ಬೆಂಗಳೂರು : ‘ಪುಷ್ಪ’ ಸೇರಿದಂತೆ ಹಲವು ಸೂಪರ್ ಹಿಟ್ ತೆಲುಗು ಸಿನಿಮಾಗಳನ್ನು ನೀಡಿರುವ ‘ಮೈತ್ರಿ ಮೂವಿ ಮೇಕರ್ಸ್’ ನಿರ್ಮಾಣ ಸಂಸ್ಥೆಯ ಮೇಲೆ ಐಟಿ ರೇಡ್ ನಡೆದಿದ್ದು, ಇಂದು ಕೂಡ ದಾಳಿ ಮುಂದುವರೆದಿದೆ.
ಬೆಂಗಳೂರು ಕಚೇರಿ ಸೇರಿ 15 ಕಡೆ ಐಟಿ ಅಧಿಕಾರಿಗಳು ರೇಡ್ ಮಾಡಿದ್ದು, ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಮೂವರು ಪಾಲುದಾರರಿದ್ದು, ಮೂವರು ನಿರ್ಮಾಪಕರಿಗೆ ಸೇರಿದ್ದೆನ್ನಲಾದ ಹದಿನೈದು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸಿದ್ದಾರೆ.
ಬೆಂಗಳೂರು ಸೇರಿದಂತೆ ಹಲವು ಕಡೆ ಐಟಿ ದಾಳಿ ನಡೆದಿದ್ದು, ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ‘ಮೈತ್ರಿ ಮೂವಿ ಮೇಕರ್ಸ್’ ಪುಷ್ಪ, ರಂಗಸ್ಥಳಂ, ಶ್ರೀಮಂತುಡು ಮುಂತಾದ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನಿರ್ಮಾಣ ಮಾಡಿದೆ.
BREAKING NEWS : ಮೈಸೂರಿನಲ್ಲಿ ಬೆಳ್ಳಂ ಬೆಳಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರ ದಾಳಿ
BIGG NEWS : ಬೆಳಗಾವಿಯಲ್ಲಿ ಡಿ.19 ರಿಂದ ವಿಧಾನಮಂಡಲ ಅಧಿವೇಶನ : ನಾಲ್ಕು ಹೊಸ ಮಸೂದೆ ಮಂಡನೆ ಸಾಧ್ಯತೆ