ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಜನರಿಗೆ ಇಷ್ಟವಾಗಿಲ್ಲ. ಅದರ ವಿರುದ್ಧ ಮಾತನಾಡುತ್ತಿರೋ ಬಿಜೆಪಿಗರಿಗೆ ಜನರು ಮತ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸೋದು ಒಳ್ಳೇದು. ಸಿಎಂ ಸಿದ್ಧರಾಮಯ್ಯ ಈ ಬಗ್ಗೆ ಮರು ಪರಿಶೀಲನೆ ಮಾಡಬೇಕು ಅಂತ ಕಾಂಗ್ರೆಸ್ ನಾಯಕ ಎಂ.ಲಕ್ಷ್ಮಣ್ ಹೇಳಿದ್ದಾರೆ.
ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ನಿಲ್ಲಿಸುವುದು ಒಳ್ಳೇದು, ಜನರಿಗೆ ಕಾಂಗ್ರೆಸ್ ಗ್ಯಾರಂಟಿಗಳು ಇಷ್ಟ ಅಗಲ್ಲ. ಇಷ್ಟವಿಲ್ಲವೆಂದು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದರು.
ಗ್ಯಾರಂಟಿ ವಿರುದ್ಧ ಮಾತನಾಡಿರೋ ಬಿಜೆಬಿಗೆ ಲೋಕಸಭಾ ಚುನಾವಣೆಯಲ್ಲಿ ಜನರು ಬೆಂಬಲ ನೀಡಿದ್ದಾರೆ. ಹೀಗಾಗಿ ನಮ್ಮ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಬಗ್ಗೆ ಮರು ಪರಿಶೀಲನೆ ಅತ್ಯಗತ್ಯವಿದೆ. ನಾನು ಸಿಎಂ ಸಿದ್ಧರಾಮಯ್ಯ ಅವರಲ್ಲಿ ಕೋರುತ್ತೇನೆ ದಯವಿಟ್ಟು ಗ್ಯಾರಂಟಿ ಯೋಜನೆಗಳ ಬಗ್ಗೆ ಮರು ಪರಿಶೀಲಿಸಿ ಎಂದು ಹೇಳಿದರು.
ನಾನು ಗ್ಯಾರಂಟಿ ಯೋಜನೆ ನಿಲ್ಲಿಸಿಯೇ ಬಿಡಿ ಅಂತ ಹೇಳುತ್ತಿಲ್ಲ. ಯಾರಿಗೆ ತಲುಪಬೇಕೋ ಅವರಿಗೆ ತಲುಪಲಿ. ಬಡವರು, ಮಧ್ಯಮ ವರ್ಗದವರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಮರು ಪರಿಶೀಲಿಸಬೇಕು ಅಂತ ಹೇಳುತ್ತಿದ್ದೇನೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮತ್ತೊಂದು ಖಾಸಗಿ ವೀಡಿಯೋ ಕೇಸ್: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ
‘ಶಿವಮೊಗ್ಗ ಮಹಾನಗರ ಪಾಲಿಕೆ’ ಆಯುಕ್ತರಾಗಿ ‘ಡಾ.ಕವಿತಾ ಯೋಗಪ್ಪನವರ್’ ನೇಮಕ