ ಬಿ.ವಿಶ್ವೇಶ್ವರಯ್ಯ, ಕೆಲ ಬಹುರಾಷ್ಟ್ರೀಯ ಕಂಪನಿಗಳು ತಾಯಿ ಎದೆಹಾಲು ವಾಣಿಜ್ಯೀಕರಣ ಮಾಡುತ್ತಿವೆ. ಅನೈತಿಕವಾಗಿರುವ ಈ ವ್ಯಾಪಾರ ತಡೆಯಬೇಕು. ಆ ಸಂಬಂಧ ನಿರ್ದಿಷ್ಟ ಕಾನೂನು ರೂಪಿಸಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ತಾಯಿ ಎದೆಹಾಲು ಸಂಗ್ರಹಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಯಾವುದಾದರೂ ವಿಶೇಷ ಹಾಗೂ ನಿರ್ದಿಷ್ಟ ಘಟನೆ ನಡೆದಿರುವುದು ಕಂಡು ಬಂದಿದೆಯೇ? ಅದನ್ನು ತಡೆಯಲು ದೇಶ-ವಿದೇಶದಲ್ಲಿ ಯಾವುದಾದರೂ ಕಾನೂನುಗಳ ಇವೆಯೇ?,ಎಂದು ಪ್ರಶ್ನಿಸಿತು.
ಇದೊಂದು ಪ್ರಮುಖವಾದ ವಿಚಾರವಾಗಿದೆಯಾದರೂ, ಅದನ್ನು ನಿರ್ಬಂಧಿಸಲು ಯಾವುದಾದರೂ ಕ್ರಮ ಅಥವಾ ಕಾನೂನು ಇದ್ದರೆ ನಾವು ಅದನ್ನು ಆಧಾರವಾಗಿಟ್ಟುಕೊಂಡು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬಹುದು. ಹಾಗಾಗಿ, ಈ ಬಗ್ಗೆ ಸೂಕ್ತ ಅಧ್ಯಯನ ಮಾಡಿಕೊಂಡು ಬನ್ನಿ ಎಂದು ಅರ್ಜಿದಾರರಿಗೆ ಸೂಚಿಸಿತು.