ಕರ್ನಾಟಕ ಸೇರಿ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಲ್ಲೂ ಐಸಿಸ್ ಉಗ್ರ ಸಂಘಟನೆ ಸಕ್ರಿಯ – Kannada News Now


India

ಕರ್ನಾಟಕ ಸೇರಿ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಲ್ಲೂ ಐಸಿಸ್ ಉಗ್ರ ಸಂಘಟನೆ ಸಕ್ರಿಯ

ನವದೆಹಲಿ: ಕೇಂದ್ರ ಗೃಹ ಇಲಾಖೆ ರಾಜ್ಯಸಭೆಗೆ ಶಾಕಿಂಗ್ ಮಾಹಿತಿ ನೀಡಿದ್ದು, ಕರ್ನಾಟಕ, ಕೇರಳ, ತೆಲಂಗಾಣ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ಜಮ್ಮು-ಕಾಶ್ಮೀರದಲ್ಲಿ ಐಸಿಸ್‌ ಉಗ್ರರು ಹೆಚ್ಚು ಸಕ್ರಿಯರಾಗಿದ್ದಾರೆ ಎಂದು ತಿಳಿಸಿದೆ.

ಇದು ರಾಷ್ಟ್ರೀಯ ತನಿಖಾ ದಳದ ತನಿಖೆಯಿಂದ ಬಯಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ರಾಜ್ಯಸಭೆಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿದೆ. ಗೃಹ ಇಲಾಖೆ ರಾಜ್ಯ ಸಚಿವ ಕಿಶನ್‌ ರೆಡ್ಡಿ, ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನು ಆಗಸ್ಟ್ 5, 2019ರಿಂದ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಉಗ್ರ ಉಪಟಳ ಕಡಿಮೆಯಾಗಿದೆ ಎಂದು ಸಚಿವ ಕಿಶನ್‌ ರೆಡ್ಡಿ ತಿಳಿಸಿದ್ದಾರೆ. ಅದಕ್ಕೂ ಮುನ್ನ ಹೆಚ್ಚು ಉಗ್ರರ ದಾಳಿ ನಡೆಯುತ್ತಿತ್ತು ಎಂದು ವರದಿಯಾಗಿದೆ.