ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳನ್ನು ನಿರ್ವಹಣೆ ಮಾಡುವುದರ ಜೊತೆಗೆ, ಇಡೀ ಆಸ್ಪತ್ರೆಯ ಆಡಳಿತದ ನಿರ್ವಹಣೆ ಮಾಡುವ ನಾಯಕತ್ವ ಹೊಂದಿರಬೇಕು ಎಂಬುದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ( Minister Dr K Sudhakar ) ಅವರ ಕನಸು. ಬೆಂಗಳೂರಿನ ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ( Indian Institute of Management – IIMB ) ನೆರವಿನಿಂದ ಸಚಿವರ ಕನಸು ಈಗ ಸಾಕಾರಗೊಂಡಿದೆ.

ಇಂದು ಐಐಎಂಬಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಹೊಸ ʼಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ʼ ಕೋರ್ಸ್‌ಗೆ ಚಾಲನೆ ನೀಡಿದ ಬಳಿಕ ಮಾತನಾಡಿದಂತ ಸಚಿವ ಡಾ.ಕೆ.ಸುಧಾಕರ್‌, ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳಿಗೆ ತಪಾಸಣೆ, ಚಿಕಿತ್ಸೆಯ ಸೇವೆ ನೀಡುತ್ತಾರೆ. ಆದರೆ ಆಸ್ಪತ್ರೆಯ ಸ್ವಚ್ಛತೆಯ ನಿರ್ವಹಣೆ, ಔಷಧಿ ಪೂರೈಕೆ, ಯಂತ್ರೋಪಕರಣಗಳ ಸುಸ್ಥಿತಿ ಕಾಪಾಡುವುದು, ಸಿಬ್ಬಂದಿ ನಿರ್ವಹಣೆ ಸೇರಿದಂತೆ ಹಲವಾರು ಕಾರ್ಯಗಳಿಗೆ ಆಡಳಿತದ ಅನುಭವ ಅತಿ ಅಗತ್ಯ. ಆಸ್ಪತ್ರೆಯೊಂದರ ಸಮಗ್ರ ಪ್ರಗತಿಗೆ ವೈದ್ಯರೇ ಮುಂದಾಳತ್ವ ವಹಿಸಿ ನಿರ್ವಹಣೆ ಮಾಡುವುದು ಮುಖ್ಯ ಎಂದರು.

BIG NEWS: ‘ಸರ್ಕಾರಿ ಶಾಲಾ’ ಮಕ್ಕಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಶಾಲಾ ವಾಹನ’ ಖರೀದಿಗೆ ಅನುಮತಿ

ಒಂದು ವೃತ್ತಿಪರ ಕೋರ್ಸ್‌ ಆರಂಭಿಸಬೇಕೆಂದು ಸಚಿವರು ಐಐಎಂಬಿಯ ನಿರ್ದೇಶಕ ಪ್ರೊ.ರಿಷಿಕೇಶ ಟಿ.ಕೃಷ್ಣನ್‌ ಹಾಗೂ ಡಾ.ದೇವಿ ಶೆಟ್ಟಿ ಅವರೊಂದಿಗೆ ಈ ಹಿಂದೆ ಚರ್ಚೆ ನಡೆಸಿದ್ದರು. ವೈದ್ಯರು ಸೇರಿದಂತೆ ವೈದ್ಯಕೀಯ ಕ್ಷೇತ್ರದ ಎಲ್ಲರೂ ಆಡಳಿತದ ಕೌಶಲ್ಯ ಪಡೆಯಬೇಕು. ಮುಖ್ಯವಾಗಿ ಸರ್ಕಾರಿ ಆರೋಗ್ಯ ಕ್ಷೇತ್ರ ಪರಿಣಾಮಕಾರಿಯಾಗಿ ಕೆಲಸ ಮಾಡಲು ಈ ಕೌಶಲ್ಯ ತರಬೇತಿ ಅಗತ್ಯ ಎಂದು ಸಚಿವರು ಪ್ರತಿಪಾದಿಸಿದ್ದರು. ಅದರಂತೆ, ಈಗ ಕೋರ್ಸ್‌ ಆರಂಭವಾಗಿದೆ ಎಂದರು.

ಐಐಎಂಬಿಯ ಪರಿಣತ ಉಪನ್ಯಾಸಕರು ಈ ಕೋರ್ಸ್‌ ನಡೆಸಿಕೊಡಲಿದ್ದು, ವೈದ್ಯರಿಗೆ ಸೂಕ್ತ ತರಬೇತಿ ನೀಡಲಿದ್ದಾರೆ. ಇದರಿಂದಾಗಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಆಡಳಿತ ನಡೆಸುವ ಪರಿಣತಿಯನ್ನು ವೈದ್ಯರು ಹೊಂದಬಹುದಾಗಿದೆ ಎಂದು ಹೇಳಿದರು.

Health tips : ಕೇವಲ ‘ಅರಿಶಿಣ’ ಮಾತ್ರವಲ್ಲ, ಅದರ ನೀರಿನಲ್ಲಿಯೂ ಇವೆ ಅನೇಕ ಆರೋಗ್ಯ ಪ್ರಯೋಜನಗಳು | Turmeric Water benefits

Share.
Exit mobile version