Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸೈಬರ್ ವಂಚನೆ ವಿರುದ್ಧ ಪೊಲೀಸರಿಂದ ಆಪರೇಷನ್ ಆಕ್ಟೋಪಸ್ : 32 ಬ್ಯಾಂಕ್ ಉದ್ಯೋಗಿಗಳು ಸೇರಿ 52 ಮಂದಿ ಅರೆಸ್ಟ್.!

21/04/2026 9:19 AM

ಜಪಾನ್‌ನಿಂದ ದಶಕಗಳ ಹಳೆಯ ನೀತಿ ಬದಲು: ಮಾರಕ ಶಸ್ತ್ರಾಸ್ತ್ರಗಳ ರಫ್ತಿನ ಮೇಲಿದ್ದ ನಿಷೇಧ ರದ್ದು; ರಕ್ಷಣಾ ಕ್ಷೇತ್ರದಲ್ಲಿ ಹೊಸ ಪರ್ವ!

21/04/2026 9:19 AM

​ಹೋರ್ಮುಜ್ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಅಮೆರಿಕ-ಇರಾನ್ ನಡುವೆ ನಿರ್ಣಾಯಕ ಸಂಧಾನ? ಸಂಘರ್ಷದ ನಡುವೆಯೂ ಶಾಂತಿ ಮಾತುಕತೆಗೆ ಒಲವು!

21/04/2026 9:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಅವಿರೋಧ ಆಯ್ಕೆ
KARNATAKA

BREAKING: ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಅವಿರೋಧ ಆಯ್ಕೆ

By kannadanewsnow0920/01/2026 4:06 PM

ಬೆಂಗಳೂರು : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ತಿಳಿಸಿದರು.

ಬೆಂಗಳೂರಿನಲ್ಲಿಂದು ನಡೆದ ಸಭಾದ ಕಾರ್ಯಕಾರಿಣಿ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು ಎಂದರು.

ಇಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲು ಎಲ್ಲ ಸದಸ್ಯರೂ ಒಮ್ಮತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆಯಿತು.

ಕಳೆದ 13 ವರ್ಷಗಳಿಂದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಈಶ್ವರ ಬಿ ಖಂಡ್ರೆ ಅವರು ಕಳೆದ ಒಂದು ವರ್ಷದಿಂದ ಹಿರಿಯ ಉಪಾಧ್ಯಕ್ಷರ ಪ್ರಭಾರ ಹೊಣೆಯನ್ನೂ ನಿಭಾಯಿಸಿದ್ದರು.

ತಮ್ಮ ಪೂಜ್ಯ ತಂದೆ ಭೀಮಣ್ಣ ಖಂಡ್ರೆಯವರ ಮಾರ್ಗದಲ್ಲೇ ನಡೆದು, ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿರುವ ಈಶ್ವರ ಬಿ ಖಂಡ್ರೆ ಈಗ ಮಹಾ ಸಭಾದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಸಮಾಜಕ್ಕೆ ಹೊಸ ಭರವಸೆ ಮೂಡಿಸಿದ್ದಾರೆ.

ತಮ್ಮನ್ನು ಮಹಾಸಭಾದ ನೂತನ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಕಾರ್ಯಕಾರಿ ಸಮಿತಿಗೆ ಧನ್ಯವಾದ ಅರ್ಪಿಸಿದ ಅವರು, ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆಯಲ್ಲ. ಹೀಗಾಗಿ ಸಮಾಜದ ಎಲ್ಲ ಒಳ ಪಂಗಡಗಳನ್ನು ಒಗ್ಗೂಡಿಸುವುದು ಅತ್ಯಂತ ಮುಖ್ಯವಾಗಿದ್ದು, ತಾವು ಈ ನಿಟ್ಟಿನಲ್ಲಿ ಶ್ರಮಿಸುವುದಾಗಿ ತಿಳಿಸಿದರು.

ವೀರಶೈವ ಲಿಂಗಾಯತ ಸಮಾಜ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಈ ನಾಡಿನ ಅಭಿವೃದ್ಧಿಗೆ ನೀಡಿರುವ ಕೊಡುಗೆ ಅನುಪಮವಾದ್ದು ಎಂದು ತಿಳಿಸಿದ ಅವರು, ನಮ್ಮ ಸಮಾಜದಲ್ಲೂ ಶೇ.40ರಿಂದ 50ರಷ್ಟು ಬಡವರಿದ್ದು, ಶೇ.30ಕ್ಕಿಂತ ಹೆಚ್ಚು ಜನರು ತೀವ್ರ ಹಿಂದುಳಿದಿದ್ದಾರೆ. ಸಾಮಾಜಿಕ ನ್ಯಾಯ ಎಲ್ಲರಿಗೂ ದೊರಕಬೇಕು. ಹೀಗಾಗಿ ಎಲ್ಲರಿಗೂ ಸಮಾನ ನ್ಯಾಯ ದೊರಕಿಸಲು ಸಭಾ ವತಿಯಿಂದ ನೂತನ ಅಧ್ಯಕ್ಷನಾಗಿ ಶ್ರಮಿಸುವುದಾಗಿ ಹೇಳಿದರು.

1000 ವಿದ್ಯಾರ್ಥಿನಿಯರ ಹಾಸ್ಟೆಲ್ ನಿರ್ಮಿಸಲು ಬದ್ಧ – ಖಂಡ್ರೆ

ಬೆಂಗಳೂರು ನಗರದಲ್ಲಿ 1000 ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯ ನಿರ್ಮಾಣ ಮಾಡಲು ಮುಂದಿನ ಮಾರ್ಚ್ ತಿಂಗಳೊಳಗೆ ಶಂಕುಸ್ಥಾಪನೆ ನೆರವೇರಿಸಿ, ಒಂದೂವರೆ ವರ್ಷದಲ್ಲಿ ಪೂರ್ಣಗೊಳಿಸುವ ಸಂಕಲ್ಪ ಮಾಡಿರುವುದಾಗಿ ತಿಳಿಸಿದರು.ಈಗಾಗಲೇ ಹಲವು ಜಿಲ್ಲಾ ಕೇಂದ್ರಗಳಲ್ಲಿ ವೀರಶೈವ ಲಿಂಗಾಯತ ಭವನ ಇದ್ದು, ಭವನ ಇಲ್ಲದ ಜಿಲ್ಲೆಗಳಲ್ಲಿ ಭವನ ನಿರ್ಮಾಣ ಮಾಡಲೂ ಶ್ರಮಿಸುವುದಾಗಿ, ಈ ಭವನದಲ್ಲಿ ಸಮುದಾಯದ ಪ್ರತಿಭಾವಂತರಿಗೆ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ತರಬೇತಿ ನೀಡಲಾಗುವುದು ಎಂದರು.

ಪಂಚಾಚಾರ್ಯರ, ಜಗದ್ಗುರುಗಳ, ಮಠಾಧಿಪತಿಗಳ, ಹರ, ಚರ ಗುರು ಮೂರ್ತಿಗಳ, ವಿರಕ್ತರ ಮಾರ್ಗದರ್ಶನ ಹಾಗೂ ಆಶೀರ್ವಾದದೊಂದಿಗೆ ಕೆಲಸ ಮಾಡುವುದಾಗಿ ತಿಳಿಸಿದ ಈಶ್ವರ ಖಂಡ್ರೆ, ಒಗ್ಗಟ್ಟಿನಲ್ಲಿ ಬಲವಿದೆ, ವಿಘಟನೆಯಲ್ಲಿ ದೌರ್ಬಲ್ಯವಿದೆ ಎಂದ ಅವರು, ಎಲ್ಲ ಜಾತಿ, ಜನಾಂಗದವರನ್ನೂ ಜೊತೆಯಲ್ಲಿ ತೆಗೆದುಕೊಂಡು ಶ್ರಮಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ತಮ್ಮ ಸಮಾಜಕ್ಕೆ ತನ್ನದೇ ಆದ ಸುದೀರ್ಘ ಇತಿಹಾಸ ಇದೆ, ಭವ್ಯತೆ ಇದೆ, ಶ್ರೇಷ್ಠತೆಯೂ ಇದೆ. ಮಾನವ ಧರ್ಮಕ್ಕೆ ಜಯವಾಗಲೀ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಸಾರಿದ ನಮ್ಮ ಹಿರಿಯರು ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ್ದಾರೆ. ಲೋಕ ಕಲ್ಯಾಣಕ್ಕಾಗಿ, ಜನರ ಒಳಿತಿಗಾಗಿ, ಸಮಾಜದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ್ದಾರೆ ಎಂದರು.

1904ರಲ್ಲಿ ಅಂದರೆ 122 ವರ್ಷಗಳ ಹಿಂದೆ ಪರಮಪೂಜ್ಯ ಹಾನಗಲ್ ಕುಮಾರೇಶ್ವರ ಮಹಾಸ್ವಾಮೀಜಿ ಅವರು, ನಮ್ಮ ಸಮಾಜದ ಎಲ್ಲರನ್ನೂ ಒಗ್ಗೂಡಿಸುವ ಪ್ರಯತ್ನ ಮಾಡಿದ ಫಲವಾಗಿ ಜನ್ಮ ತಾಳಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರುಗಳಾಗಿ ಸಿರಸಂಗಿ ಲಿಂಗರಾಜದೇಸಾಯರು, ರಾಜಾ ಲಖಮನಗೌಡರು, ಫ.ಗು. ಹಳಕಟ್ಟಿಯವರು, ಬಂಥನಾಳ ಸಂಗನ ಬಸವ ಸ್ವಾಮಿಗಳು, ಶತಾಯುಷಿ ಡಾ. ಶಿವಕುಮಾರ ಮಹಾಸ್ವಾಮೀಜಿ, ಭೀಮಣ್ಣ ಖಂಡ್ರೆ, ಶಾಮನೂರು ಶಿವಶಂಕರಪ್ಪ ಮೊದಲಾದವರು ಸೇವೆ ಸಲ್ಲಿಸಿದ್ದಾರೆ. ಈ ಸ್ಥಾನದಲ್ಲಿ ಕಾರ್ಯ ನಿರ್ವಹಿಸುವ ಅವಕಾಶ ದೊರೆತಿರುವುದು ತಮ್ಮ ಸೌಭಾಗ್ಯ ಎಂದರು.

ಸುದ್ದಿಗೋಷ್ಠಿಯಲ್ಲಿ ಗಣೇಶ್ ಶಾಮನೂರು, ಪ್ರಭಾಕರ ಕೋರೆ, ರಾಜಣ್ಣ, ವೀರಣ್ಣ ಚರಂತಿ ಮಠ, ಮಹಾರಾಷ್ಟ್ರ, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ ಘಟಕದ ಅಧ್ಯಕ್ಷರು, ಪ್ರತಿನಿಧಿಗಳು ಪಾಲ್ಗೊಂಡಿದ್ದರು.

BIG NEWS: SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಮಹತ್ವದ ಕ್ರಮ: ಪರೀಕ್ಷಾ ಸಮಯ ಬದಲಾವಣೆ

Share. Facebook Twitter LinkedIn WhatsApp Email

Related Posts

BREAKING : ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 18 ಲಕ್ಷ ಮೌಲ್ಯದ ಗಾಂಜಾ ವಶ : ಆರೋಪಿ ಅರೆಸ್ಟ್

21/04/2026 9:06 AM1 Min Read

ALERT : ಮಹಿಳೆಯರೇ ಎಚ್ಚರ : ಕೂದಲು ಮಾರಿ ಪಾತ್ರೆ ಖರೀದಿಸುತ್ತೀರಾ? ತಪ್ಪದೇ ಇದನ್ನು ಓದಲೇಬೇಕು.!

21/04/2026 8:53 AM2 Mins Read

BIG NEWS : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಇಂದಿನಿಂದ ಮುಖ್ಯ ಶಿಕ್ಷಕರ ಹುದ್ದೆಗೆ `ಬಡ್ತಿ’ಪ್ರಕ್ರಿಯೆ ಆರಂಭ

21/04/2026 8:24 AM2 Mins Read
Recent News

ಸೈಬರ್ ವಂಚನೆ ವಿರುದ್ಧ ಪೊಲೀಸರಿಂದ ಆಪರೇಷನ್ ಆಕ್ಟೋಪಸ್ : 32 ಬ್ಯಾಂಕ್ ಉದ್ಯೋಗಿಗಳು ಸೇರಿ 52 ಮಂದಿ ಅರೆಸ್ಟ್.!

21/04/2026 9:19 AM

ಜಪಾನ್‌ನಿಂದ ದಶಕಗಳ ಹಳೆಯ ನೀತಿ ಬದಲು: ಮಾರಕ ಶಸ್ತ್ರಾಸ್ತ್ರಗಳ ರಫ್ತಿನ ಮೇಲಿದ್ದ ನಿಷೇಧ ರದ್ದು; ರಕ್ಷಣಾ ಕ್ಷೇತ್ರದಲ್ಲಿ ಹೊಸ ಪರ್ವ!

21/04/2026 9:19 AM

​ಹೋರ್ಮುಜ್ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಅಮೆರಿಕ-ಇರಾನ್ ನಡುವೆ ನಿರ್ಣಾಯಕ ಸಂಧಾನ? ಸಂಘರ್ಷದ ನಡುವೆಯೂ ಶಾಂತಿ ಮಾತುಕತೆಗೆ ಒಲವು!

21/04/2026 9:12 AM

BREAKING : ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 18 ಲಕ್ಷ ಮೌಲ್ಯದ ಗಾಂಜಾ ವಶ : ಆರೋಪಿ ಅರೆಸ್ಟ್

21/04/2026 9:06 AM
State News
KARNATAKA

BREAKING : ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 18 ಲಕ್ಷ ಮೌಲ್ಯದ ಗಾಂಜಾ ವಶ : ಆರೋಪಿ ಅರೆಸ್ಟ್

By kannadanewsnow5721/04/2026 9:06 AM KARNATAKA 1 Min Read

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗುಂತ ಕೊಲಮ್ಮನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ನಾಯಕನಹಟ್ಟಿ ಪೊಲೀಸರು ಯಶಸ್ವಿಯಾಗಿದ್ದಾರೆ.…

ALERT : ಮಹಿಳೆಯರೇ ಎಚ್ಚರ : ಕೂದಲು ಮಾರಿ ಪಾತ್ರೆ ಖರೀದಿಸುತ್ತೀರಾ? ತಪ್ಪದೇ ಇದನ್ನು ಓದಲೇಬೇಕು.!

21/04/2026 8:53 AM

BIG NEWS : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಇಂದಿನಿಂದ ಮುಖ್ಯ ಶಿಕ್ಷಕರ ಹುದ್ದೆಗೆ `ಬಡ್ತಿ’ಪ್ರಕ್ರಿಯೆ ಆರಂಭ

21/04/2026 8:24 AM

ಪ್ರತಿ ತಂದೆಯೂ ತನ್ನ ಮಗಳಿಗೆ ಕಲಿಸಲೇಬೇಕಾದ 5 ಪ್ರಮುಖ ಜೀವನ ಕೌಶಲಗಳಿವು!

21/04/2026 7:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.