ಚಾಮರಾಜನಗರಕ್ಕೆ ಬಂದ್ರೆ ಅಧಿಕಾರ ಹೋಗುತ್ತೆ ಅನ್ನೋದು ಮೂಢನಂಬಿಕೆ, ನನ್ನ ಅಧಿಕಾರ ಈಗಲೂ, ಭವಿಷ್ಯದಲ್ಲೂ ಭದ್ರ: ಸಿಎಂ

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, … Continue reading ಚಾಮರಾಜನಗರಕ್ಕೆ ಬಂದ್ರೆ ಅಧಿಕಾರ ಹೋಗುತ್ತೆ ಅನ್ನೋದು ಮೂಢನಂಬಿಕೆ, ನನ್ನ ಅಧಿಕಾರ ಈಗಲೂ, ಭವಿಷ್ಯದಲ್ಲೂ ಭದ್ರ: ಸಿಎಂ