ಬೆಂಗಳೂರು: 58ನೇ ಬೆಂಗಳೂರು ವಿಶ್ವವಿದ್ಯಾಲಯದಿಂದ ಇಸ್ರೋ ಅಧ್ಯಕ್ಷ ಸೋಮನಾಥ್ ಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿತ್ತು. ಇಂತಹ ಗೌರವ ಡಾಕ್ಟರೇಟ್ ಅನ್ನು ಇಂದು ಅವರಿಗೆ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರದಾನ ಮಾಡಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದಿಂದ 58ನೇ ಘಟಿಕೋತ್ಸವವನ್ನು ಕೆಲ ದಿನಗಳ ಹಿಂದೆ ನಡೆಸಲಾಗಿತ್ತು. ಅಂದು ಪದವಿ ಪ್ರಮಾಣಪತ್ರ, ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿತ್ತು. ಆದ್ರೇ ಬೆಂಗಳೂರು ವಿವಿಯ ಘಟಿಕೋತ್ಸವದಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಭಾಗಿಯಾಗಿ ಗೌರವ ಡಾಕ್ಟರೇಟ್ ಅನ್ನು ಸ್ವೀಕರಿಸೋದಕ್ಕೆ ಸಾಧ್ಯವಾಗಿರಲಿಲ್ಲ.
ಇಂದು ರಾಜಭವನದಲ್ಲಿ ರಾಜ್ಯಪಾಲತ ಥಾವರ್ ಚಂದ್ ಗೆಹ್ಲೋಟ್ ಅವರು ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ಅನ್ನು ಪ್ರದಾನ ಮಾಡಿದರು.