ಬೆಳಗಾವಿ : ಈ ಬಾರಿಯ ಚಳಿಗಾಲ ಅಧಿವೇಶನದಲ್ಲಿ ಹೊಸ ಮುಖ್ಯಮಂತ್ರಿ ಬರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದು, ನಾನು ರಾಜೀನಾಮೆ ನೀಡುತ್ತೇನೆ ಹೊಸ ಸಿಎಂ ಬರುತ್ತಾರೆ ಎಂದು ಹೇಳೋಕೆ ವಿಜಯೇಂದ್ರ ಏನು ಜ್ಯೋತಿಷಿನ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು.
ಇಂದು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಸರಾ ಮುಗಿದ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂದರು ನಾನು ರಾಜೀನಾಮೆ ಕೊಟ್ನಾ? ಅವರ ತಂದೆ ಯಡಿಯೂರಪ್ಪ ಪೋಕ್ಸೋ ಪ್ರಕರಣದಲ್ಲಿ ಬೇಲ್ ಮೇಲೆ ಹೊರಗಡೆ ಇದ್ದಾರೆ. ನನಗೆ ರಾಜೀನಾಮೆ ಕೇಳೋಕೆ ಬಿವೈ ವಿಜಯೇಂದ್ರ ಗೆ ಯಾವ ನೈತಿಕತೆ ಇದೆ ಎಂದು ಕಿಡಿ ಕಾರಿದರು.
ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನ್ಯಾಯಯುತ ತೆರಿಗೆ ಪಾಲು ವಿತರಣೆ ಪಾಲಿಸುತ್ತಿಲ್ಲ. ಈ ಬಗ್ಗೆ ರಾಜ್ಯಕ್ಕೆ ಅನ್ಯಾಯ ಆದರೂ ಬಿಜೆಪಿ ಸಂಸದರು ಕೇಂದ್ರ ಸರ್ಕಾರವನ್ನು ಕೇಳುತ್ತಿಲ್ಲ. ಕೋಮುವಾದಿ ವಿಚಾರದಲ್ಲಿ ಮಾತ್ರ ಬಿಜೆಪಿ ಸಂಸದರು ಪ್ರತಿಭಟನೆ ನಡೆಸುತ್ತಾರೆ ಎಂದು ಸಿಎಂ. ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ವೇಳೆ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ನಮ್ಮ ಬೇಡಿಕೆಗೆ ತಕ್ಕಷ್ಟು ತೆರಿಗೆ ಹಣ ನೀಡಿಲ್ಲ, ಬದಲಾಗಿ ಕಡಿಮೆ ನೀಡಿದೆ. ನ್ಯಾಯಯುತವಾಗಿ ಬರಬೇಕಾದ ಹಣ ಕರ್ನಾಟಕ ರಾಜ್ಯಕ್ಕೆ ಬಂದಿಲ್ಲ. ಈ ಸಂಬAಧ ಕರ್ನಾಟಕ ಜನರು, ಧ್ವನಿ ಎತ್ತಬೇಕು. ಅನ್ಯಾಯಕ್ಕೆ ಒಳಗಾದ ರಾಜ್ಯಗಳೂ ಕೂಡ ಧ್ವನಿ ಎತ್ತಬೇಕು. ಒಕ್ಕೂಟ ವ್ಯವಸ್ಥೆ ಮೇಲೆ ನಂಬಿಕೆ ಇದೆ. ಹೀಗಾಗಿ ನ್ಯಾಯಯುತ ಪಾಲು ಕೊಟ್ಟರೆ ನಮಗೆ ಅನುಕೂಲ ಎಂದರು.