ಸುಭಾಷಿತ :

Friday, April 3 , 2020 6:11 AM

ಐಟಿ ದಾಳಿ : ರಶ್ಮೀಕಾ ಮಂದಣ್ಣ ನಿವಾಸದಲ್ಲಿ ಪತ್ತೆಯಾದ ದಾಖಲೆ ಇಲ್ಲದ ಮೊತ್ತ ಎಷ್ಟು!?


Tuesday, January 21st, 2020 10:00 am

ಮಡಿಕೇರಿ : ಬಹುಭಾಷಾ ನಟಿ ರಶ್ಮಿಕಾ ಮಂದಣ್ಣರ ನಿವಾಸದ ಮೇಲೆ ಕೆಲ ದಿನಗಳ ಹಿಂದೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು.  ವಿರಾಜಪೇಟೆ ಸಮೀಪದ ಕಕ್ಲೂರಿನ ನಿವಾಸದಲ್ಲಿ ದಾಳಿ ನಡೆಸಿದ್ದ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಅಧಿಕಾರಿಗಳು ದಾಖಲೆ ಪತ್ರಗಳನ್ನು ಜಾಲಾಡಿದ್ದಾರೆ. ದಾಳಿಯ ವೇಳೆ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದ್ದು, ತೆರಿಗೆ ವಂಚನೆ ಮಾಡಿದ್ದಾರೆ ಎನ್ನಲಾಗಿದೆ.

ರಶ್ಮಿಕಾ ಅವರು ಟಾಲಿವುಡ್ ಹಾಗೂ ಕಾಲಿವುಡ್ ಸಿನಿಮಾಗಳಲ್ಲಿ ಬಹುಬೇಡಿಕೆಯ ನಟಿಯಾಗಿದ್ದು, ದೊಡ್ಡ ಪ್ರಮಾಣದ ಸಂಭಾವನೆಯನ್ನು ನಗದು ರೂಪದಲ್ಲಿ ಪಡೆದಿದ್ದಾರೆ. ಈ ಮೂಲಕ ತೆರಿಗೆ ವಂಚಿಸಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ಶೋಧ ಕಾರ್ಯದಲ್ಲಿ ದಾಖಲೆ ಇಲ್ಲದ 25 ಲಕ್ಷ ರೂ.ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಜೊತೆಗೆ ರಶ್ಮಿಕಾ ಅವರ ಆಸ್ತಿ ಪತ್ರಗಳು ಹಾಗೂ ಅವರ ಪೋಷಕರ ಬ್ಯಾಂಕ್ ಖಾತೆಯ ವಿವರಗಳನ್ನೂ ಐಟಿ ಅಧಿಕಾರಿಗಳು ಪರಿಶೀಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜನವರಿ 17 ಬೆಳಗ್ಗೆ ಐಟಿ ಅಧಿಕಾರಿಗಳ ಎರಡು ತಂಡ ರಶ್ಮಿಕಾ ನಿವಾಸದಲ್ಲಿ ಹಾಗೂ ಮಂದಣ್ಣ ಸೆರೆನಿಟಿಹಾಲ್ ನಲ್ಲಿ ಶೋಧ ಕಾರ್ಯ ನಡೆಸಿದ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions