ಬೆಂಗಳೂರು : ರಾಜ್ಯದಲ್ಲಿ ಗೋದ್ರಾ ಹತ್ಯಾಕಾಂಡ ರೀತಿ ಘಟನೆ ಆಗುತ್ತದೆ ಎಂಬ ಕಾಂಗ್ರೆಸ್ ಎಮ್ ಎಲ್ ಸಿ ಬಿ ಕೆ ಹರಿಪ್ರಸಾದ್ ಅವರ ಹೇಳಿಕೆಗೆ ಇದೀಗ ಸರ್ಕಾರವೇ ಅಸ್ತ್ರ ಉಪಯೋಗಿಸಿದ್ದು ಎಂಎಲ್ಸಿ ಹರಿಪ್ರಸಾದರನ್ನು ಇದೀಗ ಪೊಲೀಸರು ವಿಚಾರಣೆಗೆ ಕರೆದಿದ್ದರೆ.
ಕೆಕೆ ಗೆಸ್ಟ್ ಹೌಸ್ ನಲ್ಲಿ ಹರಿಪ್ರಸಾದ್ ಅವರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದರು. ಹೇಳಿಕೆಯನ್ನು ಆಧರಿಸಿ ವಿಚಾರಣೆ ನಡೆಸಿರುವ ಸಿಸಿಬಿ ಪೊಲೀಸರು ಪೊಲೀಸರಿಗೆ ವಿವಿಐಪಿ ಟ್ರೀಟ್ಮೆಂಟ್ ಬೇಡ ಬೇಕಿದ್ದರೆ ಅರೆಸ್ಟ್ ಮಾಡಿ ಎಂದು ಎಂಎಲ್ಸಿ ಹರಿಪ್ರಸಾದ್ ಕಿಡಿ ಕಾರಿದ್ದಾರೆ. ಸರ್ಕಾರದ ನಡಿಗೆ ಎಂ ಎಲ್ ಸಿ ಬಿ ಕೆ ಹರಿಪ್ರಸಾದ್ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು ಇದು ಕಾಂಗ್ರೆಸ್ ಸರ್ಕಾರ ಅಥವಾ ಆರ್ ಎಸ್ ಎಸ್ ಸರ್ಕಾರವ ಎಂದು ಆಕ್ರೋಶ ಹೊರಹಾಕಿದ್ದಾರೆ.
ನಾನು ಯಾವ ಸರ್ಕಾರದಲ್ಲಿ ಇದ್ದೇನೆ ಎಂದು ಅರ್ಥವಾಗುತ್ತಿಲ್ಲ. ಮಂಪರು ಪರೀಕ್ಷೆ ಮಾಡಿ ಎಂದು ಪೊಲೀಸರಿಗೆ ಹೇಳಿದ್ದೇನೆ. ಸ್ಟೇಷನ್ ಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಿ.ನನ್ನ ಜೊತೆಗೆ ವಿಜಯೇಂದ್ರರನ್ನು ಒಬ್ಬರು ಪರೀಕ್ಷೆಗೆ ಒಳಪಡಿಸಲಿ ನನ್ನ ಪರಿಸ್ಥಿತಿಯ ಹೀಗಾದರೆ ಕಾಂಗ್ರೆಸ್ ಕಾರ್ಯಕರ್ತರ ಕಥೆ ಏನು?ಎಂದು ಅವರು ತಿಳಿಸಿದರು.
ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ ಸಂಸದ ಅನಂತ್ ಕುಮಾರ್ ಹೆಗಡೆಯವರು ಯಾವುದೇ ಕ್ರಮ ಆಗಿಲ್ಲ ನಾನು ಇವರ ಬೆದರಿಕೆಗಳಿಗೆಲ್ಲ ಜಗ್ಗುವುದಿಲ್ಲ ಅಂದು ಕೊಟ್ಟ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ ರಾಮಮಂದಿರಕ್ಕೆ ಹೋಗುವವರೆಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಬೆಂಗಳೂರಿನಲ್ಲಿ ಎಂಎಲ್ಸಿಬಿ ಕೇರಿ ಪ್ರಸಾದ್ ತಿಳಿಸಿದರು.
ಜನವರಿ 22ರಂದು ಅಯೋಧ್ಯೆಗೆ ತೆರಳುವ ಯಾತ್ರಿಗಳಿಗೆ ರಕ್ಷಣೆ ನೀಡಬೇಕು. ಗೋಧ್ರಾ ರೀತಿ ದುರಂತ ಸಂಭವಿಸುವ ಮಾಹಿತಿ ಇದೆ ಎಂಬ ಎಂಎಲ್ಸಿ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು ಇದೀಗ ಸಿಸಿಬಿ ಪೊಲೀಸರು ಎಂಎಲ್ಸಿಬಿ ಕೆ ಹರಿಪ್ರಸಾದ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ ಎಂದು ತಿಳಿದುಬಂದಿದೆ.
ಹರಿಪ್ರಸಾದ್ ಹೇಳಿದ್ದೇನು?
ಜನವರಿ 22ರಂದು ಅಯೋಧ್ಯೆಗೆ ತೆರಳುವವರಿಗೆ ಸರ್ಕಾರ ರಕ್ಷಣೆ ನೀಡಬೇಕು. ಗೋಧ್ರಾ ದುರಂತದ ರೀತಿ ಮತ್ತೆ ಅಪಾಯ ಸಂಭವಿಸುವ ಮಾಹಿತಿ ಇದೆ. ನಮಗೆ ಮಾಹಿತಿ ಸಿಗುತ್ತಿದೆ. ಹೀಗಾಗಿ ಅಯೋಧ್ಯೆಗೆ ತೆರಳುವವರಿಗೆ ರಕ್ಷಣೆ ಒದಗಿಸುವ ಕೆಲಸ ಆಗಬೇಕು ಎಂದು ಕಾಂಗ್ರೆಸ್ ಮುಖಂಡ, ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಸ್ಪೋಟಕ ಹೇಳಿಕೆ ನೀಡಿದ್ದರು . ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ ಧಾರ್ಮಿಕ ಕಾರ್ಯಕ್ರಮವಲ್ಲ ಇದೊಂದು ರಾಜಕೀಯ ಕಾರ್ಯಕ್ರಮ ಎಂದರು.
ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು. ಶಂಕರಾಚಾರ್ಯರು ಮೂಲ ಗುರುಗಳು. ಅವರ ರೀತಿ ಯಾವುದೇ ಧರ್ಮ ಗುರುಗಳು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದರೇ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು. ಆಗ ನಾವು ಆಮಂತ್ರಣ ಇಲ್ಲದೆಯೇ ಉದ್ಘಾಟನೆಗೆ ಹೋಗುತ್ತಿದ್ದೇವು. ಆದರೆ ಈಗ ನಡೆಯುತ್ತಿರುವುದು ರಾಜಕೀಯ ಕಾರ್ಯಕ್ರಮ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಉದ್ಘಾಟನೆಗೆ ಬರುತ್ತಿದ್ದಾರೆ. ಅವರೇನು ಧರ್ಮ ಗುರುಗಳಾ ಇದು ರಾಜಕೀಯ ಕಾರ್ಯಕ್ರಮ. ಅವರ ಧರ್ಮ ಯಾವುದು ಅಂತ ಗೊತ್ತಾಗಿಲ್ಲ ಎಂದು ಹೇಳಿದರು.