Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ಶಿಕ್ಷಣ ಕ್ಷೇತ್ರದಲ್ಲಿ AI ಕ್ರಾಂತಿ: 20 ಲಕ್ಷ ಶಿಕ್ಷಕರಿಗೆ ತರಬೇತಿ ನೀಡಲಿದೆ ಮೈಕ್ರೋಸಾಫ್ಟ್!

21/02/2026 1:16 PM

BREAKING: ಟೀಮ್ ಇಂಡಿಯಾಗೆ ಬಿಗ್ ಶಾಕ್ : ನೆಟ್ಸ್‌ನಲ್ಲಿ ಮೊಹಮ್ಮದ್ ಸಿರಾಜ್‌ಗೆ ಗಾಯ!

21/02/2026 1:12 PM

BIG NEWS : ಶೀಘ್ರ ನಾಯಕತ್ವ ಗೊಂದಲ ನಿವಾರಣೆ ಮಾಡುತ್ತೇವೆ ಎಂದು ಖರ್ಗೆ ಹೇಳಿದ್ದಾರೆ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ!

21/02/2026 1:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದು ಜಾತಿಗಣತಿಯೋ.? ದ್ವೇಷಗಣತಿಯೋ..?: ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ
KARNATAKA

ಇದು ಜಾತಿಗಣತಿಯೋ.? ದ್ವೇಷಗಣತಿಯೋ..?: ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ

By kannadanewsnow0915/04/2025 2:12 PM

ಬೆಂಗಳೂರು: ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ ಅಂಶಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಇದು ಜಾತಿಗಣತಿಯೋ.. ದ್ವೇಷಗಣತಿಯೋ..? ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಲದೆ, ಹಿಂದೆ ಜಾತಿ ಗಣತಿ ವರದಿಯನ್ನು ವಿರೋಧಿಸಿದ್ದ ಡಿಸಿಎಂ ಡಿಕೆಶಿ ಈಗ ಯೂಟರ್ನ್ ಹೊಡೆದಿರುವ ಬಗ್ಗೆ ಕೇಂದ್ರ ಸಚಿವರು ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? ಎಂದು ಕೇಳಿದ್ದಾರೆ.

ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ. ಆ ವರದಿಯದ್ದು (!?) ಎನ್ನಲಾದ ಅಂಕಿ-ಅಂಶಗಳು ಎಲ್ಲೆಡೆ ತೇಲಾಡುತ್ತಿವೆ! ಯಾವುದೋ ಅಜ್ಞಾತ ಕೈ ಅದನ್ನು ವ್ಯವಸ್ಥಿತವಾಗಿ ತೇಲಿಬಿಟ್ಟಿದೆ!! ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕೆ-ಸಂಖ್ಯೆ ಅಷ್ಟೇ ಅಲ್ಲ, ವೀರಶೈವ ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಅಚ್ಚರಿ ಹುಟ್ಟಿಸಿದೆ ಎಂದು ಅವರು ಹೇಳಿದ್ದಾರೆ.

ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ? ಅಥವಾ ಸರಣಿ ದರ ಏರಿಕೆ, ಸಾಲುಸಾಲು ಭ್ರಷ್ಟ ಹಗರಣಗಳ ಮುಜುಗರದಿಂದ ಮುಖ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆಗೆ ಹೊರಳಿಸಲು ರೂಪಿಸಿದ ಸಂಚೇ? ಎಂದು ಶಂಕೆ ವ್ಯಕ್ತಪಡಿಸಿರುವ ಅವರು; ಇಡೀ ರಾಜ್ಯವು ಜಾತಿ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದರೆ, ಕಾಂಗ್ರೆಸ್ ಸರ್ಕಾರದ ಈ ನಡೆ ಕೆಲ ನಿರ್ದಿಷ್ಟ ಸಮುದಾಯಗಳ ಮೇಲೆ ರಾಜಕೀಯ, ಸಾಮಾಜಿಕವಾಗಿ ಹಗೆತನ ಸಾಧಿಸುವ ಮುಂದುವರಿದ ಅಧ್ಯಾಯವೇ? ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪೆನ್ನೂ ಪೇಪರ್ ಕೇಳಿದ್ದ ಡಿಕೆಶಿಗೆ ಟಾಂಗ್:

ಮುಖ್ಯಮಂತ್ರಿ ಕುರ್ಚಿ ಹತ್ತಲು ಚಾತಕ ಪಕ್ಷಿಯಂತೆ ನಿದ್ದೆಗೆಟ್ಟು, ‘ಒಂದ್‌ ಸಲ ನಂಗೂ ಪೆನ್ನೂ-ಪೇಪರ್‌ ಕೊಡಿ’ ಎಂದು ಸಮುದಾಯದ ಮುಂದೆ ಮಂಡಿಯೂರಿ ಗೋಗರೆದ ವ್ಯಕ್ತಿ ಸಿದ್ದಷಡ್ಯಂತ್ರ್ಯ ವರದಿಗೆ ಶಿರಬಾಗಿ ಸಮ್ಮತಿಸಿಸುವರೇ..? ಹಿಂದೊಮ್ಮೆ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಷೀಣದನಿಯಲ್ಲಿ ಗಣತಿ ವರದಿಯನ್ನು ವಿರೋಧಿಸಿದ್ದವರು ಈಗ ನಾಲಿಗೆ ಬದಲಿಸಿದ್ದಾರೆ!! ಶಿವ.. ಶಿವಾ.. ಎಂದು ಡಿಸಿಎಂ ಡಿಕೆಶಿಗೆ ಟಾಂಗ್ ನೀಡಿದ್ದಾರೆ.

‘ನಾನ್‌ ಒಂದು ನ್ಯಾಷನಲ್ ಪಾರ್ಟಿ ಸ್ಟೇಟ್ ಪ್ರೆಸಿಡೆಂಟ್ ಕಣ್ರೀ.. ನಂಗೆ ಎಲ್ರೂ ಸಮಾನ! ಈಗಷ್ಟೇ ಕಣ್‌ ತೆರೆದಿದ್ದೇವೆ. ಗಣತಿಗೆ ಯಾರ ವಿರೋಧವೂ ಇಲ್ಲ, ವಿರೋಧವಾದ್ರೂ ಯಾಕಿರುತ್ತೆ ಹೇಳಿ?ʼ ಎಂದ್ಹೇಳಿ ಪ್ರಶ್ನಿಸಿದ ಸುದ್ದಿಗಾರರನ್ನೇ ತಳ್ಳಿಕೊಂಡು ಪಲಾಯನಗೈದರಲ್ಲಾ..? ಪೆನ್ನೂ ಪೇಪರ್‌ ಕೊಟ್ಟ ಪಾಪಕ್ಕೆ ಒಕ್ಕಲಿಗ ಸಮಾಜ ಬೆಲೆ ತೆರುತ್ತಿದೆ. ಕುರ್ಚಿ ದುರಾಸೆಗೆ ಈ ವ್ಯಕ್ತಿ ಅದೇ ಪೆನ್ನಿನಲ್ಲಿ ಸಮಾಜದ ಮರಣಶಾಸನ ಬರೆಯುತ್ತಿದ್ದಾರೆ!! ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೆ; ಈ ವರದಿಗೆ ನನ್ನ ಒಪ್ಪಿಗೆ ಇಲ್ಲ. ಅನ್ಯಾಯದ ವಿರುದ್ಧ ಹೋರಾಟಕ್ಕೆ ನಾನು ಶತಸಿದ್ಧ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಹಿರಿಯ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್ ನಿಧನಕ್ಕೆ ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ ಸಂತಾಪ

BREAKING: ಹುಬ್ಬಳ್ಳಿಯಲ್ಲಿ ಬಿಹಾರದ ಯುವಕನಿಂದ ಬಾಲಕಿ ಹತ್ಯೆ ಪ್ರಕರಣ: ‘CID ತನಿಖೆ’ಗೆ ವಹಿಸಿ ರಾಜ್ಯ ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

BIG NEWS : ಶೀಘ್ರ ನಾಯಕತ್ವ ಗೊಂದಲ ನಿವಾರಣೆ ಮಾಡುತ್ತೇವೆ ಎಂದು ಖರ್ಗೆ ಹೇಳಿದ್ದಾರೆ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ!

21/02/2026 1:03 PM1 Min Read

BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ 5 ದಿನ ನ್ಯಾಯಾಂಗ ಬಂಧನ!

21/02/2026 12:54 PM1 Min Read

ALERT : `ಚಹಾ’ ಪ್ರಿಯರೇ ಗಮನಿಸಿ : ದಿನಕ್ಕೆ ನೀವು ಎಷ್ಟು ಕಪ್ `ಟೀ’ ಕುಡಿಯಬೇಕು ಗೊತ್ತಾ?

21/02/2026 12:50 PM2 Mins Read
Recent News

ಭಾರತದ ಶಿಕ್ಷಣ ಕ್ಷೇತ್ರದಲ್ಲಿ AI ಕ್ರಾಂತಿ: 20 ಲಕ್ಷ ಶಿಕ್ಷಕರಿಗೆ ತರಬೇತಿ ನೀಡಲಿದೆ ಮೈಕ್ರೋಸಾಫ್ಟ್!

21/02/2026 1:16 PM

BREAKING: ಟೀಮ್ ಇಂಡಿಯಾಗೆ ಬಿಗ್ ಶಾಕ್ : ನೆಟ್ಸ್‌ನಲ್ಲಿ ಮೊಹಮ್ಮದ್ ಸಿರಾಜ್‌ಗೆ ಗಾಯ!

21/02/2026 1:12 PM

BIG NEWS : ಶೀಘ್ರ ನಾಯಕತ್ವ ಗೊಂದಲ ನಿವಾರಣೆ ಮಾಡುತ್ತೇವೆ ಎಂದು ಖರ್ಗೆ ಹೇಳಿದ್ದಾರೆ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ!

21/02/2026 1:03 PM

‘ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ಮರು ಮಾತುಕತೆ ನಡೆಸಲು ಸಾಧ್ಯವಿಲ್ಲ’: ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದದ ಬಗ್ಗೆ ರಾಹುಲ್ ಗಾಂಧಿ

21/02/2026 12:57 PM
State News
KARNATAKA

BIG NEWS : ಶೀಘ್ರ ನಾಯಕತ್ವ ಗೊಂದಲ ನಿವಾರಣೆ ಮಾಡುತ್ತೇವೆ ಎಂದು ಖರ್ಗೆ ಹೇಳಿದ್ದಾರೆ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ!

By kannadanewsnow0521/02/2026 1:03 PM KARNATAKA 1 Min Read

ನವದೆಹಲಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ನಡುವೆ…

BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ 5 ದಿನ ನ್ಯಾಯಾಂಗ ಬಂಧನ!

21/02/2026 12:54 PM

ALERT : `ಚಹಾ’ ಪ್ರಿಯರೇ ಗಮನಿಸಿ : ದಿನಕ್ಕೆ ನೀವು ಎಷ್ಟು ಕಪ್ `ಟೀ’ ಕುಡಿಯಬೇಕು ಗೊತ್ತಾ?

21/02/2026 12:50 PM

ಸರ್ವರೋಗ ನಿವಾರಕ ಈ ‘ಮೆಂತ್ಯ’ : ಸರಿಯಾಗಿ ಬಳಸಿದ್ರೆ ಪರಿಪೂರ್ಣ ಜೀವನ ನಿಮ್ಮದಾಗುತ್ತೆ !

21/02/2026 12:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.