Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು, ಸೇರ್ಪಡೆ ತಿದ್ದುಪಡಿಗೆ ಮತ್ತೆ ಅವಕಾಶ | Ration Card

18/05/2025 5:09 AM

BIG NEWS : ರಾಜ್ಯದಲ್ಲಿ 2025-26ನೇ ಸಾಲಿನ 1-10ನೇ ತರಗತಿ `ಮಾರಾಟ ಪಠ್ಯಪುಸ್ತಕಗಳ’ ಬೆಲೆ ನಿಗದಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

18/05/2025 5:07 AM

BIG NEWS : ಇಂದಿನಿಂದ 2024-25ನೇ ಸಾಲಿನ `ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ’ : ನೋಂದಣಿ ಕುರಿತು ಇಲ್ಲಿದೆ ಮಾಹಿತಿ

18/05/2025 5:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ವಿದ್ಯಾವಂತರೇ’ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ‘ದುರಂತ’ : ಸಿಎಂ ಸಿದ್ದರಾಮಯ್ಯ ಬೇಸರ
KARNATAKA

‘ವಿದ್ಯಾವಂತರೇ’ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ‘ದುರಂತ’ : ಸಿಎಂ ಸಿದ್ದರಾಮಯ್ಯ ಬೇಸರ

By kannadanewsnow0724/08/2024 12:09 PM

ಬೆಂಗಳೂರು: ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು.

ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ “21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ” ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯ್ತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಾಂಧೀಜಿ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮನಕ್ಕೆ ಮಾತ್ರ ಸೀಮಿತವಾಗಿಲ್ಲ. ಈಗಿನ ಕಾಲಕ್ಕೂ ಪ್ರಸ್ತುತವಾಗಿವೆ.‌ ಗಾಂಧೀಜಿಯವರು ಶಾಂತಿ, ಸತ್ಯ, ನ್ಯಾಯ ಮತ್ತು ಬ್ರಾತೃತ್ವವನ್ನು ಬದುಕಿನುದ್ದಕ್ಕೂ ಆಚರಿಸಿಕೊಂಡು ಬಂದಿದ್ದಾರೆ. ಇಡೀ ವಿಶ್ವವೇ ಪರಸ್ಪರ ಪ್ರೀತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮ್ಮದಿಯಿಂದ ಇರಬಹುದು ಎಂದರು.

ಮನುಷ್ಯ ತನ್ನ ನೆಮ್ಮದಿಗಾಗಿ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎನ್ನುವ ಸ್ಟೀಫನ್ ಹಾಕಿಂಗ್ ಅವರ ಮಾತನ್ನು ಪ್ರಸ್ತಾಪಿಸಿ, ಮನುಷ್ಯ ಮನುಷ್ಯರ ನಡುವೆ ಸಹಿಷ್ಣುತೆ ರೂಢಿಸಿಕೊಳ್ಳದಿದ್ದರೆ ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕವೆಂಪು ಅವರ ವಿಶ್ವ ಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ ಎಂದರು.

ಪ್ರಕೃತಿ ನಮ್ಮ ಅಗತ್ಯಗಳನ್ನು ಈಡೇರಿಸುತ್ತದೆಯೇ ಹೊರತು, ದುರಾಸೆಗಳನ್ನು ಅದು ಪೂರೈಸುವುದಿಲ್ಲ ಎನ್ನುವುದು ಗಾಂಧಿಯವರ ನಂಬಿಕೆಯಾಗಿತ್ತು. ಕೇರಳದ ವಯನಾಡ್ ಮತ್ತು ರಾಜ್ಯದ ನಾನಾ ಕಡೆ ನಡೆಯುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣವಾಗಿದೆ ಎಂದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ ಅವರ ಕಾಲಗುಣದಿಂದ ರಾಜ್ಯಕ್ಕೆ ಬರಗಾಲ ಬರುತ್ತದೆ ಎಂದು ಸಾರ್ವಜನಿಕ ವ್ಯಕ್ತಿಗಳೇ ಮೌಡ್ಯ ಬಿತ್ತುವ ಕುಟಿಲ ಪ್ರಯತ್ನ ಮಾಡಿದ್ದರು. ಆದರೆ ಈಗ ಸಿಕ್ಕಾಪಟ್ಟೆ ಮಳೆ ಬರುತ್ತಿದೆ

ಬಹಳ ಮಂದಿ ಶಿಕ್ಷಿತರೇ ಕಂದಾಚಾರ, ಕರ್ಮ ಸಿದ್ಧಾಂತ, ಮೌಡ್ಯವನ್ನು ಆಚರಿಸುತ್ತಾರೆ. ಇದಕ್ಕೆ ಸರಿಯಾದ ವೈಜ್ಞಾನಿಕ ಶಿಕ್ಷಣದ ಕೊರತೆಯೇ ಕಾರಣ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಕರ್ಮ ಸಿದ್ಧಾಂತವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದರು. ಆದರೆ ಈಗಿನ ಕೆಲವು ಶಿಕ್ಷಿತರೇ ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ನೆಹರೂ ಅವರು ವೈಜ್ಞಾನಿಕ ಮತ್ತು ವೈಚಾರಿಕ ಮಾರ್ಗದಲ್ಲಿ ಸಮಾಜವನ್ನು ಸನ್ನದ್ದಗೊಳಿಸಿ ದೇಶವನ್ನು ಮುನ್ನಡೆಸುತ್ತಿದ್ದರು ಎಂದರು.

ಸರ್ವರನ್ನೂ ಒಳಗೊಳ್ಳುವ ಮತ್ತು ಅಹಿಂಸೆ ಗಾಂಧಿಯವರ ಮಾರ್ಗವಾಗಿತ್ತು. ಇದನ್ನು ಯುವಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ.

ದೇಶದ ಶೇ85 ರಷ್ಟು ಆಸ್ತಿ ಶೇ1 ಶ್ರೀಮಂತರ ಕೈಗೆ ಸೇರುತ್ತಿದೆ. ಇದು ಅಪಾಯಕಾರಿ. ಈ ಆರ್ಥಿಕ ಅಸಮಾನತೆ ಹೋಗಲಾಡಿಸಲು ಗಾಂಧಿಯವರು ವಿಚಾರಗಳಲ್ಲಿ ಮಾರ್ಗಗಳಿವೆ ಎಂದರು.

ಮಹಾತ್ಮಗಾಂಧಿಯವರು‌ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ನ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸುತ್ತೇವೆ ಎಂದರು.

ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಈಡೇರಿಸಬೇಕಾಗಿದೆ.‌ ಗಾಂಧಿಯವರ ಆಶಯದಂತೆ ರಾತ್ರಿ 12 ಗಂಟೆಗೂ ನಮ್ಮ ಹೆಣ್ಣು ಮಕ್ಕಳು ನಿರ್ಭಯದಿಂದ ಓಡಾಡುವಂತಾಗಬೇಕಿದೆ ಎಂದರು.

ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ರಾಮಚಂದ್ರ ರಾಹಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ಕಾರ್ಯಾಧ್ಯಕ್ಷರಾದ ವಿಶುಕುಮಾರ್ , ನವದೆಹಲಿ ಸ್ಮಾರಕ ನಿಧಿ ಅಧ್ಯಕ್ಷರಾದ ಸಂಜೋಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು

It is a tragedy that educated people are becoming more and more casteists: Siddaramaiah
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು, ಸೇರ್ಪಡೆ ತಿದ್ದುಪಡಿಗೆ ಮತ್ತೆ ಅವಕಾಶ | Ration Card

18/05/2025 5:09 AM2 Mins Read

BIG NEWS : ರಾಜ್ಯದಲ್ಲಿ 2025-26ನೇ ಸಾಲಿನ 1-10ನೇ ತರಗತಿ `ಮಾರಾಟ ಪಠ್ಯಪುಸ್ತಕಗಳ’ ಬೆಲೆ ನಿಗದಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

18/05/2025 5:07 AM1 Min Read

BIG NEWS : ಇಂದಿನಿಂದ 2024-25ನೇ ಸಾಲಿನ `ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ’ : ನೋಂದಣಿ ಕುರಿತು ಇಲ್ಲಿದೆ ಮಾಹಿತಿ

18/05/2025 5:06 AM1 Min Read
Recent News

BIG NEWS : ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು, ಸೇರ್ಪಡೆ ತಿದ್ದುಪಡಿಗೆ ಮತ್ತೆ ಅವಕಾಶ | Ration Card

18/05/2025 5:09 AM

BIG NEWS : ರಾಜ್ಯದಲ್ಲಿ 2025-26ನೇ ಸಾಲಿನ 1-10ನೇ ತರಗತಿ `ಮಾರಾಟ ಪಠ್ಯಪುಸ್ತಕಗಳ’ ಬೆಲೆ ನಿಗದಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

18/05/2025 5:07 AM

BIG NEWS : ಇಂದಿನಿಂದ 2024-25ನೇ ಸಾಲಿನ `ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ’ : ನೋಂದಣಿ ಕುರಿತು ಇಲ್ಲಿದೆ ಮಾಹಿತಿ

18/05/2025 5:06 AM

BIG NEWS: ರಾಜ್ಯದ `ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರ ಮುಂಬಡ್ತಿ’ಯಲ್ಲಿ ಶೇ.4 ರಷ್ಟು ಮೀಸಲಾತಿ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

18/05/2025 5:03 AM
State News
KARNATAKA

BIG NEWS : ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು, ಸೇರ್ಪಡೆ ತಿದ್ದುಪಡಿಗೆ ಮತ್ತೆ ಅವಕಾಶ | Ration Card

By kannadanewsnow5718/05/2025 5:09 AM KARNATAKA 2 Mins Read

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮಾರ್ಚ್ 31 ರವರೆಗೆ ಅವಕಾಶ ನೀಡಲಾಗಿದೆ.…

BIG NEWS : ರಾಜ್ಯದಲ್ಲಿ 2025-26ನೇ ಸಾಲಿನ 1-10ನೇ ತರಗತಿ `ಮಾರಾಟ ಪಠ್ಯಪುಸ್ತಕಗಳ’ ಬೆಲೆ ನಿಗದಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

18/05/2025 5:07 AM

BIG NEWS : ಇಂದಿನಿಂದ 2024-25ನೇ ಸಾಲಿನ `ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ’ : ನೋಂದಣಿ ಕುರಿತು ಇಲ್ಲಿದೆ ಮಾಹಿತಿ

18/05/2025 5:06 AM

BIG NEWS: ರಾಜ್ಯದ `ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರ ಮುಂಬಡ್ತಿ’ಯಲ್ಲಿ ಶೇ.4 ರಷ್ಟು ಮೀಸಲಾತಿ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

18/05/2025 5:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.